ವರ್ಷಿತಾ ನಾಯ್ಕ ಪ್ರಥಮ & ಇತರ ಸ್ಥಳಿಯ ಸುದ್ದಿಗಳು

ಜಲ ಜೀವನ ಮಿಷನ್ ವತಿಯಿಂದ ಯಲ್ಲಾಪುರ ದಲ್ಲಿ
ನಡೆದ ಜಿಲ್ಲಾ ಮಟ್ಟದ ಚರ್ಚಾಸ್ಪರ್ಧೆಯಲ್ಲಿ ಸಿದ್ದಾಪುರ ತಾಲೂಕಿನ ಬಿಳೇಗೋಡ ಹಿ. ಪ್ರಾಥಮಿಕ. ಶಾಲೆಯ ವಿದ್ಯಾರ್ಥಿನಿ ಕುಮಾರಿ ವರ್ಷಿತಾ ನಾಯ್ಕ ಪ್ರಥಮ ಬಹುಮಾನ ಪಡೆದಿದ್ದಾ ಳೆ

ಸರಕುಳಿಯಲ್ಲಿ ಬ್ಯಾಗ್ ವಿತರಣೆ, ಮಾಹಿತಿ‌‌ ಕಾರ್ಯಾಗಾರ
ಸಿದ್ದಾಪುರ: ಶಿರಸಿ ಹಾಗೂ ಸಿದ್ದಾಪುರ ತಾಲೂಕಿನ ಗಡಿಯಲ್ಲಿ ಇರುವ ಸರಕುಳಿ ಶ್ರೀಜಗದಾಂಬಾ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ, ಸಿ ಸಿ ಕೆಮರಾ ಉದ್ಘಾಟನೆ, ಸಾರಿಗೆ ಅಧಿಕಾರಿಗಳಿಂದ ಸಂಚಾರ ಮಾರ್ಗದರ್ಶನ ಕಾರ್ಯಕ್ರಮಗಳು‌ ನಡೆದವು.
ನಿವೃತ್ತ ಮುಖ್ಯಾಧ್ಯಾಪಕ ಎಂ.ಎಂ.ಹೆಗಡೆ ಅವರು ಸಿಸಿಟಿವಿ‌ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ‌ನೀಡಿದರು. ಶಿರಸಿ ಆರ್ ಟಿಓ ಸಿ.ಡಿ.ನಾಯ್ಕ ಮಕ್ಕಳಿಗೆ ಸಾರಿಗೆ, ಸಂಚಾರದ ಮಾಹಿತಿ ನೀಡಿದರು. ಸಂಚಾರದ ನಿಯಮಗಳ ಕುರಿತು ಕೇಳಲಾದ ಪ್ರಶ್ನೆಗೆ ಸರಿ ಉತ್ತರ ಕೊಟ್ಟ ಮಕ್ಕಳಿಗೆ ಬಹುಮಾನ ಕೂಡ ವಿತರಿಸಿದರು.
ಎಂಟನೇ ವರ್ಗದ ೩೫ ಮಕ್ಕಳಿಗೆ ಆರ್ ಡಿಎಸ್ ಸ್ವಯಂ ಸೇವಾ ಸಂಸ್ಥೆ ೧೨೦೦ ರೂ. ಮೌಲ್ಯದ ಬ್ಯಾಗ್, ೨ ಜೊತೆ ಸಮಸವಸ್ತ್ರ, ಎರಡು‌ಪಟ್ಟಿ ವಿತರಿಸಿ ಶುಭಕೋರಿದರು.
ಇದೇ ವೇಳೆ ಎಸ್ಸೆಸ್ಸೆಲ್ಸಿಯಲ್ಲಿ ಶೇ.೯೦ಕ್ಕಿಂತ ಅಧಿಕ ಅಂಕ‌ ಪಡೆದು ಸಾಧನೆ ‌ಮಾಡಿದ ೧೦ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ‌ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಆರು‌ ಮುಖ್ಯಾಧ್ಯಾಪಕರು ಪಾಲ್ಗೊಂಡಿದ್ದರು. ಬಿ.ಎಂ.ಚಿತ್ರ ಗಿಮಠ, ಜಿ.ಎಸ್.ಹೆಗಡೆ, ಜಿ.ಆರ್.ಭಾಗವತ, ಟಿ.ಆರ್.ಜೋಶಿ, ಎಸ್.ಎನ್.ಭಟ್ಟ, ಎಂ.ಎಂ.ಹೆಗಡೆ ಪಾಲ್ಗೊಂಡರು. ಅಧ್ಯಕ್ಷತೆಯನ್ನು ಆಡಳಿತ ‌ಮಂಡಳಿ ಅಧ್ಯಕ್ಷ ಎಂ.ಜಿ.ಹೆಗಡೆ ವಹಿಸಿದ್ದರು.
ಸ್ತುತಿ‌ ಸಂಗಡಿಗರು ಪ್ರಾರ್ಥಿಸಿದರು. ಮುಖ್ಯಾಧ್ಯಾಪಕ ಕೃಷ್ಣಮೂರ್ತಿ ಹೆಗಡೆ ಸ್ವಾಗತಿಸಿದರು. ಎಂ.ವಿ.ನಾಯ್ಕ ವಂದಿಸಿದರು. ವಿ.ಎಸ್.ಭಟ್ಟ ನಿರ್ವಹಿಸಿದರು.

ಸಿದ್ಧಾಪುರ ಹಾವಿನಬೀಳು ಗ್ರಾಮದ ಹಿರಿಯ ವ್ಯಕ್ತಿ ಗಣಪತಿ ರಾಮಚಂದ್ರ ಭಟ್ಟ (87 ವರ್ಷ) ಇವರು ಇಂದು ನಿಧನರಾದರು .

ಇವರು ಈ ಹಿಂದೆ ಹಾವಿನಬೀಳು ಗ್ರಾಮದಲ್ಲಿ ಪೊಲೀಸ್ ಪಟೇಲರಾಗಿ ಕರ್ತವ್ಯ ನಿರ್ವಹಿಸಿದ್ದರು. ಅಲ್ಲದೇ ಇವರ ತಂದೆ ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರೆಂಬುದನ್ನು ಇಲ್ಲಿ ಸ್ಮರಿಸಬಹುದು.

ಈ ಸಂದರ್ಭದಲ್ಲಿ ಮೃತರ ಆತ್ಮಕ್ಕೆ ಸದ್ಗತಿ ಪ್ರಾಪ್ತಿಯಾಗಲಿ ಹಾಗೂ ಅವರ ಆತ್ಮಕ್ಕೆ ಚಿರಶಾಂತಿಯನ್ನು ‘ಹಾವಿನಬೀಳು ಯುವ ವಾಹಿನಿ’, ‘ಹಳೆಯ ವಿದ್ಯಾರ್ಥಿಗಳ ಸಂಘ, ಹುಲ್ಕುತ್ರಿ’, ‘ಹುಲ್ಕುತ್ರಿ ಶಾಲೆಯ ಪಾಲಕರು’ ಹಾಗೂ ಸಮಸ್ತ ಹಾವಿನಬೀಳು ಗ್ರಾಮದ ನಾಗರಿಕರು ಅಂತಿಮ ನಮನ ಸಲ್ಲಿ ಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *