ನಕ್ಸಲ್ ನಂಟು ಪ್ರಕರಣ: ಪತ್ರಕರ್ತ ವಿಠಲ ಮಲೆಕುಡಿಯ, ಆತನ ತಂದೆ ಲಿಂಗಣ್ಣ ಮಲೆಕುಡಿಯ ಖುಲಾಸೆ

2012 ರಲ್ಲಿ ನಕ್ಸಲರೊಂದಿಗೆ ನಂಟು ಹೊಂದಿದ ಆರೋಪದ ಮೇಲೆ ನಕ್ಸಲ್ ನಿಗ್ರಹ ಪಡೆ (ಎಎನ್ಎಫ್)ಯಿಂದ ಬಂಧನಕ್ಕೊಳಗಾಗಿದ್ದ ಪತ್ರಕರ್ತ ವಿಠಲ ಮಲೆಕುಡಿಯ ಮತ್ತು ಅವರ ತಂದೆ ಲಿಂಗಣ್ಣ ಮಲೆಕುಡಿಯ…

vittal

ಮಂಗಳೂರು: 2012 ರಲ್ಲಿ ನಕ್ಸಲರೊಂದಿಗೆ ನಂಟು ಹೊಂದಿದ ಆರೋಪದ ಮೇಲೆ ನಕ್ಸಲ್ ನಿಗ್ರಹ ಪಡೆ (ಎಎನ್ಎಫ್)ಯಿಂದ ಬಂಧನಕ್ಕೊಳಗಾಗಿದ್ದ ಪತ್ರಕರ್ತ ವಿಠಲ ಮಲೆಕುಡಿಯ ಮತ್ತು ಅವರ ತಂದೆ ಲಿಂಗಣ್ಣ ಮಲೆಕುಡಿಯ ಅವರನ್ನು ಮಂಗಳೂರಿನ ನ್ಯಾಯಾಲಯ ಗುರುವಾರ ಖುಲಾಸೆಗೊಳಿಸಿದೆ.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಮೂರನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ ಬಿ ಬಿ ಜಕಾತಿ ಇಂದು ಖುಲಾಸೆಗೊಳಿಸಿ ತೀರ್ಪು ನೀಡಿದ್ದಾರೆ.

https://imasdk.googleapis.com/js/core/bridge3.485.1_en.html#goog_2092746619

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಟ್ಲೂರು ನಿವಾಸಿಗಳಾದ ವಿಠ್ಠಲ ಮಲೆಕುಡಿಯ ಮತ್ತು ಆತನ ತಂದೆ ಲಿಂಗಣ್ಣ ಮಲೆಕುಡಿಯ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

ವಿಠಲನನ್ನು ಮಾರ್ಚ್ 3, 2012 ರಂದು ಎಎನ್‌ಎಫ್ ಬಂಧಿಸಿತ್ತು ಮತ್ತು ಪೊಲೀಸರು ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ವಿಠಲನನ್ನು 6ನೇ ಮತ್ತು ಆತನ ತಂದೆ ಲಿಂಗಣ್ಣನನ್ನು ಪ್ರಕರಣದ 7ನೇ ಆರೋಪಿಯನ್ನಾಗಿ ಮಾಡಲಾಗಿತ್ತು.

ಬಂಧಿಸಿದ್ದ ಸಮಯದಲ್ಲಿ ವಿಠಲ ಮಲೆಕುಡಿಯ ಅವರು ಮಂಗಳೂರು ವಿವಿಯ ಪತ್ರಿಕೋದ್ಯಮ ವಿದ್ಯಾರ್ಥಿಯಾಗಿದ್ದರು. ಜೈಲಿನಲ್ಲಿದ್ದ ಸಮಯದಲ್ಲಿ ಪರೀಕ್ಷೆಗೆ ಹಾಜರುಪಡಿಸಿದ್ದ ಪೊಲೀಸರು, ಕೈಕೊಳ ತೊಟ್ಟು ಪರೀಕ್ಷೆ ಬರೆಯುವಂತೆ ಮಾಡಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *