

ಬೆಳಗಾವಿ: ಖಾನಪುರದ ರೈಲ್ವೆ ಹಳಿಯ ಮೇಲೆ 24 ವರ್ಷದ ಮುಸ್ಲಿಂ ಯುವಕನೋರ್ವನ ಮೃತದೇಹ ಪತ್ತೆಯಾಗಿದ್ದು, ಅನ್ಯ ಧರ್ಮದ ಯುವತಿಯನ್ನು ಪ್ರೀತಿಸುತ್ತಿದ್ದರಿಂದ ಆತನನ್ನು ಹತ್ಯೆ ಮಾಡಿರಬಹುದೆಂಬ ಅನುಮಾನ ಉಂಟಾಗಿದೆ.

ಕ್ಯಾದಗಿಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ
ಸಿದ್ದಾಪುರ
ಗ್ರಾಮೀಣ ಭಾಗದ ಎಲ್ಲ ಮಹಿಳೆಯರು, ಮಕ್ಕಳು ಸೇರಿದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಉತ್ತಮ ಆರೋಗ್ಯ ಹಾಗೂ ವೈದ್ಯಕೀಯ ಸೇವೆ ಸಕಾಲದಲ್ಲಿ ದೊರೆಯುವಂತಾಗಬೇಕು. ಆಗ ಮಾತ್ರ ಸಮಾಜದ ನಿಜವಾದ ಅಭಿವೃದ್ಧಿ ಸಾಧ್ಯ ಎಂದು ಶಿಕ್ಷಣ ಪ್ರಸಾರಕ ಸಮಿತಿ ಉಪಾಧ್ಯಕ್ಷ ಡಾ|ಶಶಿಭೂಷಣ ಹೆಗಡೆ ಹೇಳಿದರು.
ಅವರು ಕ್ಯಾದಗಿಯ ಸೇವಾ ಸಹಕಾರಿ ಸಂಘದಲ್ಲಿ ಗಣೇಶ ಹೆಗಡೆ ದೊಡ್ಮನೆ ಜನ್ಮ ಶತಾಬ್ದಿ ಅಂಗವಾಗಿ ಧನ್ವಂತರಿ ಆಯುರ್ವೇದ ಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಂಡ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಕ್ಯಾದಗಿ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಗಣೇಶ ಭಟ್ಟ ಕೆರೆಹೊಂಡ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು.
ಧನ್ವಂತರಿ ಆಯುರ್ವೇದ ಕಾಲೇಜಿನ ಪ್ರಾಚಾರ್ಯೆ ಡಾ|ರೂಪಾಭಟ್ಟ, ಪ್ರೊ| ಶ್ರೀಕಾಂತ ಭಟ್ ಕುಳಿಬೀಡು, ಸಹಕಾರಿ ಸಂಘದ ನಿರ್ದೇಶಕರಾದ ವಿ.ಕೆ.ಗೌಡ ಕುಂಬಾರಕುಳಿ, ಪರಮೇಶ್ವರ ನಾಯ್ಕ ಶಿರಗಳ್ಳೆ, ಜಿ.ಆರ್.ನಾಯ್ಕ ಹೆಗ್ಗಾರಕೈ, ಕೆ.ಪಿ.ರಘುಪತಿ ಕ್ಯಾದಗಿ, ವಿಜಯಾ ನಾಯ್ಕ ಹಳ್ಳಿಬೈಲ್ ಉಪಸ್ಥಿತರಿದ್ದರು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎನ್.ಗೌಡ ಆಲ್ಮನೆ ನಿರೂಪಿಸಿದರು.ವಿ.ಕೆ.ಗೌಡ ವಂದಿಸಿದರು.
ನಂತರ ಧನ್ವಂತರಿ ಆಯುರ್ವೇದ ಕಾಲೇಜಿನ ವೈದ್ಯರುಗಳಿಂದ ಉಚಿತ ತಪಾಸಣಾ ಶಿಬಿರ ನಡೆಯಿತು.
ಬೆಳಗಾವಿ: ಖಾನಪುರದ ರೈಲ್ವೆ ಹಳಿಯ ಮೇಲೆ 24 ವರ್ಷದ ಮುಸ್ಲಿಂ ಯುವಕನೋರ್ವನ ಮೃತದೇಹ ಪತ್ತೆಯಾಗಿದ್ದು, ಅನ್ಯ ಧರ್ಮದ ಯುವತಿಯನ್ನು ಪ್ರೀತಿಸುತ್ತಿದ್ದರಿಂದ ಆತನನ್ನು ಹತ್ಯೆ ಮಾಡಿರಬಹುದೆಂಬ ಅನುಮಾನ ಉಂಟಾಗಿದೆ.
ಮೃತನನ್ನು ಅರ್ಬಾಜ್ ಅಫ್ತಾಬ್ ಮುಲ್ಲಾ ಎಂದು ಗುರುತಿಸಲಾಗಿದೆ. ಈತ ಬೇರೆ ಧರ್ಮಕ್ಕೆ ಸೇರಿದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಹತ್ಯೆ ಪ್ರಕರಣ ದಾಖಲಿಸಲಾಗಿದೆ. ಆತ ಬೇರೆ ಧರ್ಮಕ್ಕೆ ಸೇರಿದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎಂಬ ಮಾಹಿತಿ ಆಧಾರದ ಮೇಲೆ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಲ್ಲಾ ಕೆಲಸಕ್ಕಾಗಿ ಪ್ರತಿದಿನ ಬೆಳಗಾವಿಯಿಂದ ರೈಲಿನಲ್ಲಿ ಓಡಾಡುತ್ತಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ. ಮುಲ್ಲಾ ಪ್ರೀತಿಸುತ್ತಿದ್ದ ಹುಡುಗಿ ಕಡೆಯವರು ಆತನನ್ನು ಕೊಲೆ ಮಾಡಿರುವುದಾಗಿ ಯುವಕನ ತಾಯಿ ನಜೀಮಾ ಶಾಯಿಕ್ ಆರೋಪಿಸಿದ್ದಾರೆ.
ಹುಡುಗಿಯಿಂದ ಬೇರೆಯಾಗುವಂತೆ ಬಿಜ್ರೆ ಮತ್ತು ಮಹಾರಾಜ್ ಸೇರಿದಂತೆ ಕೆಲವು ಜನರು ಕೆಲ ದಿನಗಳಿಂದ ತನ್ನ ಮಗನಿಗೆ ಬೆದರಿಕೆ ಹಾಕುತ್ತಿದ್ದರು.ಯುವತಿಯನ್ನು ತಡೆಯುವಂತೆ ಆಕೆಯ ತಾಯಿಯೊಂದಿಗೂ ಮಾತನಾಡಿದ್ದೆ ಆದರೆ, ಮುಲ್ಲಾ ಹಾಗೂ ಯುವತಿ ಮಾತು ಕೇಳುತ್ತಿರಲಿಲ್ಲ ಎಂದು ಅವರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆ ನಡೆಸಿದ ರೈಲ್ವೆ ಪೊಲೀಸರು, ಈ ವಿಚಾರವನ್ನು ಬೆಳಗಾವಿ ಜಿಲ್ಲಾ ಪೊಲೀಸರಿಗೆ ವರ್ಗಾಯಿಸಿದ್ದಾರೆ (kpc).
