Samajamukhi.Net – ಇಂದಿನ ದೊಡ್ಡ ಸುದ್ದಿಗಳು-ಕನ್ನಯ್ಯ ಕುಮಾರ್ ಕಾಂಗ್ರೆಸ್‌ ಸೇರ್ಪಡೆ, ಶಾಸಕ ಜಿಗ್ನೇಶ್ ಮೆವಾನಿ ಸೇರ್ಪಡೆ ಸದ್ಯಕ್ಕಿಲ್ಲ!

ನಾಡಹಬ್ಬ ಮೈಸೂರು ದಸರಾ ಉದ್ಘಾಟಕರ ಹೆಸರು ಘೋಷಿಸಿದ ಸಿಎಂ ಬೊಮ್ಮಾಯಿ..

ರಾಜ್ಯದ ಹಿರಿಯ ಮುತ್ಸದ್ಧಿ, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣರವರಿಗೆ ಆಹ್ವಾನ ನೀಡಲಾಗುವುದು ಎಂದಿದ್ದಾರೆ. ಅಕ್ಟೋಬರ್​​ 7ರಿಂದ ನಾಡಹಬ್ಬ ದಸರಾಗೆ ಚಾಲನೆ ಸಿಗಲಿದೆ..

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಆಚರಣೆಗೆ ಈಗಾಗಲೇ ಎಲ್ಲ ರೀತಿಯ ಸಕಲ ತಯಾರಿ ಆರಂಭಗೊಂಡಿದೆ. ಈ ಸಲದ ಉದ್ಘಾಟಕರು ಯಾರು ಎಂಬ ಗೊಂದಲಕ್ಕೆ ಕೊನೆಗೂ ಸಿಎಂ ಬಸವರಾಜ್ ಬೊಮ್ಮಾಯಿ ತೆರೆ ಎಳೆದಿದ್ದಾರೆ.

ಈ ಬಾರಿಯ ದಸರಾ ಉತ್ಸವದ ಉದ್ಘಾಟಕರಾಗಿ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದ್ದು, ಅಧಿಕೃತವಾಗಿ ಆಹ್ವಾನ ನೀಡುವ ನಿರ್ಧಾರ ಪ್ರಕಟಿಸಿದೆ. ಆ ಮೂಲಕ ರಾಜಕೀಯ ವ್ಯಕ್ತಿಯನ್ನು ಉದ್ಘಾಟಕರಾಗಿ ಆಯ್ಕೆ ಮಾಡಿದೆ.ಸುದ್ದಿಗೋಷ್ಠಿ ವೇಳೆ ಮಾಹಿತಿ ಹಂಚಿಕೊಂಡ ಸಿಎಂ ಬೊಮ್ಮಾಯಿ

ಗೃಹ ಕಚೇರಿ ಕೃಷ್ಣಾದಲ್ಲಿ ದಸರಾ ಉತ್ಸವ ಕುರಿತು ನಡೆದ ಸಭೆ ನಂತರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ದಸರಾ ಮಹೋತ್ಸವ ಉದ್ಘಾಟನೆ ಮಾಡಲು ಮತ್ತು ಚಾಮುಂಡೇಶ್ವರಿ ಪೂಜೆ ಮಾಡಲು ಈ ಬಾರಿ ಎಸ್ಎಂ ಕೃಷ್ಣ ಅವರನ್ನು ಮುಖ್ಯ ಅತಿಥಿಗಳಾಗಿ ಆಯ್ಕೆ ಮಾಡಲಾಗಿದೆ. ‌ಕೃಷ್ಣ ಅವರಿಂದ ಚಾಮುಂಡೇಶ್ವರಿ ಪೂಜೆ ಮಾಡಲು ಮತ್ತು ದಸರಾ ಮಹೋತ್ಸವದ ಉದ್ಘಾಟಕರಾಗಿ ಅವರನ್ನು ಆಹ್ವಾನಿಸಲು ನಿರ್ಧರಿಸಿದ್ದೇವೆ ಎಂದರು.

  • ರಾಜಕೀಯ ವ್ಯಕ್ತಿಗಳನ್ನು ದಸರಾ ಉದ್ಘಾಟನೆಗೆ ಆಹ್ವಾನ ಮಾಡುವ ಪರಂಪರೆ ಇಲ್ಲ, ಎಸ್.ಎಂ ಕೃಷ್ಣ ಕೇವಲ ರಾಜಕಾರಣಿಯಲ್ಲ, ಅವರು ಮುತ್ಸದಿಗಳು ಮತ್ತು ಹಲವಾರು ಹುದ್ದೆಗಳಲ್ಲಿ ಇದ್ದಾಗ ಈ ಭಾಗದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಅವರ ಯೋಗದಾನ ಬಹಳ ದೊಡ್ಡದಿದೆ ಹೀಗಾಗಿ ಅವರನ್ನು ದಸರಾ ಉದ್ಘಾಟಕರಾಗಿ ಆಮಂತ್ರಿಸಲು ಸರ್ಕಾರ ತೀರ್ಮಾನ ಮಾಡಿದೆ ಎಂದು ಕೃಷ್ಣ ಆಯ್ಕೆಯನ್ನು ಸಿಎಂ ಸಮರ್ಥಿಸಿಕೊಂಡರು. ಅಕ್ಟೋಬರ್​​ 7ರಿಂದ ನಾಡಹಬ್ಬ ದಸರಾಗೆ ಚಾಲನೆ ಸಿಗಲಿದೆ. (etbk)

ಶಿರಸಿ ಗ್ರಾಮೀಣ ಪೊಲೀಸರ
ವಿಶೇಷ ಕಾರ್ಯಾಚರಣೆ:

ಇಬ್ಬರು ಅಂತರಜಿಲ್ಲಾ ದೇವಸ್ಥಾನ ಹಾಗೂ ಬೈಕ್ ಕಳ್ಳರ ಬಂಧನ

ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚಿಗೆ ಬಂಡಲ್ ಗ್ರಾಮದ ಕಲ್ಲೇಶ್ವರ ದೇವಸ್ಥಾನ ಹಾಗೂ ಓಣಿ ವಿಗ್ನೇಶ್ವರ ಗ್ರಾಮದ ಗಣಪತಿ ದೇವಸ್ಥಾನದಲ್ಲಿ ಕಳ್ಳತನ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಆರೋಪಿತರು ಗಳಾದ

1) ಲಿಂಗರಾಜು @ ಉಮೇಶ್ ತಂದೆ ರಾಮೇಗೌಡ,32ವರ್ಷ, ಜಮ್ಮನಹಳ್ಳಿ ತಾಲೂಕು ಸಕಲೇಶಪುರ ಜಿಲ್ಲೆ ಹಾಸನ

2) ಪ್ರವೀಣ್ ಕುಮಾರ್ ತಂದೆ ವೆಂಕಟರಮಣ ನಾಯ್ಕ್ ,ಪ್ರಾಯ 25 ವರ್ಷ,ಕೊಂಡಲಿಗಿ ಪೋಸ್ಟ್ ಮಲವಳ್ಳಿ ತಾಲೂಕು ಶಿರಸಿ, ಜಿಲ್ಲೆ ಉತ್ತರ ಕನ್ನಡ ಇವರನ್ನು ದಸ್ತಗಿರಿ ಮಾಡಲಾಗಿರುತ್ತದೆ..

ಪ್ರಕರಣದ ಒಂದನೇ ಆರೋಪಿ ಲಿಂಗರಾಜು ಈತನು ಮುಂಡಗೋಡ, ಹಳೇಬೀಡು, ಹುಬ್ಬಳ್ಳಿ,ವಿಜಾಪುರ,ಗದಗ,ಗೋಕಾಕ ಗಳಲ್ಲಿ ಬೈಕ್ ಕಳವು ಮಾಡಿದ್ದನ್ನು ಒಪ್ಪಿಕೊಂಡಿದ್ದು.

ಮುಂಡಗೋಡ ಹಾಗೂ ಹಳೇಬೀಡು ಪೊಲೀಸ್ ಠಾಣಾ ಪ್ರಕರಣಗಳಿಗೆ ಸಂಬಂಧಿಸಿದ ಒಟ್ಟು 03 ಬೈಕುಗಳನ್ನು ಅಮಾನತು ಪಡಿಸಿಕೊಳ್ಳಲಾಗಿರುತ್ತದೆ..

ಈತನ ಮೇಲೆ ಈ ಹಿಂದೆ ಬೇಲೂರು ಠಾಣೆಯಲ್ಲಿ ಕೊಲೆ ಪ್ರಕರಣ ಹಾಗೂ ಮಂಕಿ,ಮೂಡಬಿದಿರೆ, ಬಿಜಾಪುರಗಳಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿದ್ದು ಇರುತ್ತದೆ..3 ನೇ ಆರೋಪಿ ಅಜಿತ್, ಸಾಂಗ್ಲಿ, ಮಹಾರಾಷ್ಟ್ರ ರಾಜ್ಯ ಈತನು ತಲೆಮಾರೆಸಿಕೊಂಡಿರುತ್ತಾನೆ.. ತನಿಖೆ ಮುಂದುವರೆದಿದೆ…

ಈ ಕಾರ್ಯಾಚರಣೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಶಿವಪ್ರಕಾಶ್ ದೇವರಾಜು IPS, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಎಸ್.ಬದರೀನಾಥ್, ಶಿರಸಿ ಉಪವಿಭಾಗದ DySP ರವರಾದ ಶ್ರೀ ರವಿ ಡಿ. ನಾಯ್ಕ್, ಶಿರಸಿ ವೃತ್ತದ CPI ರಾಮಚಂದ್ರ ನಾಯಕ ರವರ ಮಾರ್ಗದರ್ಶನದಲ್ಲಿ ಶಿರಸಿ ಗ್ರಾಮೀಣ ಠಾಣೆಯ PSI ಈರಯ್ಯ, ಯಲ್ಲಾಪುರ ಠಾಣಾ ಮಹಿಳಾ PSI ಪ್ರಿಯಾಂಕಾ ಸಿಬ್ಬಂದಿಗಳಾದ ಮಹದೇವ್ ನಾಯ್ಕ್,ಚೇತನ್ ಕುಮಾರ್,ಗಣಪತಿ,ಸುರೇಶ ಕಟ್ಟಿ, ಚೇತನ್,
ಮಹಮ್ಮದ್ ಶಫಿ ಶೇಕ್,ಕೋಟೇಶ್,ಬಸವರಾಜ್ ಹಗರಿ, ವಿನೋದ್ ರೆಡ್ಡಿ,ಬಸವರಾಜ್ ಡಿ. ಕೆ.,ಸುಧೀರ್ ಮಡಿವಾಳ ಪಾಲ್ಗೊಂಡಿದ್ದರು..

ನಾಳೆ ಸಮಾಜದ ಸಭೆ- ಸಿದ್ದಾಪುರ:

ಶ್ರೀಶ್ರೀಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆದೇಶದಂತೆ ಸೆ.29 ರ ಬುಧವಾರ ಬೆಳಿಗ್ಗೆ 11 ಗಂಟೆಗೆ ಸಿದ್ದಾಪುರ ಬಾಲಭವನ ದಲ್ಲಿ ಶ್ರೀರಾಮಕ್ಷೇತ್ರ ಸೇವಾ ಸಮಿತಿಯನ್ನು ರಚಿಸುವ ಸಭೆ ನಡೆಯಲಿದೆ. ಪ್ರತಿ ಗ್ರಾಮದಲ್ಲಿ ಹಿಂದುಳಿದ ವರ್ಗದವರನ್ನು ಸೇರಿಸಿಕೊಂಡು ಸಮಿತಿ ರಚಿಸಲು ಗುರುಗಳು ಆದೇಶಿಸಿದ್ದಾರೆ ಎಂದು ಶ್ರೀರಾಮಕ್ಷೇತ್ರ ಸೇವಾ ಸಮಿತಿ ಉತ್ತರ ಕನ್ನಡ, ಸಂಘಟನಾ ಕಾರ್ಯದರ್ಶಿ ಹಾಗೂ ಸಿದ್ದಾಪುರ ತಾಲೂಕ ಘಟಕದ ಅಧ್ಯಕ್ಷ ವಿನಾಯಕ ಆರ್. ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BSNDP ಯ ಪದಾಧಿಕಾರಿಗಳು ಹಾಗೂ ಸಮಾಜ ಬಾಂಧವರು ತಾವು ಭಾಗವಹಿಸಿ ಮತ್ತು ಇತರ ಹಿಂದುಳಿದ ನಿಮ್ಮ ಸ್ನೇಹಿತರಿಗೂ ವಿಷಯ ತಿಳಿಸಿ ಅವರನ್ನು ಆಮಂತ್ರಿಸಬೇಕೆಂದು ವಿನಂತಿಸಿಕೊಂಡಿದ್ದಾರೆ.

ಸಿದ್ದಾಪುರ
ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ತಾಲ್ಲೂಕಿನ ಎಲ್ಲ ಪಶು ಸಂಗೋಪನಾ ಇಲಾಖೆಯ ಕೇಂದ್ರಗಳಲ್ಲಿ ಶ್ವಾನಗಳಿಗೆ ಉಚಿತ ರೇಬಿಸ್ ಲಸಿಕೆ‌ ಸೆ.28ರಿಂದ 30ರವರೆಗೆ ನಡೆಯಲಿದೆ ಎಂದು ತಾಲೂಕು ಪಶುಸಂಗೋಪನಾ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕ ಡಾ.ಶ್ರೇಯಸ್ ರಾಜ್ ತಿಳಿಸಿದ್ದಾರೆ.
ಕಡಕೇರಿಯಲ್ಲಿ ನಡೆದ ರಾಷ್ಟ್ರೀಯ ಪೋಷಣಾ ಅಭಿಯಾನದ ಸಭೆ
ಇಂದಿನ ದೃಶ್ಯ

ರಾಹುಲ್ ಗಾಂಧಿ ಸಮ್ಮುಖದಲ್ಲಿ ಕನ್ನಯ್ಯ ಕುಮಾರ್ ಕಾಂಗ್ರೆಸ್‌ ಸೇರ್ಪಡೆ, ಶಾಸಕ ಜಿಗ್ನೇಶ್ ಮೆವಾನಿ ಸೇರ್ಪಡೆ ಸದ್ಯಕ್ಕಿಲ್ಲ!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಸಿಪಿಐ ಯುವ ಮುಖಂಡ, ಜೆಎನ್‌ಯೂ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ನಯ್ಯ ಕುಮಾರ್ ಇಂದು ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

Kanhaiya Kumar-Jignesh Mewani joins Congress

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಸಿಪಿಐ ಯುವ ಮುಖಂಡ, ಜೆಎನ್‌ಯೂ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ನಯ್ಯ ಕುಮಾರ್ ಇಂದು ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಇಂದು ದೆಹಲಿಯಲ್ಲಿರುವ ರಾಹುಲ್ ಗಾಂಧಿ ಅವರ ಕಚೇರಿಗೆ ತೆರಳಿದ ಉಭಯ ನಾಯಕರ ಪೈಕಿ ಕನ್ನಯ್ಯ ಕುಮಾರ್ ಅಧಿಕೃತವಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಸ್ವೀಕರಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ತಾಂತ್ರಿಕ ಕಾರಣದಿಂದಾಗಿ ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಸೇರ್ಪಡೆ ಇಲ್ಲ
ಇನ್ನು ತಾಂತ್ರಿಕ ಕಾರಣದಿಂದಾಗಿ ಶಾಸಕ ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಸೇರ್ಪಡೆಯಾಗಿಲ್ಲ ಎಂದು ತಿಳಿದುಬಂದಿದೆ. ಈ ಬಗ್ಗೆ ಸ್ವತಃ ಜಿಗ್ನೇಶ್ ಮೇವಾನಿ ಮಾಹಿತಿ ನೀಡಿದ್ದು, ನಾನು ಓರ್ವ ಪಕ್ಷೇತರ ಶಾಸಕನಾಗಿದ್ದು ಈ ಹೊತ್ತಿನಲ್ಲಿ ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರ್ಪಡೆಯಾದರೆ ಬಹುಶಃ ನನ್ನ ಶಾಸಕತ್ವಕ್ಕೆ ಕುತ್ತಾಗಬಹುದು. ಆದರೆ ನಾನು ಈಗಲೂ ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ಭಾಗವಾಗಿದ್ದು, ಮುಂದಿನ ಗುಜರಾತ್ ಚುನಾವಣೆಯನ್ನು ಕಾಂಗ್ರೆಸ್ ನೊಂದಿಗೆ ಇದ್ದು ಹೋರಾಡುತ್ತೇನೆ ಎಂದು ಹೇಳಿದರು.ಇದೇ ವೇಳೆ ಮಾತನಾಡಿದ ಕನ್ನಯ್ಯ ಕುಮಾರ್ ಅವರು, ಕಾಂಗ್ರೆಸ್ ಪಕ್ಷವು ದೊಡ್ಡ ಹಡಗಿನಂತಿದೆ, ಅದನ್ನು ಉಳಿಸಿದರೆ, ನಾನು ಅನೇಕ ಜನರ ಆಕಾಂಕ್ಷೆಗಳನ್ನು, ಮಹಾತ್ಮ ಗಾಂಧಿಯವರ ಏಕತೆ, ಭಗತ್ ಸಿಂಗ್ ಅವರ ಧೈರ್ಯ ಮತ್ತು ಬಿಆರ್ ಅಂಬೇಡ್ಕರ್ ಅವರ ಸಮಾನತೆಯ ಕಲ್ಪನೆಯನ್ನು ಸಹ ರಕ್ಷಿಸಿದಂತಾಗುತ್ತದೆ. ಅದಕ್ಕಾಗಿಯೇ ನಾನು ಆ ಪಕ್ಷಕ್ಕೆ ಸೇರಿಕೊಂಡೆ ಎಂದು ಹೇಳಿದ್ದಾರೆ.

ಕನ್ನಯ್ಯ ಕುಮಾರ್ ಅವರು ದೇಶದ ಪ್ರತಿಷ್ಠಿತ ವಿದ್ಯಾಸಂಸ್ಥೆ ದೆಹಲಿಯ ಜವಾಹರ್‌ಲಾಲ್‌ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರಾಗಿದ್ದು, ಎಡಪಂಥೀಯ ಸೈದ್ಧಾಂತಿಕ ಸ್ಪಷ್ಟತೆ ಇರುವ ಕನ್ನಯ್ಯ, ಸಂಘ ಪರಿವಾರ ಮತ್ತು ಬಿಜೆಪಿ ವಿರುದ್ಧ ವಿದ್ಯಾರ್ಥಿಯಾಗಿದ್ದಾಗಲೇ ಸಿಡಿದೆದ್ದಿದ್ದರು. 2016ರಲ್ಲಿ ಜೆಎನ್‌ಯೂನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕನ್ನಯ್ಯ ಕುಮಾರ್ ದೇಶವಿರೋಧಿ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಕನ್ನಯ್ಯ ಸೇರಿ ಒಟ್ಟು 10 ಮಂದಿಯನ್ನು ದೇಶದ್ರೋಹ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಬಳಿಕ ತನಿಖಾಧಿಕಾರಿಗಳು ಕನ್ನಯ್ಯ ದೇಶದ್ರೋಹಿ ಘೋಷಣೆ ಕೂಗಿದ್ದಕ್ಕೆ ಯಾವುದೇ ಸಾಕ್ಷ್ಯಗಳು ನೀಡುವಲ್ಲಿ ವಿಫಲರಾದ ಕಾರಣ ಅವರಿಗೆ ಕ್ಲೀನ್‌ ಚಿಟ್‌ ನೀಡಿತ್ತು. 

ಕಳೆದ ಲೋಕಸಭಾ ಚುನಾವಣೆಯಲ್ಲಿ ಸಿಪಿಐ ಪಕ್ಷದ ಅಭ್ಯರ್ಥಿಯಾಗಿ ಬೇಗುಸರಾಯ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕನ್ನಯ್ಯ ಕುಮಾರ್ ಕೆಲವೇ ಅಂತರದಿಂದ ಸೋಲನುಭವಿಸಿದ್ದರು.

ಇನ್ನು ಗುಜರಾತ್‌ನ ವಡ್ಗಾಂವ್ ಕ್ಷೇತ್ರದ ಪಕ್ಷೇತರ ಶಾಸಕರಾಗಿರುವ ಜಿಗ್ನೇಶ್ ಮೆವಾನಿ ದಲಿತ ಹೋರಾಟದಿಂದ ಗುರುತಿಸಿಕೊಂಡಿರುವ ಗುಜರಾತ್‌ನ ಪ್ರಭಾವಿ ದಲಿತ ಯುವ ಮುಖಂಡರಾಗಿದ್ದು, ಗುಜರಾತ್‌ನ ಉನ್ನಾವೋದಲ್ಲಿ ನಡೆದ ದಲಿತರ ಮೇಲಿನ ದೌರ್ಜನ್ಯದ ವಿರುದ್ಧ ಹೋರಾಡುವ ಮೂಲಕ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದರು. ಬಳಿಕ ಅದೇ ವರ್ಚಸ್ಸಿನಿಂದ ಕಳೆದ ಗುಜರಾತ್‌ ವಿಧಾನಸಭಾ ಚುನಾವಣೆಗೆ ಪಕ್ಷೇತರರಾಗಿ ಸ್ಪರ್ಧಿಸಿ ಗೆಲುವು ಕಂಡಿದ್ದರು. 

ಮುಂದಿನ ವರ್ಷ ನಡೆಯಲಿರುವ ಗುಜರಾತ್‌ ವಿಧಾನಸಭಾ ಚುನಾವಣೆಯ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕನ್ನಯ್ಯ ಕುಮಾರ್ ಮತ್ತು ಜಿಗ್ನೇಶ್ ಮೆವಾನಿಯನ್ನು ಕಾಂಗ್ರೆಸ್‌ ಬರಮಾಡಿಕೊಂಡಿದೆ. ಕಳೆದ ಒಂದೆರಡು ವಾರದಿಂದ ಕನ್ನಯ್ಯ ಮತ್ತು ಜಿಗ್ನೇಶ್ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಗುಲ್ಲೆದ್ದಿತ್ತು. 

ಇದಕ್ಕೆ ಸಂಬಂಧಿಸಿದಂತೆ ಈ ಇಬ್ಬರೂ ಯುವ ನಾಯಕರು ಸ್ಪಷ್ಟನೆ ನೀಡದಿದ್ದರೂ ಅವರಿಬ್ಬರ ಮೌನ ಕಾಂಗ್ರೆಸ್‌ಗೆ ಸೇರ್ಪಡೆಯಾಗುವ ಕುರಿತು ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿತ್ತು. ಇದೀಗ ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾಗುವ ಮೂಲಕ ಈ ಎಲ್ಲಾ ಚರ್ಚೆಗಳಿಗೆ ತೆರೆ ಬಿದ್ದಂತಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *