ಗ್ರಾ. ಪಂ. ಸದಸ್ಯ ಸೇರಿ ಮೂವರ ಮೇಲೆ ಪೊಲೀಸ್ ದೂರು

ದನದ ವ್ಯಾಪಾರಿಯ ಮೇಲೆ ಹಲ್ಲೆ ಮಾಡಿದ ಪ್ರಕರಣ. ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ದಾಖಲು

ರೈತರು,ದನದ ವ್ಯಾಪಾರಿಗಳು ಜಾನುವಾರು ಸಾಗಾಟಮಾಡುವುದನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವ ಕೆಲವು ಸಮಯಸಾಧಕರು ಮುಗ್ಧರನ್ನು ಬಳಸಿ ಶಾಂತಿ ಕದಡಿ ಅದರಿಂದ ಲಾಭ ಮಾಡಿಕೊಳ್ಳುವ ಉದ್ದೇಶದಿಂದ ರಾಜ್ಯದ ಅನೇಕ ಕಡೆ ಅನೈತಿಕ ಪೊಲೀಗಿರಿ ಮಾಡುತ್ತಿರುವ ಬಗ್ಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ರೈತರ ಪರವಾಗಿರುವ ರೈತ ಸಂಘ ಮತ್ತು ಸಮಾಜವಾದಿ ಪಕ್ಷದ ಪ್ರಮುಖರು ಉತ್ತರ ಕನ್ನಡ ಜಿಲ್ಲೆಯ ವೈದಿಕ ಕುತಂತ್ರದ ಗೋರಕ್ಷಣೆಯ ಕಪಟನಾಟಕಕ್ಕೆ ವಿರೋಧ ವ್ಯಕ್ತಪಡಿಸಿದ್ದು ಬಿಳಗಿಯಲ್ಲಿ ಪೊಲೀಸರ ಎದುರಲ್ಲಿ ಗೋವಿಂದಗೌಡರನ್ನು ತಳಿಸಿದ ಪುಂಡರ ಗುಂಪನ್ನು ಬಂಧಿಸಿ,ಸೂಕ್ತಕ್ರಮಜರುಗಿಸಲು ಆಗ್ರಹಿಸಿದ್ದಾರೆ.


ಸಿದ್ದಾಪು ರ ತಾಲೂಕಿನ ಬೀಳಗಿಯಲ್ಲಿ ದನದ ವ್ಯಾಪಾರಿಯಾಗಿದ್ದ ಗೋವಿಂದಗೌಡ ಎನ್ನುವವರು ಮಾರಾಟ ಮಾಡುವುದಕ್ಕಾಗಿ ಜಾನುವಾರುಗಳನ್ನು ತಮ್ಮ ವಾಹನದಲ್ಲಿ ಸಾಗಿಸುತ್ತಿದ್ದಾಗ ಸಿದ್ದಾಪುರ ತಾಲೂಕಿನ ಬಿಳಗಿ ಸಮೀಪ ಕೆಲವರು ಗಾಡಿಯನ್ನು ಅಡ್ಡಗಟ್ಟಿ ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿ ಪೊಲೀಸ್ ಠಾಣೆಯ ಎದುರು ಗೋವಿಂದಗೌಡ ರವರ ಮೇಲೆ ಹಲ್ಲೆ ಮಾಡಿರುವ ಘಟನೆ ಹಾಗೂ ಅವಾಚ್ಯ ಶಬ್ದದಿಂದ ನಿಂದಿಸಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ದನದ ವ್ಯಾಪಾರಿ ಗೋವಿಂದ ಗೌಡನನ್ನು ಬಂದಿಸಿದ್ದರು. ಇದನ್ನು ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಕ್ರಷ್ಣ ಬಳೆಗಾ ರ ಖಂಡಿಸಿದ್ದರು ಮತ್ತು ದನದ ವ್ಯಾಪಾರಿಯ ಮೇಲೆ ಹಲ್ಲೆ ಮಾಡಿರುವ ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದರು.


ರೈತಸಂಘದ ತಾಲೂಕಾಧ್ಯಕ್ಷ ವೀರಭದ್ರ ನಾಯ್ಕ ರ ನೇತೃತ್ವದಲ್ಲಿ ಇಂದು ದಿನಾಂಕ 24-10-2021ರಂದು ಸಿದ್ದಾಪುರದಲ್ಲಿ ಸಮಾನಮನಸ್ಕರ ಸಭೆ ಕರೆಯಲಾಗಿತ್ತು. ಕೂಡಲೇ ಎಚ್ಚೆತ್ತುಕೊಂಡ ಸಿದ್ದಾಪುರ ಪೊಲೀಸ್ ಅಧಿಕಾರಿಗಳು ಆರೋಪಿಗಳ ಮೇಲೆ ಪ್ರಕರಣ ದಾಖಲಿಸಲು ಒಪ್ಪಿಕೊಂಡ ಹಿನ್ನೆಲೆಯಲ್ಲಿ ಇಂದು ಗೋವಿಂದ ಗೌಡರವರು ತಮ್ಮ ಮೇಲೆ ಹಲ್ಲೆಯಾದ ಕುರಿತು ಹಾಗೂ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸುವ ಕುರಿತು ಸಿದ್ದಾಪುರ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸ್ ಇಲಾಖೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಗೋವಿಂದ ಗೌಡ

ಆ ದಿನ ನಡೆದ ಘಟನೆಯನ್ನು ವಿವರಿಸಿದರು ಗ್ರಾಮ ಪಂಚಾಯತ ಸದಸ್ಯ . ಆದರ್ಶ ಪೈ ತಮ್ಮ ಕೆಲವು ಸಂಘ ಡಿಗರ ಜೊತೆ ಸೇರಿ ಹಲ್ಲೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಆದರ್ಶ ಪೈ ನಾನು ಕಾಗೇರಿಯ ಆಪ್ತ ನಿನ್ನನ್ನು ಜೀವನ ಪರ್ಯಂತ ಜೈಲಲ್ಲಿ ಕೊಳೆಯುವಂತೆ ಮಾಡುತ್ತೇನೆ ಎಂದು ಹೇಳಿದ್ದಲ್ಲದೆ ಅವಾಚ್ಯ ಸಬ್ದಗಳಿಂದ ನಿಂದಿಸಿದ್ದಾನೆ. ಪೋಲಿಸರ ಸಮ್ಮುಖದಲ್ಲಿಯೇ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಪೊಲೀಸರು ನನ್ನನ್ನು ಬಂಧಿಸಿ ಜೈಲಿಗೆ ಹಾಕಿದರು. ನಾನು ನಾಲ್ಕು ದಿನ ಜೈಲಿನಲ್ಲಿದ್ದು ಜಾಮೀನಿನ ಮೇಲೆ ಬಿಡುಗಡೆ ಆಗಿದ್ದೇನೆ. ನನ್ನ ಮೇಲೆ ಹಲ್ಲೆ ಮಾಡಿದವರ ಮೇಲೆ ಇಂದು ದೂರು ನೀಡಿದ್ದೇನೆ. ಆರೋಪಿಗಳ ಮೇಲೆ ಕ್ರಮಕೈಗೊಳ್ಳಬೇಕು. ನನಗೆ ಸೂಕ್ತ ರಕ್ಷಣೆ ನೀಡಬೇಕೆಂದು ಗೊವಿಂದ ಗೌಡ ಮನವಿ ಮಾಡಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ರೈತ ಸಂಘದ ವೀರಭದ್ರ ನಾಯ್ಕ, ಸಮಾಜವಾದಿ ಪಾರ್ಟಿಯ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ನಾಗರಾಜ ನಾಯ್ಕ, ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷರಾದ ಇಲಿಯಾಸ್, ರೈತ ಸಂಘದ ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಹಾಜರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *