yadiyurappa in-gandhi,s out- ಲಖೀಂಪುರ ಘಟನೆ ಕುರಿತ ಟ್ವೀಟ್ ತಂದ ಆಪತ್ತು: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಿಂದ ಮನೇಕಾ, ವರುಣ್ ಗಾಂಧಿ ಕೊಕ್! & ಬಿಜೆಪಿಗೆ ಮರ್ಮಾಘಾತ

ಭಾರತೀಯ ಜನತಾಪಕ್ಷ ತನ್ನ ಕಾರ್ಯಕಾರಿ ಸಮಿತಿ ಸದಸ್ಯರ ಪಟ್ಟಿಯನ್ನು ಪರಿಷ್ಕರಣೆ ಮಾಡಿದ್ದು, ಪಟ್ಟಿಯಿಂದ ಬಿಜೆಪಿ ಹಿರಿಯ ನಾಯಕಿ ಮನೇಕಾ ಗಾಂಧಿ, ವರುಣ್ ಗಾಂಧಿ ಅವರನ್ನು ಕೈ ಬಿಡಲಾಗಿದೆ.

Varun-Maneka_gandhi-_PTI

ನವದೆಹಲಿ: ಭಾರತೀಯ ಜನತಾಪಕ್ಷ ತನ್ನ ಕಾರ್ಯಕಾರಿ ಸಮಿತಿ ಸದಸ್ಯರ ಪಟ್ಟಿಯನ್ನು ಪರಿಷ್ಕರಣೆ ಮಾಡಿದ್ದು, ಪಟ್ಟಿಯಿಂದ ಬಿಜೆಪಿ ಹಿರಿಯ ನಾಯಕಿ ಮನೇಕಾ ಗಾಂಧಿ, ವರುಣ್ ಗಾಂಧಿ ಅವರನ್ನು ಪಟ್ಟಿಯಿಂದ ಕೈ ಬಿಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯನ್ನು ಘೋಷಿಸಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೊಸ ರಾಷ್ಟ್ರೀಯ ಪದಾಧಿಕಾರಿಗಳ ತಂಡವನ್ನು ಘೋಷಿಸಿದ್ದಾರೆ. 80 ಸಾಮಾನ್ಯ ಸದಸ್ಯರಲ್ಲದೆ, ಕಾರ್ಯಕಾರಣಿಯಲ್ಲಿ 50 ವಿಶೇಷ ಆಹ್ವಾನಿತರು ಮತ್ತು 179 ಖಾಯಂ ಆಹ್ವಾನಿತರು ಇರುತ್ತಾರೆ. 80 ಸದಸ್ಯರಲ್ಲಿ 37 ಮಂದಿ ಕೇಂದ್ರ ಸಚಿವರು ಮತ್ತು ರಾಜ್ಯದ ಹಲವಾರು ಸಚಿವರು ಸಮಿತಿಯ ಭಾಗವಾಗಿದ್ದಾರೆ.

https://imasdk.googleapis.com/js/core/bridge3.483.2_en.html#goog_1967871620

https://imasdk.googleapis.com/js/core/bridge3.483.2_en.html#goog_1967871622

ಪಶ್ಚಿಮ ಬಂಗಾಳ

ಪಶ್ಚಿಮ ಬಂಗಾಳದಲ್ಲಿ ನಿಲ್ಲದ ಪಕ್ಷಾಂತರ ಪರ್ವ.. ಬಿಜೆಪಿಗೆ ಮರ್ಮಾಘಾತ

ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರ ಪರ್ವ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ವಿಧಾನಸಭಾ ಚುನಾವಣೆಗೂ ಮುನ್ನ ಟಿಎಂಸಿ ತೊರೆದಿದ್ದ ಅನೇಕರ ಜತೆ ಜತೆಗೆ ಬಿಜೆಪಿ ಶಾಸಕರೂ, ಮಮತಾ ಪಕ್ಷ ಸೇರಲು ಹವಣಿಸುತ್ತಿದ್ದಾರೆ ಎನ್ನಲಾಗಿದೆ.

ಕೋಲ್ಕತ್ತಾ: ಬಿಜೆಪಿಯ ನಾಲ್ವರು ಶಾಸಕರು ಶೀಘ್ರದಲ್ಲೇ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಈ ಹಿನ್ನೆಲೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯದ ಎಲ್ಲಾ ಬಿಜೆಪಿ ಶಾಸಕರ ಜತೆ ಚರ್ಚಿಸಬೇಕೆಂದು ಬಂಗಾಳದ ಬಿಜೆಪಿ ಹಿರಿಯ ನಾಯಕರು ಒತ್ತಾಯಿಸುತ್ತಿದ್ದಾರೆ.

ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಖರಗ್‌ಪುರದ ಹಿರಣ್ ಚಟ್ಟೋಪಾಧ್ಯಾಯ, ಡಾರ್ಜಿಲಿಂಗ್‌ನ ನೀರಜ್ ಜಿಂಬಾ, ಕೂಚ್ ಬೆಹಾರ್ (ಉತ್ತರ)ದ ಸುಕುಮಾರ್ ರಾಯ್ ಮತ್ತು ಬಂಕುರಾ ಜಿಲ್ಲೆಯ ಸೋನಾಮುಖಿಯಿಂದ ದಿವಾಕರ್ ಘರಾಮಿ ಬಿಜೆಪಿ ತೊರೆಯುವ ಸಾಧ್ಯತೆಗಳು ದಟ್ಟವಾಗಿವೆ.

ಈ ನಾಲ್ವರು ಇತ್ತೀಚೆಗೆ ನಡೆದ ಪಕ್ಷದ ಕಾರ್ಯಕ್ರಮಗಳಿಗೆ ಗೈರಾಗಿದ್ದರು. ಮಾತ್ರವಲ್ಲದೇ, ರಾಜ್ಯ ಬಿಜೆಪಿ ಘಟಕಕ್ಕೆ ನೇಮಕಗೊಂಡಿದ್ದ ಅಧ್ಯಕ್ಷ ಹಾಗೂ ಇತರ ಪದಾಧಿಕಾರಿಗಳಿಗೆ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮಕ್ಕೂ ಇವರು ಹಾಜರಾಗಿರಲಿಲ್ಲ. ರಾಷ್ಟ್ರೀಯ ಬಿಜೆಪಿ ಉಪಾಧ್ಯಕ್ಷ ದಿಲೀಪ್​ ಘೋಷ್, ಸಭೆಯಲ್ಲಿ ಎಲ್ಲರೂ ಹಾಜರಿರುವಂತೆ ಸೂಚಿಸಿದ್ದರೂ ಇವರು ಹಾಜರಾಗಿರಲಿಲ್ಲ. ಶಾಸಕರ ಈ ನಡೆ ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ.

ಆದ್ರೆ, ಬಿಜೆಪಿ ಈ ಎಲ್ಲಾ ಊಹಾಪೋಹಗಳನ್ನು ತಳ್ಳಿ ಹಾಕಿದೆ. ಈ ನಾಲ್ವರು ಶಾಸಕರು ವೈಯಕ್ತಿಕ ಕಾರಣಗಳಿಂದ ಕಾರ್ಯಕ್ರಮಕ್ಕೆ ಹಾಜರಾಗಿಲ್ಲ. ಆದರೂ, ತೃಣಮೂಲ ಕಾಂಗ್ರೆಸ್​​ ನಮ್ಮ ಶಾಸಕರನ್ನು ಸೆಳೆಯಲು ಯತ್ನಿಸುತ್ತಿದೆ ಎಂದು ದೂರಿದೆ. ಬಿಜೆಪಿ ಶಾಸಕರು ಯಾರೂ ಪಕ್ಷ ತೊರೆಯುತ್ತಿಲ್ಲ. ವದಂತಿಗಳೆಲ್ಲ ನಿರಾಧಾರವಾಗಿವೆ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಇದೇ ವರ್ಷ ನಡೆದ ಬಂಗಾಳ ಚುನಾವಣೆಯಲ್ಲಿ ಬಿಜೆಪಿಯ 77 ಶಾಸಕರು ಆಯ್ಕೆಯಾದರು. ಅದರಲ್ಲಿ ನಿಶಿತ್​ ಪ್ರಮಾಣಿಕ ಮತ್ತು ಜಗನ್ನಾಥ್ ಸರ್ಕಾರ್ ಲೋಕಸಭಾ ಸದಸ್ಯರಾಗಿ ಆಯ್ಕೆಯಾದರು. ನಾಲ್ವರು ಎಂಎಲ್​ಎಗಳು ರಾಜೀನಾಮೆ ನೀಡಿದ್ರು. ಶಾಸಕ ಕೃಷ್ಣ ಕಲ್ಯಾಣಿ ಪಕ್ಷ ತೊರೆದಿದ್ದು ಸದ್ಯ ಬಿಜೆಪಿಯಲ್ಲಿ 70 ಶಾಸಕರಿದ್ದಾರೆ. ಕೃಷ್ಣ ಕಲ್ಯಾಣಿ ಕೂಡ ಟಿಎಂಸಿಗೆ ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ. ಬಿಜೆಪಿ ಹೆಚ್ಚು ಶಾಸಕರನ್ನು ಕಳೆದುಕೊಂಡರೆ, ಪಕ್ಷಕ್ಕೆ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆಯಿದೆ.

ಮೂಲಗಳ ಪ್ರಕಾರ ಶಾಸಕರ ಸಂಖ್ಯೆ 69 ಕ್ಕಿಂತ ಕೆಳಕ್ಕೆ ಇಳಿದರೆ, ರಾಜ್ಯದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷೆ ಕುಸಿಯುತ್ತದೆ. ಪ್ರಸ್ತುತ ಬಲದಿಂದ, ಬಿಜೆಪಿ ಇಬ್ಬರು ಸದಸ್ಯರನ್ನು ಸಂಸತ್ತಿನ ಮೇಲ್ಮನೆಗೆ ಕಳುಹಿಸಬಹುದು.

ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ, ಪ್ರಧಾನಿ ನರೇಂದ್ರ ಮೋದಿ, ಹಿರಿಯ ನಾಯಕರಾದ ಎಲ್.ಕೆ. ಅಡ್ವಾಣಿ, ಡಾ. ಮುರಳಿ ಮನೋಹರ ಜೋಷಿ, ಕೇಂದ್ರ ಸಚಿವ ರಾಜ್ ನಾಥ್ ಸಿಂಗ್, ಅಮಿತ್ ಷಾ, ನಿತಿನ್ ಗಡ್ಕರಿ, ಪಿಯೂಷ್ ಗೋಯಲ್ ಮುಂತಾದ ಎಲ್ಲಾ ರಾಷ್ಟ್ರೀಯ ಪದಾಧಿಕಾರಿಗಳನ್ನು ಸೇರಿಸಲಾಗಿದೆ.  

ಮಿಥುನ್ ಚಕ್ರವರ್ತಿ, ಹೇಮಾಮಾಲಿನಿಗೆ ಸ್ಥಾನ
ಇನ್ನು ಈ 309 ಸದಸ್ಯರ ಈ ಹೊಸ ಕಾರ್ಯಕಾರಿಣಿಯಲ್ಲಿ,  ಮಿಥುನ್ ಚಕ್ರವರ್ತಿ ಮತ್ತು ಹೇಮಾ ಮಾಲಿನಿಗೂ ಸ್ಥಾನ ನೀಡಲಾಗಿದ್ದು, ಅಮಿತ್ ಶಾ, ರಾಜನಾಥ್ ಸಿಂಗ್, ಇತ್ತೀಚೆಗೆ ಸಂಪುಟಕ್ಕೆ ಸೇರ್ಪಡೆಗೊಂಡ ಸಚಿವ ಅಶ್ವಿನಿ ವೈಷ್ಣವ್ ಅವರೂ ಸೇರ್ಪಡೆಯಾಗಿದ್ದಾರೆ. ಅಲ್ಲದೆ ಇತ್ತೀಚೆಗೆ ಸಂಪುಟದಿಂದ ಕೈಬಿಟ್ಟ ಮಾಜಿ ಸಚಿವರಾದ ಹರ್ಷವರ್ಧನ್, ರವಿಶಂಕರ್ ಪ್ರಸಾದ್ ಮತ್ತು ಪ್ರಕಾಶ್ ಜಾವಡೇಕರ್ ಕೂಡ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ಸದಸ್ಯರಾಗಿ ಉಳಿದಿದ್ದಾರೆ.

ಆದರೆ ಮೇನಕಾ ಗಾಂಧಿ ಮತ್ತು ವರುಣ್ ಗಾಂಧಿ ಅವರನ್ನು ಈ ಪಟ್ಟಿಯಿಂದ ಕೈ ಬಿಟ್ಟಿರುವುದು ಅಚ್ಚರಿಗೆ ಕಾರಣವಾಗಿದೆ. 

ಮನೇಕಾ ಗಾಂಧಿ ಕುಟುಂಬಕ್ಕೆ ಮುಳುವಾಯಿತೇ ಲಖೀಂಪುರ ಖೇರಿ ಘಟನೆ
ಇನ್ನು ಉತ್ತರ ಪ್ರದೇಶದ ಬಿಜೆಪಿ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿರುವ ಸೀತಾಪುರದ ಲಖೀಂಪುರಖೇರಿಯಲ್ಲಿ ನಡೆದ ರೈತರ ಹತ್ಯೆ ಮತ್ತು ಹಿಂಸಾಚಾರ ಪ್ರಕರಣದ ಕುರಿತು ವರಣ್ ಗಾಂಧಿ ಸತತ ಟ್ವೀಟ್ ಮಾಡುತ್ತಿದ್ದರು. ಇಂದೂ ಕೂಡ ಹಿಂಸಾಚಾರಕ್ಕೆ ಜವಾಬ್ದಾರರನ್ನಾಗಿ ಮಾಡಬೇಕು ಎಂದು ಟ್ವೀಟ್ ಮಾಡುವ ಯಾರ ಹೆಸರನ್ನೂ ಹೇಳದೇ ಸರ್ಕಾರದ ವಿರುದ್ಧ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬೆಳವಣಿಗೆ ಕಾರ್ಯಕಾರಿ ಸಮಿತಿ ರಚನೆ ಮೇಲೆ ಪರಿಣಾಮ ಬೀರಿದೆ ಎನ್ನಲಾಗುತ್ತಿದೆ. 

ರಾಷ್ಟ್ರೀಯ ಕಾರ್ಯಕಾರಿಣಿಯು ಪಕ್ಷದ ಪ್ರಮುಖ ವಿಚಾರಗಳ ಜೊತೆಗೆ, ಸರ್ಕಾರ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳನ್ನು ಚರ್ಚಿಸುತ್ತದೆ. ಹಾಗೆಯೇ ಪಕ್ಷದ ಸಂಘಟನೆಗೆ ಅಗತ್ಯವಾದ ಕಾರ್ಯಸೂಚಿಯನ್ನು ರೂಪಿಸುತ್ತದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

ಕದಂಬಜಿಲ್ಲೆಗಾಗಿ ಸಹಿಸಂಗ್ರಹಣೆ, ಕಾನಳ್ಳಿಯಲ್ಲಿ ಹಸ್ಲರ್‌ ಸಂಘಕ್ಕೆ ಚಾಲನೆ,ಸೋಮುವಾರ ಮಹಿಳಾ ಸಂವೇದನೆ ಕವಿಗೋಷ್ಠಿ‌

ನಿರಂತರ ಹೋರಾಟದಲ್ಲಿರುವ ಶಿರಸಿ ಕೇಂದ್ರಿತ ಪ್ರತ್ಯೇಕ ಕದಂಬ ಜಿಲ್ಲೆ ಹೋರಾಟ ಸಮೀತಿ ಈ ತಿಂಗಳಿಂದ ಸಿದ್ಧಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ಸಹಿ ಸಂಗ್ರಹಣೆ...

ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಕೆಲಸಗಳಿಂದ ಸುಸ್ಥಿರ ಅಭಿವೃದ್ಧಿ… ಅರಶಿನಗೋಡು ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಸಂಪನ್ನ

ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿಕ್ಷಣ ಮತ್ತು ಉದ್ಯೋಗ ಗಳಿಗೆ ಹೆಚ್ಚಿನ ಮಹತ್ವ ನೀಡಿದರೆ ಹೊಸ ಪೀಳಿಗೆ ಮಹತ್ವದ್ದನ್ನು ಸಾಧಿಸಲು ಸಾಧ್ಯ ಎಂದಿರುವ ಶಾಸಕ ಭೀಮಣ್ಣ ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *