: ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರು
ಕಾರವಾರ : ಚಾಲಕನ ನಿಯಂತ್ರಣ ತಪ್ಪಿ ಆಕ್ಸಿಜನ್ ಟ್ಯಾಂಕರ್ ಗಳನ್ನು ಸಾಗಿಸುತ್ತಿದ್ದ ವಾಹನ ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆದಿದೆ. ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66 ರ ಶಿರೂರು ಗ್ರಾಮದ ಬಳಿ ಈ ಅವಘಡ ಸಂಭವಿಸಿದ್ದು,ಅದೃಷ್ಟವಶಾತ್ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮದಿಂದ ಆಕ್ಸಿಜನ್ ತುಂಬಿದ್ದ ಟ್ಯಾಂಕರ್‌ಗಳನ್ನು ಹೊತ್ತ 407 ವಾಹನವು ಕಾರವಾರಕ್ಕೆ ಆಗಮಿಸುತ್ತಿತ್ತು.ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಮಗುಚಿ ಬಿದ್ದಿದ್ದು,ಚಾಲಕ ಹಾಗೂ ಕ್ಲೀನರ್ ಹೊರಬರಲಾಗದೇ ಲಾರಿಯಡಿಯಲ್ಲಿ ಸಿಲುಕಿಕೊಂಡಿದ್ದರು.
ಈ ವೇಳೆ ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಟ್ಟು ಲಾರಿಯಲ್ಲಿ ಸಿಲುಕಿದ್ದವರನ್ನು ಹೊರತೆಗೆದಿದ್ದು,ಆಂಬ್ಯುಲೆನ್ಸ್ ಸಹಾಯದಿಂದ ಅಂಕೋಲಾ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ.