

ಕೆಪಿಸಿಸಿ ಕಚೇರಿ ವೇದಿಕೆಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಭ್ರಷ್ಟಾಚಾರ ಆರೋಪ: ಕಾಂಗ್ರೆಸ್ ನಾಯಕ ಸಲೀಂ ಅಮಾನತು
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಕಚೇರಿಯ ವೇದಿಕೆಯಲ್ಲಿ ಭ್ರಷ್ಟಾಚಾರದ ಆರೋಪ ಮಾಡಿ ಸುದ್ದಿಯಾದ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಅಮಾನತು ಮಾಡಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.
ಸಿದ್ಧಾಪುರದಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿ ಉದ್ಘಾಟನೆ-
ಗ್ರಾಮ ಸ್ವರಾಜ್ ಕಲ್ಪನೆ ಕೊಟ್ಟ ಗಾಂಧಿ ಆದರ್ಶಗಳ ಮೂಲಕ ಯುವಜನತೆಗೆ ಮಾರ್ಗದರ್ಶನ ಮಾಡುವ ಅನಿವಾರ್ಯತೆ ಈಗ ಹೆಚ್ಚಿದೆ ಎಂದು ಕೆ.ಪಿ.ಸಿ.ಸಿ. ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ವಿ.ಎನ್. ನಾಯ್ಕ ಬೇಡ್ಕಣಿ ಹೇಳಿದರು. ಸಿದ್ಧಾಪುರದಲ್ಲಿ ಹೊಸದಾಗಿ ಪ್ರಾರಂಭವಾದ ಕಾಂಗ್ರೆಸ್ ಬ್ಲಾಕ್ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬಿ.ಜೆ.ಪಿ. ಆರ್. ಎಸ್.ಎಸ್. ನಿರ್ಧೇಶನದಂತೆ ಸತ್ಯವನ್ನು ಸುಳ್ಳು ಸುಳ್ಳನ್ನು ಸತ್ಯ ಮಾಡಲು ಪ್ರಯತ್ನಿಸುತ್ತಿದೆ. ಈ ಹಿಡನ್ ಅಜೆಂಡಾಗಳನ್ನು ಸತ್ಯಾಗ್ರಹ,ಚಳವಳಿಮೂಲಕ ಎದುರಿಸಬೇಕು ಎಂದರು.
ಕಾಂಗ್ರೆಸ್ ಕಛೇರಿ ಉದ್ಘಾಟಿಸಿದ ಡಿ.ಸಿ.ಸಿ. ಅಧ್ಯಕ್ಷ ಭೀಮಣ್ಣ ನಾಯ್ಕ ಮಾತನಾಡಿ ಗಾಂಧಿ ಆದರ್ಶಗಳ ಮೂಲಕ ಸಮಾಜವನ್ನು ಉಳಿಸಿಕೊಳ್ಳಬೇಕು ಇದಕ್ಕೆ ವಿರುದ್ಧವಾಗಿರುವವರ ಮತೀಯವಾದಿ ಹುನ್ನಾರಗಳನ್ನೂ ಅರ್ಥಮಾಡಿಕೊಳ್ಳಬೇಕು ಎಂದರು.
ಶಿರಸಿ-ಸಿದ್ಧಾಪುರ ಕಾಂಗ್ರೆಸ್ ವೀ ಕ್ಷಕಿ ಸುಷ್ಮಾ ರಾಜ್ ಗೋಪಾಲ ರೆಡ್ಡಿ ಮಾತನಾಡಿ ಪಕ್ಷ, ಸರ್ಕಾರಗಳಲ್ಲಿ ಮಹಿಳಾ ಮೀಸಲಾತಿ ನೀಡುವ ಮೂಲಕ ಗಾಂಧೀಜಿಯವರ ಸ್ತ್ರೀ ಸಮಾನತೆಗೆ ಬೆಂಬಲಿಸಬೇಕು ಎಂದರು.

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಕಚೇರಿಯ ವೇದಿಕೆಯಲ್ಲಿ ಭ್ರಷ್ಟಾಚಾರದ ಆರೋಪ ಮಾಡಿ ಸುದ್ದಿಯಾದ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಅಮಾನತು ಮಾಡಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ವಿರುದ್ಧ ಸಲೀಂ ಅವರು ಆಧಾರರಹಿತ ಆರೋಪ ಮಾಡಿದ್ದಾರೆ, ಅವರು ಹೇಳಿರುವುದರಲ್ಲಿ ಸತ್ಯಾಂಶವಿಲ್ಲ. ವೇದಿಕೆಯಲ್ಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಆಡಿರುವ ಮಾತುಗಳು ಅಲ್ಲ, ಆಫ್ ದಿ ರೆಕಾರ್ಡ್ ಅವರಿಬ್ಬರೂ ವೈಯಕ್ತಿಕವಾಗಿ ಮಾತನಾಡಿಕೊಂಡಿದ್ದಾರಷ್ಟೆ, ಆದರೂ ಅವರ ಮಾತುಗಳನ್ನು ಪಕ್ಷದ ಶಿಸ್ತು ಸಮಿತಿಗೆ ಕಳುಹಿಸಲಾಗಿದ್ದು ಪರಾಮರ್ಶೆ ನಡೆಸಿ ಸಲೀಂ ಅವರನ್ನು ಅಮಾನತು ಮಾಡಲು ತೀರ್ಮಾನ ಮಾಡಲಾಗಿದೆ. ಉಗ್ರಪ್ಪನವರಲ್ಲಿ ವಿವರಣೆ ಕೇಳುತ್ತೇವೆ ಎಂದು ಹೇಳಿದ್ದಾರೆ.

https://imasdk.googleapis.com/js/core/bridge3.485.1_en.html#goog_795739223
ಇನ್ನು ಟ್ವೀಟ್ ಮೂಲಕ ಬಿಜೆಪಿಯವರಿಗೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್ ಅನಧಿಕೃತ ಮಾತುಗಳನ್ನು ಇಟ್ಟುಕೊಂಡು ರೊಟ್ಟಿ ನೆಕ್ಕುತ್ತಿರುವ ಬಿಜೆಪಿಯವರೇ ನಿಮ್ಮ ಪಕ್ಷದವರಾದ ಹೆಚ್ ವಿಶ್ವನಾಥ್ ಅವರು ಅಧಿಕೃತವಾಗಿ ಸುದ್ದಿಗೋಷ್ಠಿ ನಡೆಸಿ ಬಿ ಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಮಾಡಿದ್ದ ಭ್ರಷ್ಟಾಚಾರ ಆರೋಪಗಳಿಗೆ ಮೊದಲು ಉತ್ತರಿಸಿ ಎಂದು ತಿರುಗೇಟು ಕೊಟ್ಟಿದೆ. (kpc)


