ಕಮಲ ಬಿಟ್ಟು ‘ಕೈ’ ಹಿಡಿದ ಸಂಪುಟ ದರ್ಜೆ ಸಚಿವ, & ಪುತ್ರ

ಉತ್ತರಾಖಂಡ ಬಿಜೆಪಿಗೆ ದೊಡ್ಡ ಹೊಡೆತ: ಕಮಲ ಬಿಟ್ಟು ‘ಕೈ’ ಹಿಡಿದ ಸಂಪುಟ ದರ್ಜೆ ಸಚಿವ, ಪುತ್ರ

ಉತ್ತರಾಖಂಡ ಬಿಜೆಪಿಗೆ ಇಂದು ದೊಡ್ಡ ರಾಜಕೀಯ ಹೊಡೆತ ಬಿದ್ದಿದೆ. ಸರ್ಕಾರದ ಸಾರಿಗೆ ಸಚಿವರು ಹಾಗೂ ಅವರ ಪುತ್ರ ಕಮಲ ಪಕ್ಷ ತ್ಯಜಿಸಿ ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದಾರೆ.

ಡೆಹ್ರಾಡೂನ್(ಉತ್ತರಾಖಂಡ): 2022ರ ವಿಧಾನಸಭೆ ಚುನಾವಣೆಯನ್ನು ರಾಜ್ಯ ಎದುರು ನೋಡುತ್ತಿರುವುದಾಗಲೇ ಆಡಳಿತಾರೂಢ ಬಿಜೆಪಿಗೆ ಸಂಕಷ್ಟ ಎದುರಾಗಿದೆ. ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಸಾರಿಗೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಪುಟ ದರ್ಜೆ ಸಚಿವ ಯಶ್‌ಪಾಲ್‌ ಆರ್ಯ ಹಾಗೂ ಅವರ ಪುತ್ರ ಸಂಜಯ್ ಆರ್ಯ ಇಂದು ಬಿಜೆಪಿ ತ್ಯಜಿಸಿ ‘ಕೈ’ ಹಿಡಿದಿದ್ದಾರೆ.

ಮುಖ್ಯಮಂತ್ರಿ ಧಮಿ ಸಂಪುಟದದಲ್ಲಿರುವ ಯಶ್‌ಪಾಲ್ ಆರ್ಯ ನೈನಿತಾಲ್ ವಿಧಾನಸಭೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಇವತ್ತು ಅವರು ದೆಹಲಿಯಲ್ಲಿ ಹರೀಶ್ ರಾವತ್ ಹಾಗೂ ಕೆ.ಸಿ. ವೇಣುಗೋಪಾಲ್ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಅಧಿಕೃತವಾಗಿ ಸೇರ್ಪಡೆಗೊಂಡರು.

ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ, ‘ಯಶ್‌ಪಾಲ್‌ ಅವರು ಉತ್ತರಾಖಂಡದ ಸಂಪುಟ ದರ್ಜೆಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಖ್ಯಮಂತ್ರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದಾರೆ’ ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ ನವದೆಹಲಿಗೆ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿದ ಸಚಿವ ಯಶ್‌ಪಾಲ್‌ ಬಿಜೆಪಿ ತ್ಯಜಿಸುವ ಮುನ್ಸೂಚನೆ ನೀಡಿದ್ದರು. ಮೂಲಗಳ ಪ್ರಕಾರ, ಮುಂಬರುವ ವಿಧಾನಸಭೆ ಚುನಾವಣೆಗೆ ತಮ್ಮ ಬೆಂಬಲಿಗರು ಸ್ಪರ್ಧಿಸಲು ಕಾಂಗ್ರೆಸ್ ಹೈಕಮಾಂಡ್‌ ಬಳಿ ಆರ್ಯ 6 ಟಿಕೆಟ್‌ ಕೇಳಿದ್ದಾರೆ ಎಂಬ ಮಾಹಿತಿ ಇದೆ. ಇನ್ನು, ಆರ್ಯ ಅವರು ಬಿಜೆಪಿ ಸೇರುವುದಕ್ಕೂ ಮುನ್ನ ಸಾಕಷ್ಟು ಕಾಲ ಕಾಂಗ್ರೆಸ್‌ನಲ್ಲಿದ್ದವರು.

ಇಬ್ಬರು ಕಾಂಗ್ರೆಸ್ಸಿಗರು, ಓರ್ವ ಸ್ವತಂತ್ರ ಅಭ್ಯರ್ಥಿ ಬಿಜೆಪಿ ಸೇರ್ಪಡೆ:

ಚುನಾವಣೆ ಹಿನ್ನೆಲೆಯಲ್ಲಿ ಕಳೆದ ಕೆಲವು ತಿಂಗಳಿಂದ ರಾಜ್ಯದಲ್ಲಿ ಪಕ್ಷಾಂತರ ಪರ್ವ ನಡೆಯುತ್ತಿದೆ. ಕಾಂಗ್ರೆಸ್‌ ಶಾಸಕ ರಾಜ್‌ಕುಮಾರ್ ಮತ್ತು ಪ್ರಿತಂ ಸಿಂಗ್ ಪವಾರ್ ಬಿಜೆಪಿ ಸೇರಿದ ಬಳಿಕ ಸ್ವತಂತ್ರ ಶಾಸಕ ರಾಮ್ ಸಿಂಗ್ ಕೈಡಾ ಇತ್ತೀಚೆಗೆ ಬಿಜೆಪಿ ಸೇರಿಕೊಂಡಿದ್ದರು.

ಕಾಂಗ್ರೆಸ್‌ನ ಬಂಡಾಯ ಶಾಸಕರು ಬಿಜೆಪಿ ಸೇರಿದ ಹಿನ್ನೆಲೆ:

2017ರ ಚುನಾವಣೆಗೂ ಮುನ್ನ ಮಾಜಿ ಸಿಎಂ ವಿಜಯ್‌ ಬಹುಗುಣ ಸೇರಿದಂತೆ 9 ಮಂದಿ ಬಂಡಾಯ ಕಾಂಗ್ರೆಸ್‌ ಶಾಸಕರು ಬಿಜೆಪಿ ಸೇರಿದ್ದನ್ನು ಇಲ್ಲಿ ನೆನಪಿಸಬಹುದು. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *