ಶಂಕರ್​ ನಾಗ್ ಪುಣ್ಯಸ್ಮರಣೆ… ‘ಆಟೋ ರಾಜ’ ನಮ್ಮನ್ನಗಲಿ ಇಂದಿಗೆ 31 ವರ್ಷ

1978ರಲ್ಲಿ ಗಿರೀಶ್ ಕಾರ್ನಾಡ್ ರ ‘ಒಂದಾನೊಂದು ಕಾಲದಲ್ಲಿ’ ಚಿತ್ರದ ಮೂಲಕ ಕರಿಯರ್ ಆರಂಭಿಸಿದ ಶಂಕರ್ ನಾಗ್ ನಂತರ ಹಿಂತಿರುಗಿ ನೋಡಲೇ ಇಲ್ಲ. ‘ಮಿಂಚಿನ ಓಟ’ ಚಿತ್ರದ ಮೂಲಕ ನಿರ್ದೇಶನ ಕೂಡಾ ಆರಂಭಿಸಿದ ಅವರು ಅಲ್ಲಿಂದ ಮಿಂಚಿನ ವೇಗದಲ್ಲೇ ಅನೇಕ ಸಿನಿಮಾಗಳನ್ನು ನಿರ್ದೇಶಿಸಿದರು.

ತಮ್ಮ ಮ್ಯಾನರಿಸಂ, ಡೈಲಾಗ್​ನಿಂದಲೇ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿದ್ದ ನಟ ಕರಾಟೆ ಕಿಂಗ್ ಶಂಕರ್​ ನಾಗ್ ಅಗಲಿ ಇಂದಿಗೆ 31 ವರ್ಷ. ಆಟೋರಾಜ ಎಂದು ಕೂಡಾ ಹೆಸರಾಗಿದ್ದ ಶಂಕರ್​​ನಾಗ್ ಅವರ ಫೋಟೋಗಳನ್ನು ಇಂದಿಗೂ ಕೂಡಾ ಬಹಳ ಆಟೋಗಳ ಮೇಲೆ ಕಾಣಬಹುದು.

ಓದು ಮುಗಿಸಿ ವಿದೇಶಕ್ಕೆ ಹೋಗಬೇಕು ಎಂದುಕೊಂಡಿದ್ದ ಶಂಕರ್ ನಾಗ್ ಅಣ್ಣನ ಬಲವಂತದಿಂದ ರಂಗಭೂಮಿ ಪ್ರವೇಶಿಸಿದರು. ನಂತರ ಸಿನಿಮಾಗಳಲ್ಲಿ ನಟಿಸಲು ಆರಂಭಿಸಿದ ಅವರು ಬೇಡ ಎಂದುಕೊಂಡು ಬಂದ ಕ್ಷೇತ್ರವನ್ನು ಪ್ರೀತಿಯಿಂದ ಅಪ್ಪಿಕೊಂಡರು.

ಒಮ್ಮೆ ಅನಂತ್​​ನಾಗ್ ಅವರು ತಮ್ಮನ ಕಾಲೆಳೆಯುವ ಉದ್ದೇಶದಿಂದ ‘ಶಂಕರ ವಿದೇಶಕ್ಕೆ ಹೋಗಬೇಕೆಂದುಕೊಂಡೆ, ಯಾವಾಗಪ್ಪಾ ಹೋಗೋದು’ ಎಂದು ಕೇಳಿದ್ದರಂತೆ. ಅದಕ್ಕೆ ಉತ್ತರಿಸಿದ್ದ ಶಂಕರ್​​​ ನಾಗ್ ‘ಇನ್ನೆಲ್ಲಿಯ ವಿದೇಶ ಅಣ್ಣ’ ಎಂದರಂತೆ. ಏಕೆಂದರೆ ಅಷ್ಟರಲ್ಲಿ ಅವರು ಚಿತ್ರರಂಗದಲ್ಲಿ ಅಷ್ಟು ಬ್ಯುಸಿ ಆಗಿದ್ದರು. ಕಾರ್ಯಕ್ರಮವೊಂದರಲ್ಲಿ ಅನಂತ್ ನಾಗ್ ಈ ವಿಚಾರದ ಬಗ್ಗೆ ಹೇಳಿಕೊಂಡಿದ್ದರು.

actor director shankar nag 31th death anniversary

ವರನಟ ಡಾ.ರಾಜ್​ಕುಮಾರ್​ ಅವರೊಂದಿಗೆ ಶಂಕರ್​ ನಾಗ್​

1978ರಲ್ಲಿ ಗಿರೀಶ್ ಕಾರ್ನಾಡ್ ಅವರ ‘ಒಂದಾನೊಂದು ಕಾಲದಲ್ಲಿ’ ಚಿತ್ರದ ಮೂಲಕ ಕರಿಯರ್ ಆರಂಭಿಸಿದ ಶಂಕರ್ ನಾಗ್ ನಂತರ ಹಿಂತಿರುಗಿ ನೋಡಲೇ ಇಲ್ಲ. ‘ಮಿಂಚಿನ ಓಟ’ ಚಿತ್ರದ ಮೂಲಕ ನಿರ್ದೇಶನ ಕೂಡಾ ಆರಂಭಿಸಿದ ಅವರು ಅಲ್ಲಿಂದ ಮಿಂಚಿನ ವೇಗದಲ್ಲೇ ಅನೇಕ ಸಿನಿಮಾಗಳನ್ನು ನಿರ್ದೇಶಿಸಿದರು. ತಾವು ನಿರ್ದೇಶಿಸಿದ ಮೊದಲ ಚಿತ್ರಕ್ಕೆ 7 ರಾಜ್ಯ ಪ್ರಶಸ್ತಿಗಳನ್ನು ಕೂಡ ಪಡೆದರು.

‘ಎಸ್​​​ಪಿ ಸಾಂಗ್ಲಿಯಾನ’ ಚಿತ್ರವನ್ನಂತೂ ಎಂದಿಗೂ ಮರೆಯಲು ಸಾಧ್ಯವೇ ಇಲ್ಲ. ಶಂಕರ್ ಖಾಕಿ ಧರಿಸಿದಾಗ ಅವರಿಗೆ ಎಲ್ಲರ ದೃಷ್ಟಿ ತಾಕುತ್ತಿತ್ತು. ಏಕೆಂದರೆ ಅವರಿಗೆ ಆ ಬಟ್ಟೆ ಅಷ್ಟು ಚೆನ್ನಾಗಿ ಒಪ್ಪುತ್ತಿತ್ತು ಎಂದು ಅವರ ಬಹಳಷ್ಟು ಆತ್ಮೀಯರು ಹೇಳಿದ್ದಾರೆ.

‘ಮಾಲ್ಗುಡಿ ಡೇಸ್’ ಧಾರಾವಾಹಿಯನ್ನು ನಿರ್ದೇಶಿಸಿ ಶಂಕರ್​​ ನಾಗ್ ರಾಷ್ಟ್ರಮಟ್ಟದಲ್ಲೂ ಹೆಸರು ಮಾಡಿದರು. ಇದು ಹಿಂದಿ ಭಾಷೆಯಲ್ಲಿ ತಯಾರಾದರೂ ಇದರಲ್ಲಿ ನಟಿಸಿದ್ದು, ಕನ್ನಡ ಕಲಾವಿದರು. ಅನಂತ್ ನಾಗ್, ಡಾ. ವಿಷ್ಣುವರ್ಧನ್, ಗಿರೀಶ್ ಕಾರ್ನಾಡ್, ಗಾಯತ್ರಿ, ಮಾಸ್ಟರ್ ಮಂಜುನಾಥ್ ಹಾಗೂ ಇನ್ನಿತರರು ನಟಿಸಿದ್ದರು. ಶಿವಮೊಗ್ಗದಲ್ಲಿ ಸಂಪೂರ್ಣ ಚಿತ್ರೀಕರಣ ಮಾಡಲಾಗಿತ್ತು.

actor director shankar nag 31th death anniversary

ಡಾ. ವಿಷ್ಣುವರ್ಧನ್​ ಜೊತೆ ಶಂಕರ್​ ನಾಗ್​

ಚಿಕ್ಕ ವಯಸ್ಸಿಗೆ ದೊಡ್ಡ ಸಾಧನೆ ಮಾಡಿದ್ದ ಅಭಿಮಾನಿಗಳ ಪ್ರೀತಿಯ ಶಂಕ್ರಣ್ಣ 35ನೇ ವಯಸ್ಸಿಗೆ ಈ ಲೋಕಕ್ಕೆ ವಿದಾಯ ಹೇಳಿದರು. 30 ಸೆಪ್ಟೆಂಬರ್​ 1990ರಂದು ಚಿತ್ರೀಕರಣ ಮುಗಿಸಿ ಬರುವಾಗ ದಾವಣಗೆರೆ ಬಳಿ ಅವರ ಕಾರು ಅಪಘಾತಕ್ಕೀಡಾಗಿ ನಿಧನರಾದರು. ಕರಾಟೆ ಕಿಂಗ್​​​​​​​​​​​​ ಶಂಕರ್​ನಾಗ್​​​​​​​​​​​​ ಇಂದು ನಮ್ಮೊಂದಿಗೆ ಇಲ್ಲವಾದರೂ ಅವರ ನೆನಪು ಮಾತ್ರ ಎಂದಿಗೂ ಹಸಿರಾಗಿರುತ್ತದೆ. ಒಂದು ವೇಳೆ ಶಂಕರ್​ ನಾಗ್ ಇಂದಿಗೂ ಬದುಕಿದ್ದರೆ ಕನ್ನಡ ಚಿತ್ರರಂಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇನ್ನಷ್ಟು ಹೆಸರು ಮಾಡುತ್ತಿತ್ತು ಎಂಬುದು ಮಾತ್ರ ನಿಜ. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

ಕದಂಬಜಿಲ್ಲೆಗಾಗಿ ಸಹಿಸಂಗ್ರಹಣೆ, ಕಾನಳ್ಳಿಯಲ್ಲಿ ಹಸ್ಲರ್‌ ಸಂಘಕ್ಕೆ ಚಾಲನೆ,ಸೋಮುವಾರ ಮಹಿಳಾ ಸಂವೇದನೆ ಕವಿಗೋಷ್ಠಿ‌

ನಿರಂತರ ಹೋರಾಟದಲ್ಲಿರುವ ಶಿರಸಿ ಕೇಂದ್ರಿತ ಪ್ರತ್ಯೇಕ ಕದಂಬ ಜಿಲ್ಲೆ ಹೋರಾಟ ಸಮೀತಿ ಈ ತಿಂಗಳಿಂದ ಸಿದ್ಧಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ಸಹಿ ಸಂಗ್ರಹಣೆ...

ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಕೆಲಸಗಳಿಂದ ಸುಸ್ಥಿರ ಅಭಿವೃದ್ಧಿ… ಅರಶಿನಗೋಡು ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಸಂಪನ್ನ

ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿಕ್ಷಣ ಮತ್ತು ಉದ್ಯೋಗ ಗಳಿಗೆ ಹೆಚ್ಚಿನ ಮಹತ್ವ ನೀಡಿದರೆ ಹೊಸ ಪೀಳಿಗೆ ಮಹತ್ವದ್ದನ್ನು ಸಾಧಿಸಲು ಸಾಧ್ಯ ಎಂದಿರುವ ಶಾಸಕ ಭೀಮಣ್ಣ ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *