ಅನ್ಯ ಧರ್ಮದ ಯುವತಿಯೊಂದಿಗೆ ಪ್ರೇಮ, ಮುಸ್ಲಿಂ ಯುವಕನ ಹತ್ಯೆ & ವೈದ್ಯಕೀಯ ತಪಾಸಣಾ ಶಿಬಿರ

ಬೆಳಗಾವಿ: ಖಾನಪುರದ ರೈಲ್ವೆ ಹಳಿಯ ಮೇಲೆ  24 ವರ್ಷದ ಮುಸ್ಲಿಂ ಯುವಕನೋರ್ವನ ಮೃತದೇಹ ಪತ್ತೆಯಾಗಿದ್ದು, ಅನ್ಯ ಧರ್ಮದ ಯುವತಿಯನ್ನು ಪ್ರೀತಿಸುತ್ತಿದ್ದರಿಂದ ಆತನನ್ನು ಹತ್ಯೆ ಮಾಡಿರಬಹುದೆಂಬ ಅನುಮಾನ ಉಂಟಾಗಿದೆ.  

Arbaz_Aftab_Mulla1

ಕ್ಯಾದಗಿಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ
ಸಿದ್ದಾಪುರ
ಗ್ರಾಮೀಣ ಭಾಗದ ಎಲ್ಲ ಮಹಿಳೆಯರು, ಮಕ್ಕಳು ಸೇರಿದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಉತ್ತಮ ಆರೋಗ್ಯ ಹಾಗೂ ವೈದ್ಯಕೀಯ ಸೇವೆ ಸಕಾಲದಲ್ಲಿ ದೊರೆಯುವಂತಾಗಬೇಕು. ಆಗ ಮಾತ್ರ ಸಮಾಜದ ನಿಜವಾದ ಅಭಿವೃದ್ಧಿ ಸಾಧ್ಯ ಎಂದು ಶಿಕ್ಷಣ ಪ್ರಸಾರಕ ಸಮಿತಿ ಉಪಾಧ್ಯಕ್ಷ ಡಾ|ಶಶಿಭೂಷಣ ಹೆಗಡೆ ಹೇಳಿದರು.
ಅವರು ಕ್ಯಾದಗಿಯ ಸೇವಾ ಸಹಕಾರಿ ಸಂಘದಲ್ಲಿ ಗಣೇಶ ಹೆಗಡೆ ದೊಡ್ಮನೆ ಜನ್ಮ ಶತಾಬ್ದಿ ಅಂಗವಾಗಿ ಧನ್ವಂತರಿ ಆಯುರ್ವೇದ ಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಂಡ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಕ್ಯಾದಗಿ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಗಣೇಶ ಭಟ್ಟ ಕೆರೆಹೊಂಡ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು.
ಧನ್ವಂತರಿ ಆಯುರ್ವೇದ ಕಾಲೇಜಿನ ಪ್ರಾಚಾರ್ಯೆ ಡಾ|ರೂಪಾಭಟ್ಟ, ಪ್ರೊ| ಶ್ರೀಕಾಂತ ಭಟ್ ಕುಳಿಬೀಡು, ಸಹಕಾರಿ ಸಂಘದ ನಿರ್ದೇಶಕರಾದ ವಿ.ಕೆ.ಗೌಡ ಕುಂಬಾರಕುಳಿ, ಪರಮೇಶ್ವರ ನಾಯ್ಕ ಶಿರಗಳ್ಳೆ, ಜಿ.ಆರ್.ನಾಯ್ಕ ಹೆಗ್ಗಾರಕೈ, ಕೆ.ಪಿ.ರಘುಪತಿ ಕ್ಯಾದಗಿ, ವಿಜಯಾ ನಾಯ್ಕ ಹಳ್ಳಿಬೈಲ್ ಉಪಸ್ಥಿತರಿದ್ದರು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎನ್.ಗೌಡ ಆಲ್ಮನೆ ನಿರೂಪಿಸಿದರು.ವಿ.ಕೆ.ಗೌಡ ವಂದಿಸಿದರು.
ನಂತರ ಧನ್ವಂತರಿ ಆಯುರ್ವೇದ ಕಾಲೇಜಿನ ವೈದ್ಯರುಗಳಿಂದ ಉಚಿತ ತಪಾಸಣಾ ಶಿಬಿರ ನಡೆಯಿತು.

ಬೆಳಗಾವಿ: ಖಾನಪುರದ ರೈಲ್ವೆ ಹಳಿಯ ಮೇಲೆ  24 ವರ್ಷದ ಮುಸ್ಲಿಂ ಯುವಕನೋರ್ವನ ಮೃತದೇಹ ಪತ್ತೆಯಾಗಿದ್ದು, ಅನ್ಯ ಧರ್ಮದ ಯುವತಿಯನ್ನು ಪ್ರೀತಿಸುತ್ತಿದ್ದರಿಂದ ಆತನನ್ನು ಹತ್ಯೆ ಮಾಡಿರಬಹುದೆಂಬ ಅನುಮಾನ ಉಂಟಾಗಿದೆ.  

ಮೃತನನ್ನು ಅರ್ಬಾಜ್ ಅಫ್ತಾಬ್ ಮುಲ್ಲಾ ಎಂದು ಗುರುತಿಸಲಾಗಿದೆ.  ಈತ ಬೇರೆ ಧರ್ಮಕ್ಕೆ ಸೇರಿದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಹತ್ಯೆ ಪ್ರಕರಣ ದಾಖಲಿಸಲಾಗಿದೆ. ಆತ ಬೇರೆ ಧರ್ಮಕ್ಕೆ ಸೇರಿದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎಂಬ ಮಾಹಿತಿ ಆಧಾರದ ಮೇಲೆ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಲ್ಲಾ ಕೆಲಸಕ್ಕಾಗಿ ಪ್ರತಿದಿನ ಬೆಳಗಾವಿಯಿಂದ ರೈಲಿನಲ್ಲಿ ಓಡಾಡುತ್ತಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ. ಮುಲ್ಲಾ ಪ್ರೀತಿಸುತ್ತಿದ್ದ ಹುಡುಗಿ ಕಡೆಯವರು ಆತನನ್ನು ಕೊಲೆ ಮಾಡಿರುವುದಾಗಿ ಯುವಕನ ತಾಯಿ ನಜೀಮಾ ಶಾಯಿಕ್ ಆರೋಪಿಸಿದ್ದಾರೆ. 

ಹುಡುಗಿಯಿಂದ ಬೇರೆಯಾಗುವಂತೆ ಬಿಜ್ರೆ ಮತ್ತು ಮಹಾರಾಜ್ ಸೇರಿದಂತೆ ಕೆಲವು ಜನರು ಕೆಲ ದಿನಗಳಿಂದ ತನ್ನ ಮಗನಿಗೆ ಬೆದರಿಕೆ ಹಾಕುತ್ತಿದ್ದರು.ಯುವತಿಯನ್ನು ತಡೆಯುವಂತೆ ಆಕೆಯ ತಾಯಿಯೊಂದಿಗೂ ಮಾತನಾಡಿದ್ದೆ ಆದರೆ, ಮುಲ್ಲಾ ಹಾಗೂ ಯುವತಿ ಮಾತು ಕೇಳುತ್ತಿರಲಿಲ್ಲ ಎಂದು ಅವರು ತಿಳಿಸಿದ್ದಾರೆ.  ಪ್ರಾಥಮಿಕ ತನಿಖೆ ನಡೆಸಿದ ರೈಲ್ವೆ ಪೊಲೀಸರು, ಈ ವಿಚಾರವನ್ನು ಬೆಳಗಾವಿ ಜಿಲ್ಲಾ ಪೊಲೀಸರಿಗೆ ವರ್ಗಾಯಿಸಿದ್ದಾರೆ (kpc).

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಭಿತ್ತಿಯ ಚಿತ್ರ ಬಿ. ಡಿ. ಹಿರೇಮಠ

ಬಿ. ಡಿ. ಹಿರೇಮಠ… ಯಾರಿಗೆ ಗೊತ್ತಿಲ್ಲ ಹೇಳಿ….೨೦ ವರ್ಷಗಳ ಹಿಂದೆ ಹೈ ಕೋರ್ಟ್ ಧಾರವಾಡ ವಿಭಾಗೀಯ ಪೀಠಕ್ಕಾಗಿ ಹೋರಾಡಿ ಮನೆ ಮಾತಾಗಿದ್ದ ಬಿಡಿ ಹಿರೇಮಠ...

ಶಾಲೆಗೆ ಹೋಗದ ರಾಜ!

ಅಕ್ಷರ ಕಲಿಯದೇ ಆಕಾಶದೆತ್ತರಕ್ಕೆ ಬೆಳೆದ ಅಪರೂಪದ ನಟ ಅನರ್ಘ್ಯ ರತ್ನ. ಮತ್ತೇ ಶಾಲೆಗೆ ಮುಖ ತೋರಿಸಲೇ ಇಲ್ಲ.

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

Latest Posts

ಭಿತ್ತಿಯ ಚಿತ್ರ ಬಿ. ಡಿ. ಹಿರೇಮಠ

ಬಿ. ಡಿ. ಹಿರೇಮಠ… ಯಾರಿಗೆ ಗೊತ್ತಿಲ್ಲ ಹೇಳಿ….೨೦ ವರ್ಷಗಳ ಹಿಂದೆ ಹೈ ಕೋರ್ಟ್ ಧಾರವಾಡ ವಿಭಾಗೀಯ ಪೀಠಕ್ಕಾಗಿ ಹೋರಾಡಿ ಮನೆ ಮಾತಾಗಿದ್ದ ಬಿಡಿ ಹಿರೇಮಠ ಅಂದರೆ ಎಲ್ಲರ ಭಿತ್ತಿಯ ಚಿತ್ರ… ಅವಳಿ ನಗರ ಹುಬ್ಬಳ್ಳಿ – ಧಾರವಾಡದಲ್ಲಿ ಉತ್ತರ ಕರ್ನಾಟಕ ಅಂದರೆ…. ಅದು ಪಾಪು, ಚಂಪಾ… ಪಾವಟೆ, ನಂತರದ ದೊಡ್ಡ ಹೆಸರು. ಅಧಿಕಾರ ಇಲ್ಲದೆ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *