

5 ದಿನಗಳಲ್ಲಿ ದನದ ವ್ಯಾಪಾರಿಯ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸದೆ ಇದ್ದಲ್ಲಿ ಸಿದ್ದಾಪುರ ಪೊಲೀಸ್ ಠಾಣೆ ಎದುರು ಸಮಾಜವಾದಿ ಪಾರ್ಟಿಯಿಂದ ಉಪವಾಸ ಸತ್ಯಾಗ್ರಹವನ್ನು ಮಾಡಲಾಗುವುದು ಎಂದು ಸಮಾಜವಾದಿ ಪಾರ್ಟಿಯ ಕಾರ್ಮಿಕ ವಿಭಾಗದ ರಾಜ್ಯ ಅಧ್ಯಕ್ಷ ನಾಗರಾಜ ನಾಯ್ಕ ತಿಳಿಸಿದ್ದಾರೆ.
ಇಂದು ಸಿದ್ದಾಪುರ ಪಟ್ಟಣದಲ್ಲಿ ಮಾಧ್ಯಮ ಘೋಷ್ಠಿಯನ್ನುದ್ದೇಸಶಿಸಿ ಮಾತನಾಡಿದ ಅವರು ಇದೇ ತಿಂಗಳ 13ನೇ ತಾರೀಖು ಸಿದ್ದಾಪುರ ತಾಲೂಕಿನ ಬಿಳಗಿ ಸಮೀಪ ದನದ ವ್ಯಾಪಾರಿಯಾದ ಗೋವಿಂದ ಗೌಡರನ್ನು ಇಬ್ಬರು ಅಡ್ಡಗಟ್ಟಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಪೊಲೀಸರ ಸಮ್ಮುಖದಲ್ಲಿ ದನದ ವ್ಯಾಪಾರಿಯ ಮೇಲೆ ಹಲ್ಲೆ ಮಾಡಿ ನೈತಿಕ ಪೊಲೀಸ್ ಗಿರಿಯನ್ನು ತೋರಿಸಿದ ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿ ಬಂಧಿಸುವಂತೆ ಸಮಾಜವಾದಿ ಪಾರ್ಟಿ ಆಗ್ರಹಿಸಿತ್ತು. ಕಳೆದ 21ನೇ ತಾರೀಖು ಗೋವಿಂದ ಗೌಡರು ದೂರು ನೀಡಿದ ಹಿನ್ನೆಲೆಯಲ್ಲಿ ಸಿದ್ದಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ ಆರೋಪಿಗಳನ್ನು ಇಲ್ಲಿಯ ವರೆಗೂ ಬಂಧಿಸಿಲ್ಲಾ.
ಹಲ್ಲೆಯ ಆರೋಪಿಗಳು ಆಡಳಿತ ಪಕ್ಷದ ಮುಖಂಡರಾಗಿರುವುದರಿಂದಾಗಿ ಸ್ಥಳಿಯ ಶಾಸಕರು ಆರೋಪಿಗಳನ್ನು ಬಂಧಿಸದಂತೆ ಪೊಲೀಸರ ಮೇಲೆ ಒತ್ತಡ ಹೇರುತ್ತಿದ್ದಾರೆ. ಪೋಲೀಸರು ಆಡಳಿತ ಪಕ್ಷದ ಒತ್ತಡಕ್ಕೆ ಮಣಿದು ಆರೋಪಿಗಳನ್ನು ಬಂಧಿಸುತ್ತಿಲ್ಲಾ. ಆಡಳಿತ ನಡೆಸುವ ಪಕ್ಷದವರು ಪೊಲೀಸ್ ಇಲಾಖೆಯನ್ನು ಮತ್ತು ಇತರ ಇಲಾಖೆಯ ಅಧಿಕಾರಿಗಳನ್ನು ತಮಗೆ ಬೇಕಾದ ಹಾಗೆ ಬಳಸಿಕೊಳ್ಳುತ್ತಿದ್ದಾರೆ. ಇದನ್ನು ನಾವು ಇಂದಿನ ದಿನಗಳಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿಯು ನೋಡುತ್ತಿದ್ದೇವೆ ಎಂದು ಈ ಸಂದರ್ಭದಲ್ಲಿ ಆರೋಪಿಸಿದರು.
ಕರ್ನಾಟಕದ ಮುಖ್ಯಮಂತ್ರಿಗಳು ಕಳೆದ ಕೆಲವು ದಿನಗಳ ಹಿಂದೆ ನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿದ್ದರು. ಇದರ ನಂತರ ಇಂಥಹ ಪ್ರಕರಣಗಳು ಹೆಚ್ಚಾಗಿದೆ. ನಾವು ಉತ್ತರ ಭಾರತದಲ್ಲಿ ಇಂತಹ ಘಟನೆಗಳನ್ನು ಹೆಚ್ಚಾಗಿ ನೋಡುತ್ತಿದ್ದೆವು. ಆದರೆ ಕರ್ನಾಟಕದಲ್ಲಿ ಕೂಡ ಈಗ ಈ ರೀತಿಯ ಪ್ರಕರಣಗಳು ಹೆಚ್ಚಾಗುತ್ತಿವೆ. ಕಾನೂನನ್ನು ಕೈಗೆ ತೆಗೆದುಕೊಳ್ಳದಂತೆ ತಮ್ಮ ಪಾರ್ಟಿಯ ಕಾರ್ಯಕರ್ತರಲ್ಲಿ ಹಾಗೂ ಪದಾಧಿಕಾರಿಗಳಲ್ಲಿ ಮುಖ್ಯಮಂತ್ರಿಗಳು ಸೂಚನೆ ನೀಡಬೇಕೆಂದು ಸಮಾಜವಾದಿ ಪಾರ್ಟಿ ಆಗ್ರಹಿಸುತ್ತದೆ. ಉತ್ತರ ಕನ್ನಡ ಜಿಲ್ಲೆಯನ್ನು ಉತ್ತರ ಭಾರತ ವಾಗಿ ಮಾಡಲು ನಾವು ಬಿಡುವುದಿಲ್ಲಾ ಎಂದರು.
ಈ ಸಂದರ್ಭದಲ್ಲಿ ಹಲ್ಲೆಗೆ ಒಳಗಾದ ದನದ ವ್ಯಾಪಾರಿ ಗೋವಿಂದ ಗೌಡ ಮಾತನಾಡಿ ನನ್ನ ಮನೆಯ ಆಕಳು ಮತ್ತು ಕರು ಸಂಬಂಧಿಕರಿಗೆ ಮಾರಾಟ ವಾಗಿತ್ತು. ಅದನ್ನು ತೆಗೆದುಕೊಂಡು ಸಂಬಂಧಿಕರ ಮನೆಗೆ ಮುಟ್ಟಿಸಿ ಬರಲು ಹೋಗುತ್ತಿರುವಾಗ ಬಿಳಗಿ ಸಮೀಪ ನನ್ನನ್ನು ಇಬ್ಬರು ಅಡ್ಡಗಟ್ಟಿ ಬಿಳಗಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಪೊಲೀಸ್ ಠಾಣೆ ಎದುರು ಪೊಲೀಸರ ಎದುರಿನಲ್ಲೇ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ಆದರ್ಶ ಪೈ ಮತ್ತು ಆತನ ಸಂಘಡಿಗರು ನನ್ನ ಮೇಲೆ ವಿವಿಧ ರೀತಿಯಲ್ಲಿ ಹಲ್ಲೆ ಮಾಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ, ನನ್ನ ಮೊಬೈಲ್ ಅನ್ನು ಕೂಡ ಕಸಿದುಕೊಂಡಿದ್ದಾರೆ. ಪೊಲೀ ಸರು ನನ್ನ ಮೇಲೆ ಹಲ್ಲೆ ಮಾಡಿದವರನ್ನು ಬಿಟ್ಟು ನನ್ನನ್ನೆ ಬಂಧಿಸಿ ಜೈಲಿಗೆ ಹಾಕಿದ್ದರು. ನಾನು ಜಾಮೀನಿನ ಮೇಲೆ ಬಿಡುಗಡೆಯಾಗಿ ಬಂದ ನಂತರ 21 ನೆ ತಾರೀಖು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇನೆ. ಆದರೆ ಇಲ್ಲಿವರೆಗೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲಾ. ನನಗೆ ನ್ಯಾಯ ಬೇಕು ಎಂದರು.
ಈ ಸಂದರ್ಭದಲ್ಲಿ ಸಮಾಜವಾದಿ ಪಾರ್ಟಿಯ ಮಹಿಳಾ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಮತಾ ನಾಯ್ಕ, ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷರಾದ ಕೃಷ್ಣ ಬಳೆಗಾರ, ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷರಾದ ವಾಸು ನಾಯ್ಕ, ಸಿದ್ದಾಪುರ ತಾಲೂಕು ಅಧ್ಯಕ್ಷರಾದ ಧರ್ಮ ನಾಯ್ಕ ಉಪಸ್ಥಿತರಿದ್ದರು



_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
