ಯಲ್ಲಾಪುರ ಅಪಘಾತ,ಅಪಾರ ಹಾನಿ


ಯಲ್ಲಾಪುರ : ರಾಸಾಯನಿಕ ತುಂಬಿದ ಟ್ಯಾಂಕರ್ ಪಲ್ಟಿ, ಹಳ್ಳಕ್ಕೆ ಹೊತ್ತಿಕೊಂಡ ಬೆಂಕಿ
!

ಕಾರವಾರ : ರಾಸಾಯನಿಕ ತುಂಬಿದ ಟ್ಯಾಂಕರ್ ಒಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲ್ ಕ್ರಾಸ್ ಬಳಿ ಇಂದು ಮುಂಜಾನೆ ಮುಗುಚಿ ಬಿದ್ದಿದೆ.ಇದರಿಂದ ಸೋರಿದ ಕೆಮಿಕಲ್ ಹಳ್ಳದಲ್ಲಿ ಹರಿದು ಅಲ್ಲಿರುವ ರೈತರ ಗದ್ದೆ ಮತ್ತು ತೋಟಗಳಿಗೆ ಅಪಾರ ಪ್ರಮಾಣದ ಹಾನಿಯಾಗಿದೆ.

ಪೇಂಟ್ ಗೆ ಬಳಸುವ “ಪೆಂಜಾನ್”ಮಂಗಳೂರಿನಿಂದ ಮುಂಬಯಿಗೆ ಟ್ಯಾಂಕರ್ ಮೂಲಕ ಕಳುಹಿಸಲಾಗುತ್ತಿತ್ತು.ಕಡಿದಾದ ತಿರುವಿನಲ್ಲಿ ಟ್ಯಾಂಕರ್ ಪಲ್ಟಿಯಾಗಿ ಸೋರಿದ ರಾಸಾಯನಿಕವು ಪಕ್ಕದ ಹಳ್ಳ ಹಾಗೂ ಕಾಲುವೆಗಳಲ್ಲಿ ಹರಿದಿದೆ.ಇದಕ್ಕೆ ಬೆಂಕಿ ತಗುಲಿದ್ದು,ಹಳ್ಳ ಹೊತ್ತಿ ಉರಿದಿದೆ.ಬೆಂಕಿ ಟ್ಯಾಂಕರ್ ಗೂ ತಗುಲಿದೆ.ಹಳ್ಳದ ಭತ್ತದ ಗದ್ದೆ, ಪಂಪ್ ಸೆಟ್ ಸುಟ್ಟು ಕರಕಲಾಗಿದೆ.ತೋಟದಲ್ಲಿದ್ದ ಗಿಡಗಳಿಗೆ ಬೆಂಕಿ ತಗುಲಿ ಹಾನಿಯಾಗಿದೆ.ಟ್ಯಾಂಕರ್ ಚಾಲಕ ಮತ್ತು ಕ್ಲೀನರ್ ಸಣ್ಣಪುಟ್ಟ ಗಾಯಗಳೊಂದಿಗೆ ಬಚಾವಾಗಿದ್ಧಾರೆ.

ಟ್ಯಾಂಕರ್ ಅಪಘಾತವಾಗುತ್ತಿದ್ದಂತೆ ಸೋರಿದ ರಾಸಾಯನಿಕಕ್ಕೂ ಬೆಂಕಿ ತಗುಲಿದ್ದು,ಸದ್ದು ಎರಡು ಕಿ.ಮೀ.ವರೆಗೂ ಕೇಳಿಸಿದೆ. ಮನೆಗಳಲ್ಲಿದ್ದ ಜನರು ಗಾಬರಿಯಿಂದ ಹೊರಗಡೆ ಓಡಿ ಬಂದಿದ್ದಾರೆ.ಆಗ ಹಳ್ಳ ಹೊತ್ತಿ ಉರಿಯುತ್ತಿರುವ ದೃಶ್ಯ ಕಂಡುಬಂದಿದೆ.

ಬಾಳೆಗದ್ದೆ ದೇಗುಲದ ಪಕ್ಕದಲ್ಲಿರುವ ನಿವಾಸಿ ಎಸ್.ಎಸ್.ಭಟ್ಟ ಅವರ ಐದು ಗುಂಟೆ ಭತ್ತದ ಗದ್ದೆ ಯಾವುದೇ ಅವಶೇಷ ಇಲ್ಲದಂತೆ ಸುಟ್ಟು ಹೋಗಿದೆ.ಬಾವಿಗೆ ಹಾಕಿದ ಪಂಪ್ ಸೆಟ್ ಸುಟ್ಟು ಕರಕಲಾಗಿದೆ.ತೋಟದಲ್ಲಿದ್ದ ಅಡಿಕೆ ಮರ,ತೆಂಗಿಮರ, ಮಾವಿನ ಮರ,ಹಲಸಿನ ಮರ ಸೇರಿದಂತೆ ಮುಂತಾದ ಮರಗಳಿಗೆ ಬೆಂಕಿ ತಗುಲಿದೆ. ಮನೆಯ ಒಂದು ಪಾರ್ಶ್ವಕ್ಕೂ ಬೆಂಕಿ ತಗುಲಿದೆ.

ಇದೇ ರೀತಿ ಮಂಜುನಾಥ ಗೌಡ, ನಾರಾಯಣ ಭಟ್ಟ,ವಿಶ್ವನಾಥ ಭಟ್ಟ ಮುಂತಾದವರ ತೋಟ,ಗದ್ದೆಗಳಿಗೂ ಹಾನಿಯಾಗಿದೆ.ಕಾಲುವೆಯಲ್ಲಿ ಸುಮಾರು 20 ಅಡಿ ಹಳ್ಳದಲ್ಲಿ 50 ಅಡಿ ಎತ್ತರಕ್ಕೂ ಬೆಂಕಿ ಕೆನ್ನಾಲಿಗೆ ಹೊತ್ತಿ ಉರಿಯುವ ದೃಶ್ಯ ಕಂಡುಬಂದಿದೆ.ಅಪಘಾತವಾದ ಕಾರಣಕ್ಕೆ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಮೂರು ಗಂಟೆಗೂ ಅಧಿಕ ಕಾಲ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿತ್ತು.ಯಲ್ಲಾಪುರ, ಮುಂಡಗೋಡ,ಶಿರಸಿಯಿಂದ ಬಂದ ಅಗ್ನಿಶಾಮಕದಳ ಹರಸಾಹಸಪಟ್ಟು ಬೆಂಕಿ ನಂದಿಸಿದರು.ಅಪಘಾತ ಸ್ಥಳಕ್ಕೆ ಶಿರಸಿ ಡಿ.ವೈ.ಎಸ್.ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *