Today, s pictures -ಶಿರಸಿ ಮಾರ್ಗದಲ್ಲಿ ಅಪಘಾತ ಬಿದಿರುಹಿಂಡುಗಳಿಗೆ ನುಗ್ಗಿದ ಕಾರುಗಳು

ಮೂರು ಕಾರುಗಳ ನಡುವೆ ಅಪಘಾತ- ಶಿರಸಿ ಸಿದ್ದಾಪುರ ರಸ್ತೆಯ ಅಜ್ಜಿಬಳ (ಜಾಗನಳ್ಳಿ) ಬಳಿ ನಡೆದ ಮೂರು ಕಾರುಗಳ ಅಪಘಾತದಲ್ಲಿ ಕಾರುಗಳು ಬಿದಿರುಹಿಂಡುಗಳನ್ನು ನುಗ್ಗಿ ಜಖಂ ಗೊಂಡಿವೆ. ಕಾರಿನಲ್ಲಿ ಪ್ರಯಾಣಿಸುತಿದ್ದವರಿಗೆ ಗಾಯಗಳಾಗಿವೆ. ಮಾರುತಿ ಓಮಿನಿ,ಟಾಟಾ ಜೆಸ್ಟ್ ಮತ್ತು ಮಾರುತಿ 800 ಕಾರುಗಳು ಅಪಘಾತಕ್ಕೊಳಗಾದ ವಾಹನಗಳಾಗಿವೆ.

10 ವರ್ಷಗಳ ಹೋರಾಟಕ್ಕೂ ಸಿದ್ಧ ಆದರೆ ಹೊಸ ಕೃಷಿ ಕಾನೂನು ಜಾರಿಗೆ ಬಿಡುವುದಿಲ್ಲ: ಭಾರತ್ ಬಂದ್ ಗೂ ಮುನ್ನ ರಾಕೇಶ್ ಟಿಕಾಯತ್ 

ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ, ಕಳೆದ 10 ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ಭಾರತೀಯ ಕಿಸಾನ್ ಯೂನಿಯನ್ ನ ನಾಯಕ ರಾಕೇಶ್ ಟಿಕಾಯತ್ ಭಾರತ್ ಬಂದ್ ಬಗ್ಗೆ ಮಾತನಾಡಿದ್ದಾರೆ.

Rakesh Tikait

ಚಂಡೀಗಢ: ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ, ಕಳೆದ 10 ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ಭಾರತೀಯ ಕಿಸಾನ್ ಯೂನಿಯನ್ ನ ನಾಯಕ ರಾಕೇಶ್ ಟಿಕಾಯತ್ ಭಾರತ್ ಬಂದ್ ಬಗ್ಗೆ ಮಾತನಾಡಿದ್ದು ಇನ್ನೂ 10 ವರ್ಷಗಳ ಹೋರಾಟಕ್ಕೂ ಸಿದ್ಧರಿದ್ದೇವೆ ಆದರೆ ಹೊಸ ಕೃಷಿ ಕಾನೂನು ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ರೈತರು, ಪ್ರಮುಖವಾಗಿ ಪಂಜಾಬ್, ಹರ್ಯಾಣ, ಉತ್ತರ ಪ್ರದೇಶದ ಕೃಷಿಕರು ಕೇಂದ್ರ ಸರ್ಕಾರ ಜಾರಿ ತರಲು ಉದ್ದೇಶಿಸಲಾಗಿರುವ ಕೃಷಿ ಕಾನೂನನ್ನು ವಿರೋಧಿಸಿ ಅದನ್ನು ವಾಪಸ್ ಪಡೆಯುವಂತೆ ಕಳೆದ 10 ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.   

ಕೃಷಿ ಕಾನೂನನ್ನು ವಿರೋಧಿಸಿ 10 ತಿಂಗಳಿನಿಂದ ಪ್ರತಿಭಟನೆ ನಡೆಯುತ್ತಿದೆ. ನಾವು 10 ವರ್ಷಗಳ ಕಾಲ ಹೋರಾಟಕ್ಕೂ ಸಿದ್ಧರಿದ್ದೇವೆ ಎಂಬ ಸಂದೇಶವನ್ನು ಸರ್ಕಾರ ಕಿವಿ ತೆರೆದು ಆಲಿಸಬೇಕು ಎಂದು ಪಾಣಿಪತ್ ನಲ್ಲಿ ಟಿಕಾಯತ್ ಕಿಸಾನ್ ಮಹಾಪಂಚಾಯತ್ ನ್ನು ಉದ್ದೇಶಿಸಿ ಮಾತನಾಡುತ್ತ ಹೇಳಿದ್ದಾರೆ.

ಭಾರತ ಸರ್ಕಾರ ಹೊಸ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಲೇಬೇಕಿದೆ ಎಂದು ರಾಕೇಶ್ ಟಿಕಾಯತ್ ಹೇಳಿದ್ದು, ರೈತರು ತಮ್ಮ ಬೇಡಿಕೆ ಈಡೇರಿಸದೇ ಇದ್ದಲ್ಲಿ ಪ್ರತಿಭಟನೆ ತೀವ್ರಗೊಳಿಸುವ ಸಂದೇಶವನ್ನು ರವಾನೆ ಮಾಡಿದ್ದಾರೆ.

” ರೈತರು ತಮ್ಮ ಟ್ರ್ಯಾಕ್ಟರ್ ಗಳನ್ನು ಸಿದ್ಧವಾಗಿರಿಸಿಕೊಂಡಿರಬೇಕು ದೆಹಲಿಯೆಡೆಗೆ ತೆರಳಲು ಯಾವುದೇ ಕ್ಷಣದಲ್ಲಿ ಅದು ಬೇಕಾಗುತ್ತದೆ ಎಂದು” ಟಿಕಾಯತ್ ರೈತರಿಗೆ ಕರೆ ನೀಡಿದ್ದಾರೆ. (kpc)

ರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆ,-

ಮಂಜುನಾಥ್ ಎಂ ನಾಯ್ಕ್ ಉತ್ತರಪ್ರದೇಶದ ಲಕ್ನೋದಲ್ಲಿ ನಡೆಯಲಿರುವ 46ನೇ ಸೀನಿಯರ್ ರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಉತ್ತರ ಕನ್ನಡದ ಸಿದ್ದಾಪುರ ತಾಲೂಕಿನ ಮಂಜುನಾಥ್ ಎಂ. ನಾಯ್ಕ್ ಯೋಗ ಶಿಕ್ಷಕರಾ ಗಿದ್ದಾರೆ

ರಾಜ್ಯ ರೈತ ಸಂಘ ಮತ್ತು ಇತರ ಸಂಘಟನೆಗಳ ಆಯೋಜನೆಯಲ್ಲಿ ಸಿದ್ಧಾಪುರದಲ್ಲಿ
ಪ್ರತಿಭಟನಾ ಮೆರವಣಿಗೆ, ಮನವಿ ಅರ್ಪಣೆಗಳು ನಡೆದವು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *