

2021ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಫಲಿತಾಂಶವನ್ನು ಪ್ರಕಟಿಸಿದ್ದಾರೆ.

ಬಂಗಾರದ ಪದಕ ಪಡೆದ ಕುಮಾರಿ ಪಲ್ಲವಿ ಮಾರುತಿ_ನಾಯ್ಕ
ಉತ್ತರಕನ್ನಡ ಜಿಲ್ಲೆಯ #ಕುಮಟಾ ತಾಲೂಕಿನ ಕಿಮಾನಿ ಗುಂದ ಗ್ರಾಮದ ಚಂದ್ರಮತಿ ಹಾಗೂ _ಮಾರುತಿ_ಎಮ್_ನಾಯ್ಕ ರ ಮಗಳಾದ ಕುಮಾರಿ_ಪಲ್ಲವಿ_ಮಾರುತಿ_ನಾಯ್ಕ ಎಂ.ಎಸ್ಸಿ. physics, P.G.Dept., of studies in Physics ಗೆ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಬಂಗಾರದ_ಪದಕ ಲಭಿಸಿದೆ. ಸತತ ಪರಿಶ್ರಮ ಮತ್ತು ಓದುವಿಕೆಯಿಂದ ಅಪೃತಿಮ ಸಾಧನೆಗೈದ ಕುಮಾರಿ ಪಲ್ಲವಿ ಮಾರುತಿ ನಾಯ್ಕ ಳಿ ಗೆ ಅನೇಕರು ಅಭಿನಂಧನೆ ಸಲ್ಲಿಸಿದ್ದಾರೆ,



ಬೆಂಗಳೂರು: 2021ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಫಲಿತಾಂಶವನ್ನು ಪ್ರಕಟಿಸಿದ್ದಾರೆ.
ಸೆಪ್ಟಂಬರ್ 27 ಹಾಗೂ 29 ರಂದು ಎರಡು ದಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ನಡೆದಿತ್ತು. ಒಟ್ಟು 53 ಸಾವಿರದ 155 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 29 ಸಾವಿರದ 522 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಪೂರಕ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಬಹು ಆಯ್ಕೆ ಪ್ರಶ್ನೆಗಳಿತ್ತು. ಪ್ರತಿ ವಿಷಯಕ್ಕೆ 40 ಅಂಕಗಳಿಗೆ ಸಿಮೀತಗೊಳಿಸಿ ಪರೀಕ್ಷೆ ನಡೆಸಲಾಗಿತ್ತು. ರಾಜ್ಯದಲ್ಲಿ ಶೇಕಡಾ 55.54 ಫಲಿತಾಂಶ ದಾಖಲಾಗಿದೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದ್ದಾರೆ.
ಎಸ್ ಎಸ್ ಎಲ್ ಸಿ ಕೊರೋನಾ ಲಾಕ್ ಡೌನ್ ನಂತರ ದಾಖಲು ಮಾಡಿಕೊಳ್ಳದೆ, ಫೀಸ್ ಕಟ್ಟದೆ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದಿದ್ದ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಗ್ರೀಷ್ಮಾ ನಾಯಕ್ 625ರಲ್ಲಿ 599 ಅಂಕ ಗಳಿಸುವ ಮೂಲಕ ಪೂರಕ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.
ಫೀಸ್ ಕಟ್ಟಿಲ್ಲ ಅಂತಾ ವಿದ್ಯಾರ್ಥಿನಿಗೆ ಪರೀಕ್ಷೆಗೆ ನೋಂದಣಿ ಮಾಡಿರಲಿಲ್ಲ. ಮೂಡಬಿದರೆಯ ಆಳ್ವಾಸ್ ಕಾಲೇಜು ಪರೀಕ್ಷೆಗೆ ನೋಂದಣಿ ಮಾಡದ ಹಿನ್ನೆಲೆ ಮೊದಲ ಪ್ರಯತ್ನದ ಪರೀಕ್ಷೆಯಿಂದ ವಿದ್ಯಾರ್ಥಿನಿ ಗ್ರೀಷ್ಮಾ ನಾಯ್ಕ್ ವಂಚಿತಳಾಗಿದ್ದರು. ಆಕೆಯ ಮನೆಗೆ ಹಿಂದಿನ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿದ್ದರು. ಇದೀಗ ಪೂರಕ ಪರೀಕ್ಷೆಯಲ್ಲಿ 599 ಅಂಕಗಳೊಂದಿಗೆ ಮೊದಲ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
