

ಅತಿಕ್ರಮಣದಾರರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಸಹಿಸುವುದಿಲ್ಲ : ಅರಣ್ಯ ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರನಾಥ ನಾಯ್ಕ ಆಕ್ರೋಶ

ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಹೋರಾಟ.. ಪದ್ಮಶ್ರೀ ಮರಳಿಸುವ ಎಚ್ಚರಿಕೆ ನೀಡಿದ ಸುಕ್ರಜ್ಜಿ..!
ಜಾನಪದ ಕೋಗಿಲೆ ಖ್ಯಾತಿಯ ನಾಡೋಜ, ಪದ್ಮಶ್ರೀ ಸುಕ್ರಿ ಬೊಮ್ಮುಗೌಡ ತಮ್ಮ ಜನಾಂಗದ ದಶಕಗಳ ಹೋರಾಟಕ್ಕೆ ಕೈಜೋಡಿಸಿದ್ದಾರೆ. ಹಾಲಕ್ಕಿ ಒಕ್ಕಲಿಗ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯಿಸಿ 20 ವರ್ಷದಿಂದಲೂ ಬೇಡಿಕೆ ಇರಿಸಿದ್ದು, ಇಂದಿಗೂ ಈಡೇರಿ ಲ್ಲ. ಹೀಗಾಗಿ ಮುಂಬರುವ ದಿನದಲ್ಲಿ ತೀವ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.
ಕಾರವಾರ (ಉ.ಕ): ಉತ್ತರ ಕನ್ನಡ ಜಿಲ್ಲೆಯ ಕಾಡುಗಳಲ್ಲಿ ಇಂದಿಗೂ ಹಲವಾರು ಬುಡಕಟ್ಟು ಸಮುದಾಯಗಳು ಜೀವನ ಕಟ್ಟಿಕೊಂಡಿವೆ. ಅದರಲ್ಲೂ ಜಿಲ್ಲೆಯ ಕರಾವಳಿಯಲ್ಲಿ ಕಂಡುಬರುವ ಬುಡಕಟ್ಟು ಸಮುದಾಯದ ಹಾಲಕ್ಕಿ ಒಕ್ಕಲಿಗರು ಕಳೆದ ಹಲವು ವರ್ಷಗಳಿಂದ ತಮ್ಮನ್ನ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಹೋರಾಟ ಮಾಡುತ್ತಿದ್ದಾರೆ. ಅಷ್ಟಾದರೂ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವ ಹಿನ್ನೆಲೆ ಜಾನಪದ ಕೋಗಿಲೆ ಖ್ಯಾತಿಯ ಸುಕ್ರಿ ಬೊಮ್ಮುಗೌಡ ಇದೀಗ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನೇ ಪಣಕ್ಕಿಟ್ಟು ಹೋರಾಟಕ್ಕಿಳಿದಿದ್ದಾರೆ.
ಹಾಲಕ್ಕಿ ಒಕ್ಕಲಿಗರು ಉತ್ತರಕನ್ನಡ ಜಿಲ್ಲೆಯಲ್ಲಿ ಕಂಡು ಬರುವ ವಿಶಿಷ್ಟ ಬುಡಕಟ್ಟು ಜನಾಂಗ. ಜಿಲ್ಲೆಯ ಕರಾವಳಿ ತಾಲೂಕುಗಳಾದ ಅಂಕೋಲಾ, ಕಾರವಾರ, ಕುಮಟಾ ಹಾಗೂ ಹೊನ್ನಾವರ ತಾಲೂಕಿನಲ್ಲಿ ಮಾತ್ರ ಹಾಲಕ್ಕಿ ಬುಡಕಟ್ಟು ಜನಾಂಗದವರು ಕಂಡು ಬರುತ್ತಾರೆ. ಈ ಸಮುದಾಯ ಸರ್ಕಾರದ ನಿರ್ಲಕ್ಷ್ಯಕ್ಕೆ ತುತ್ತಾಗಿದ್ದು, ಈಗ ಹೋರಾಟದ ಹಾದಿಗಿಳಿದಿವೆ.
ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಹೋರಾಟ
ಈ ಸಮುದಾಯಕ್ಕೆ ಸೇರಿದ ಜಾನಪದ ಕೋಗಿಲೆ ಖ್ಯಾತಿಯ ನಾಡೋಜ, ಪದ್ಮಶ್ರೀ ಸುಕ್ರಿ ಬೊಮ್ಮುಗೌಡ ಇದೀಗ ಹೋರಾಟಕ್ಕೆ ಕೈಜೋಡಿಸಿದ್ದಾರೆ. ಸುಮಾರು 1.5 ಲಕ್ಷ ಜನಸಂಖ್ಯೆ ಇರುವ ಹಾಲಕ್ಕಿ ಒಕ್ಕಲಿಗ ಜನಾಂಗವನ್ನ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆನ್ನುವುದು ಜನಾಂಗದವರ ಬಹುದೊಡ್ಡ ಬೇಡಿಕೆ. ಈ ನಿಟ್ಟಿನಲ್ಲಿ ಕಳೆದ 2000ನೇ ಇಸ್ವಿಯಿಂದಲೂ ಹೋರಾಟ ನಡೆಸುತ್ತಲೇ ಬಂದಿದ್ದು ಇಂದಿಗೂ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಮಾತ್ರ ಸೇರಿಸಿಲ್ಲ.
ಪದ್ಮಶ್ರೀ ಪ್ರಶಸ್ತಿ ವಾಪಸ್
ಈ ನಿಟ್ಟಿನಲ್ಲಿ ತಮ್ಮ ಸಮುದಾಯದ ಒಳಿತಿಗಾಗಿ ಮುಂದಾಗಿರುವ ಸುಕ್ರಿ ಬೊಮ್ಮುಗೌಡ ತಮ್ಮ ಜನಾಂಗವನ್ನ ಪರಿಶಿಷ್ಠ ಪಂಗಡಕ್ಕೆ ಸೇರಿಸುವಂತೆ ಸರ್ಕಾರವನ್ನ ಒತ್ತಾಯಿಸಿದ್ದಾರೆ. ಸರ್ಕಾರದ ಸೌಲಭ್ಯದಿಂದ ಜನಾಂಗ ವಂಚಿತವಾಗಿದ್ದು, ಪರಿಶಿಷ್ಟ ಪಂಗಡಕ್ಕೆ ಸೇರಿಸಿದರೆ ಒಂದಿಷ್ಟು ಸಹಾಯವಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ಸುಕ್ರಜ್ಜಿ ತಮ್ಮ ಸಮುದಾಯವನ್ನ ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ಕೇಂದ್ರ ಸರ್ಕಾರ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನ ವಾಪಸ್ ಮಾಡುವುದಾಗಿ ಎಚ್ಚರಿಸಿದ್ದಾರೆ.
ಈ ಸಮುದಾಯವನ್ನ ರಾಜ್ಯ ಸರ್ಕಾರ ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಆದರೆ 20 ವರ್ಷದಿಂದಲೂ ಕೇಂದ್ರ ಈ ಬಗ್ಗೆ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಜನಾಂಗಕ್ಕೆ ನ್ಯಾಯ ಸಿಗದೇ ಹೋದರೆ ವಿಧಾನಸೌಧದ ಎದುರಲ್ಲೇ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. (etbk)
ಕಾರವಾರ : ಭಟ್ಕಳ ತಾಲೂಕಿನಲ್ಲಿ ಕಾನೂನಿನ ವಿಧಿ ವಿಧಾನ ಅನುಸರಿಸದೆ ತಾಲೂಕಾದ್ಯಂತ ಅರಣ್ಯವಾಸಿಗಳ ಮೇಲೆ ಜರುಗುತ್ತಿರುವ ದೌರ್ಜನ್ಯ, ಕಿರುಕುಳ, ಖಂಡನಾರ್ಹ.ಅರಣ್ಯ ಸಿಬ್ಬಂದಿಗಳ ಕಾನೂನು ಬಾಹೀ ರ ಕೃತ್ಯ ನಿಯಂತ್ರಿಸಲು ಜನಪ್ರತಿನಿಧಿಗಳು ಸಂಪೂರ್ಣ ವಿಫಲರಾಗಿದ್ದಾರೆ.ಅರಣ್ಯ ಇಲಾಖೆಗೆ ಮುಂದಿನ 48 ಗಂಟೆಯಲ್ಲಿ ನ್ಯಾಯಕ್ಕಾಗಿ ಗಡುವು ನೀಡಲಾಗಿದೆ ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರನಾಥ ನಾಯ್ಕ ಆಕ್ರೋಶ ವ್ಯಕ್ತಪಡಿಸಿದರು.
ಅರಣ್ಯ ಸಿಬ್ಬಂದಿಗಳಿoದ ಅನ್ಯಾಯಕ್ಕೆ ಒಳಗಾಗಿರುವ ದುರ್ಗಮ್ಮಳಿಗೆ ಮುಂದಿನ 48 ಗಂಟೆಗಳಲ್ಲಿ ನ್ಯಾಯ ಒದಗಿಸಬೇಕು.ಇಲ್ಲದಿದ್ದಲ್ಲಿ ಅರಣ್ಯ ಸಿಬ್ಬಂದಿಗಳ ಕಾನೂನು ಬಾಹೀ ರ ಕೃತ್ಯದ ವಿರುದ್ಧ ಬೃಹತ್ ಹೋರಾಟದ ಮೂಲಕ ಪ್ರತಿಭಟಿಸಲಾಗುವುದೆಂದು ರವೀಂದ್ರನಾಥ ನಾಯ್ಕ ಎಚ್ಚರಿಕೆ ನೀಡಿದರು.ಹಾಗೂ ಸ್ಥಳದಿಂದಲೇ ಹೊನ್ನಾವರ ವಲಯದ ಡಿ.ಎಫ್.ಓ ಗಣಪತಿಯವರಿಗೆ ದೂರವಾಣಿಯಲ್ಲಿ ಸಂಪರ್ಕಿಸಿ ತಕ್ಷಣ ವಿಧವೆಗೆ ನ್ಯಾಯ ಕೊಡಬೇಕೆಂದು ಅಗ್ರಹಿಸಿದರು.ಅರಣ್ಯ ಸಿಬ್ಬಂದಿಗಳಿಂದ ದೌರ್ಜನ್ಯಕ್ಕೆ ಒಳಗಾಗಿ,ಆಘಾತಕ್ಕೆ ಒಳಗಾಗಿರುವ ದುರ್ಗಮ್ಮ ಶನಿಯಾರ ನಾಯ್ಕ ಅವರಿಗೆ ಹೋರಾಟಗಾರರ ವೇದಿಕೆಯು ಸಂತೈಸಿ ಬೆಂಬಲವನ್ನು ಸೂಚಿಸಿತು.
ಈ ಸಂದರ್ಭದಲ್ಲಿ ಅರಣ್ಯ ಸಿಬ್ಬಂದಿಗಳ ವಿರುದ್ಧ ಸ್ಥಳೀಕರಾದ ಚಂದ್ರು ಮೊಗೇರ್, ಮಹೇಶ ನಾಯ್ಕ,ಮನೋಹರ ನಾಯ್ಕ,ತರಬೇಜ್,ಜಿಲ್ಲಾ ಸಂಚಾಲಕ ದೇವರಾಜ್ ಗೊಂಡ,ಕಯೀಂ ಸಾಬ್,ಪಾಂಡುರಂಗ ನಾಯ್ಕ ಬೆಳಕೆ,ರಿಜವಾನ್ ಸಾಬ್,ಹತ್ಸಾಪ ದಾಮುದ್ದೀನ್ ಮುಂತಾದವರು ಉಪಸ್ಥಿತರಿದ್ದರು.



