ಅಧಿಕಾರಿಗೆ ಬುದ್ಧಿ ಕಲಿಸಲು ಭಿಕ್ಷೆ ಬೇಡಿದ ವ್ಯಕ್ತಿ! & ಪೆಗಾಸಸ್ ತಂತ್ರಾಂಶ ಗೂಢಚಾರಿಕೆ: ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆ

ಲಂಚ ಕೇಳಿದ ಅಧಿಕಾರಿಗೆ ಬುದ್ಧಿ ಕಲಿಸಲು ಭಿಕ್ಷೆ ಬೇಡಿದ ವ್ಯಕ್ತಿ

ಕೆಲಸ ಮಾಡಿಕೊಡಲು ಲಂಚ ಬಯಸಿದ ಅಧಿಕಾರಿ ಮನಪರಿವರ್ತನೆ ಮಾಡುವುದಕ್ಕಾಗಿ ವ್ಯಕ್ತಿಯೊಬ್ಬರು ಭಿಕ್ಷೆ ಬೇಡಿದ ಘಟನೆ ಬೆಳಕಿಗೆ ಬಂದಿದೆ.

ಕಾರವಾರ: ಸಾರ್ವಜನಿಕ ಕೆಲಸ ಮಾಡಿಕೊಡಲು ಲಂಚ ಕೇಳಿದ ಅಧಿಕಾರಿಯ ಮನಪರಿವರ್ತನೆ ಮಾಡುವುದಕ್ಕಾಗಿ ವ್ಯಕ್ತಿಯೊಬ್ಬರು ಜನರಿಂದ ಭಿಕ್ಷೆ ಬೇಡಿ, ಹಣ ನೀಡಲು ಮುಂದಾದ ಘಟನೆ ಯಲ್ಲಾಪುರ ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದೆ.

ಯಲ್ಲಾಪುರದ ತಟಗಾರ ಗ್ರಾಮದ ಸರ್ವೇ ನಂ. 12ರಲ್ಲಿನ ಕ್ಷೇತ್ರವನ್ನು ಉಪ ನೋಂದಣಾಧಿಕಾರಿ ಕಚೇರಿ ಮೂಲಕ ಗಜಾನನ ಭಟ್ಟ ಹಾಗೂ ನಾರಾಯಣ ಭಟ್ಟ ಎಂಬ ಸಹೋದರರಿಬ್ಬರು ವಿಭಾಗ ಮಾಡಿಕೊಂಡಿದ್ದರು. ಇದನ್ನು ಪಹಣಿ ಪತ್ರಿಕೆಯಲ್ಲಿ ದಾಖಲು ಮಾಡಲು ಕಂದಾಯ ಇಲಾಖೆ ಅಧಿಕಾರಿಯೊಬ್ಬರು 2 ಸಾವಿರ ರೂ. ಬೇಡಿಕೆ ಇಟ್ಟಿದ್ದರು. ಹೀಗಾಗಿ ಸಾರ್ವಜನಿಕರಿಂದ ಭಿಕ್ಷೆ ಬೇಡಿ ಅಧಿಕಾರಿಗೆ ಅವರು ಬಯಸಿದ ಹಣ ನೀಡಲು ಮುಂದಾಗಿದ್ದೇನೆ ಎಂದು ಗಜಾನನ ಭಟ್ಟ ಅವರ ಪುತ್ರ ಅಚ್ಯುತಕುಮಾರ ತಿಳಿಸಿದ್ದಾರೆ.

ಭಷ್ಟಾಚಾರದ ಕುರಿತು ಹೋರಾಟ ಮಾಡುವುದಕ್ಕಿಂತ ಮೊದಲು ಅಧಿಕಾರಿಗಳ ಮನ ಪರಿವರ್ತನೆ ಮಾಡುವುದು ಮುಖ್ಯ ಎಂದು ಭಾವಿಸಿ ಜನರಿಂದ ಭಿಕ್ಷೆ ಬೇಡಿ ಅಧಿಕಾರಿಯ ಬೇಡಿಕೆ ಪೂರೈಸಲು ನಿರ್ಧರಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಸಿಸಿಟಿವಿ ಕಡ್ಡಾಯ ಮಾಡಬೇಕು ಎಂದು ಮೂರು ವರ್ಷದ ಹಿಂದೆಯೇ ನ್ಯಾಯಾಲಯದ ಮೊರೆ ಹೋಗಿದ್ದು, ಜಿಲ್ಲಾಡಳಿತ ಆ ವೇಳೆ ಸರ್ಕಾರಿ ಕಚೇರಿಗಳಲ್ಲಿ ಸಿಸಿಟಿವಿ ಕಡ್ಡಾಯಗೊಳಿಸಿ ಆದೇಶ ಹೊರಡಿಸಿತ್ತು. ಆದರೆ, ಎಲ್ಲಾ ಕಚೇರಿಗಳಲ್ಲಿ ಆ ಆದೇಶ ಇನ್ನೂ ಅನುಷ್ಠಾನಕ್ಕೆ ಬಂದಿಲ್ಲ ಎಂದರು.

ಕೋರ್ಟ್​ ಆದೇಶದ ಅನ್ವಯ ಯಲ್ಲಾಪುರದ ತಹಶೀಲ್ದಾರ್ ಕಚೇರಿಯಲ್ಲಿ ಸಿಸಿಟಿವಿ ಅಳವಡಿಸುವಂತೆ ತಹಶೀಲ್ದಾರ್ ಶ್ರೀಕೃಷ್ಣ ಕಾಮ ಕರ್ ರಿಗೆ ಮನವಿ ಮಾಡಿದ್ದೇನೆ. ಇದಕ್ಕೆ ತಹಶೀಲ್ದಾರ್ ಪೂರಕವಾಗಿ ಸ್ಪಂದಿಸಿದ್ದಾರೆ. ಪ್ರಸ್ತುತ ಲಂಚ ಕೇಳಿದವರಿಗೆ ಹಣ ನೀಡಲು ಜನರಿಂದ ಸ್ವೀಕೃತವಾದ 136 ರೂ. ಅನ್ನು ಜಿಲ್ಲಾಧಿಕಾರಿಗಳ ಅಧೀನದಲ್ಲಿರುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪೃಕೃತಿ ವಿಕೋಪ ನಿಧಿಗೆ ನೀಡಲಾಗುವುದು ಎಂದು ಅಚ್ಚುತಕುಮಾರ್ ತಿಳಿಸಿದ್ದಾರೆ. (etbk)

ಪೆಗಾಸಸ್ ತಂತ್ರಾಂಶ ಗೂಢಚಾರಿಕೆ: ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆ, ತನಿಖೆಗೆ ತ್ರಿಸದಸ್ಯ ಸಮಿತಿ ರಚಿಸಿದ ‘ಸುಪ್ರೀಂ’

ಪೆಗಾಸಸ್ ತಂತ್ರಾಂಶ ಗೂಢಚಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದ್ದು, ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಮೂವರು ತಜ್ಞರನ್ನೊಳಗೊಂಡ ಸಮಿತಿ  ರಚಿಸಿದೆ.

Pegasus spyware

ನವದೆಹಲಿ: ಪೆಗಾಸಸ್ ತಂತ್ರಾಂಶ ಗೂಢಚಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದ್ದು, ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಮೂವರು ತಜ್ಞರನ್ನೊಳಗೊಂಡ ಸಮಿತಿ  ರಚಿಸಿದೆ.

ಪೆಗಾಸಸ್ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಯಾವುದೇ ನಿರ್ದಿಷ್ಟ ನಿರಾಕರಣೆ ಇಲ್ಲ. ಹೀಗಾಗಿ ಅರ್ಜಿದಾರರ ಪ್ರಾಥಮಿಕ ಹಂತದ ಸಲ್ಲಿಕೆಗಳನ್ನು ಒಪ್ಪಿಕೊಳ್ಳುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದ್ದು, ಈ ಸಂಬಂಧ ಸಮಿತಿ ರಚನೆ ಮಾಡಿದೆ. ಈ ಮೂವರು ಸದಸ್ಯರ ಪೆಗಾಸಸ್ ತನಿಖಾ ಸಮಿತಿಯ ಮುಖ್ಯಸ್ಥರಾಗಿ ಮಾಜಿ ನ್ಯಾಯಮೂರ್ತಿ ಆರ್ ವಿ ರವೀಂದ್ರನ್ ಅವರನ್ನು ಸುಪ್ರೀಂ ಕೋರ್ಟ್ ನೇಮಿಸಿದ್ದು, ಸಮಿತಿಯ ಇತರೆ ಸದಸ್ಯರಾಗಿ ಅಲೋಕ್ ಜೋಶಿ ಮತ್ತು ಸಂದೀಪ್ ಒಬೆರಾಯ್ ಅವರನ್ನು ನೇಮಕ ಮಾಡಲಾಗಿದೆ. ಈ ಸಮಿತಿಯ ಕಾರ್ಯವನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ಮಾಡುತ್ತದೆ.

ರಾಜಕೀಯ ಚರ್ಚೆಗೆ ಹೋಗದೇ ಮೌಲ್ಯ ಎತ್ತಿ ಹಿಡಿಯಲು ಶ್ರಮಪಡಬೇಕು. ಪ್ರತಿಯೊಬ್ಬ ಭಾರತೀಯನಿಗೂ ಖಾಸಗಿತನದ ರಕ್ಷಣೆ ನೀಡಬೇಕು. ನಾವು ಮಾಹಿತಿಯ ಯುಗದಲ್ಲಿ ಬದುಕುತ್ತಿದ್ದೇವೆ. ಕೆಲ ಅರ್ಜಿಗಳು ಕೇಂದ್ರ ಸರ್ಕಾರದ ನಿಷ್ಕ್ರಿಯತೆ ಬಗ್ಗೆ ಪ್ರಸ್ತಾಪಿಸಿವೆ. ಈ ತೀರ್ಪಿನಲ್ಲಿ ನಾವು ಖಾಸಗಿತನದ ಹಕ್ಕಿನ ಬಗ್ಗೆ ಚರ್ಚಿಸಿದ್ದೇವೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಭಾರಿ ಪರಿಣಾಮ ಬೀರುತ್ತೆ. ಶಾಸನದ ಮಾನ್ಯತೆ ಇಲ್ಲದೇ ಖಾಸಗಿತನದ ಹಕ್ಕಿನಲ್ಲಿ ಮೂಗುತೂರಿಸುವಿಕೆಗೆ ಅವಕಾಶವಿಲ್ಲ. ಖಾಸಗಿತನದ ಹಕ್ಕು ಅನ್ನು ಅತಿಕ್ರಮಿಸುವ ಮೂಲಕ ಮಾಧ್ಯಮ ಸ್ವಾತಂತ್ರ್ಯವನ್ನು ಕಡೆಗಣಿಸಲಾಗಲ್ಲ. ಖಾಸಗಿತನದ ಹಕ್ಕಿನಲ್ಲಿ ಮೂಗು ತೂರಿಸಲು ಮಸೂದೆ ಪಾಸ್ ಆಗಬೇಕು. ಸಾಂವಿಧಾನಿಕ ಅಗತ್ಯದ ಪರೀಕ್ಷೆ ಪಾಸ್ ಆಗಬೇಕು ಎಂದು ಸುಪ್ರೀಂಕೋರ್ಟ್​ ಸಿಜೆ ನೇತೃತ್ವದ ಪೀಠ ತನ್ನ ತೀರ್ಪಿನಲ್ಲಿ ಸ್ಪಷ್ಟವಾಗಿ ಅಭಿಪ್ರಾಯಪಟ್ಟಿದೆ.

ಪೆಗಾಸಸ್ ತಂತ್ರಾಂಶ ಬಳಸಿ ಗೂಢಚಾರಿಕೆ ಪ್ರಕರಣದಲ್ಲಿ ಕಾನೂನು ಎತ್ತಿ ಹಿಡಿಯುವುದೇ ನಮ್ಮ ಉದ್ದೇಶ ಎಂದು ಸಾರಿರುವ ಸುಪ್ರೀಂ ಕೋರ್ಟ್​ ಈ ಪ್ರಕರಣ ಆಧುನಿಕ ತಂತ್ರಜ್ಞಾನ ಬಳಕೆಗೆ ಸಂಬಂಧಿಸಿದೆ. ಆಧುನಿಕ ತಂತ್ರಜ್ಞಾನ ಬಳಕೆ ಬಗ್ಗೆ ‘ಸುಪ್ರೀಂ’ ಪರಿಶೀಲಿಸಿದೆ. ಸಾಂವಿಧಾನಿಕ ಮೌಲ್ಯ ಎತ್ತಿ ಹಿಡಿಯಲು ನಮ್ಮ ಶ್ರಮ ಎಂದು ಸಿಜೆಐ ರಮಣ ಆದೇಶಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

“ಒಂದೇ ಕಲ್ಲಿಗೆ ಎರಡು ಹಕ್ಕಿ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಕಕ್ಕಾಬಿಕ್ಕಿ!”

ವಿಶ್ಲೇಷಣೆ….. (- ಅನಾಮಿಕ) ​ಶಿರಸಿ ಮತ್ತು ಸಿದ್ದಾಪುರ, ಎರಡು ಕಣ್ಣುಗಳಿದ್ದಂತೆ, ಆದರೆ ಈ ಎರಡೂ ಕಣ್ಣುಗಳಿಗೆ ಒಂದೇ ಜೋಡಿ ಕನ್ನಡಕ! ಹೌದು, ಎರಡೂ ಕ್ಷೇತ್ರಗಳಿಗೆ...

ಕಾಳಗದಲ್ಲಿ “ಅಧ್ಯಕ್ಷ ಗಾದಿ”,.. ಲಾಭಿಯೇ ಮುಂದಿನ ಹಾದಿ..!??

Sirsi block congress issue….( ಓದುಗರ ವಿಶ್ಲೇಷಣೆ) ಶಿರಸಿ ಬ್ಲಾಕ್ ಕಾಂಗ್ರೆಸ್ ರಾಜಕೀಯ ಕಣದಲ್ಲಿ ಈಗ ಸಖತ್ ಟೆನ್ಷನ್! ಪರೇಡ್ ಮುಗಿಸಿದ ಬೆನ್ನಲ್ಲೇ, ಈಗ...

ಒಂದು ಪತ್ರ.. ಒಡೆದಾಳುವವರ ದಾಳವಾಗಬೇಡಿ ನಾಮಧಾರಿಗಳೆ…

ಮಾನ್ಯರೆ… ನಮಸ್ಕಾರಗಳು… ಕೆಲವು ದಿವಸಗಳಿಂದ ನಿಮಗೊಂದು ಪತ್ರ ಬರೆಯಬೇಕೆಂದುಕೊಂಡು ಯೋಚಿಸುತ್ತಾ ಈ ಬರಹ ಬರೆಯುತ್ತಿದ್ದೇನೆ. Samaajamukhi youtube channel, samajamukhi.net News ಮೂಲಕ ನೀವು...

ಓಣಿಕೇರಿ ಮಾಸ್ತ್ಯ ರಾಮ ನಾಯ್ಕ ನಿಧನ

ಸಿದ್ದಾಪುರ, ತಾಲೂಕಿನ ಕಿಲಾರ ಓಣಿಕೇರಿಯ ಹಿರಿಯ ಸಾಮಾಜಿಕ ಕಾರ್ಯಕರ್ತ ಮಾಸ್ತ್ಯಾ ರಾಮ ನಾಯ್ಕ ಮಂಗಳವಾರ ನಿಧನರಾದರು. ಮೂವರು ಗಂಡುಮಕ್ಕಳು ಸೇರಿ ಅಪಾರ ಬಂಧು ಬಳಗ...

ಯಾರಾಗ್ತಾರೆ…ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ?

ಉತ್ತರಕನ್ನಡಜಿಲ್ಲೆಯ೧೩ ಬ್ಲಾಕ್ಕಾಂಗ್ರೆಸ್ ಗಳ ವೇಟ್ ಒಂದಾದರೆ ಸಿದ್ದಾಪುರದ ತಾಲೂಕಾ ಕಾಂಗ್ರೆಸ್ ಬಲವೇ ಬೇರೆ . ಒಂದು ಕಾಲದಲ್ಲಿ ಬಂಗಾರಪ್ಪ ಒಲುವಿನಿಂದ ಇಡೀ ಜಿಲ್ಲೆ ಸಿದ್ದಾಪುರವನ್ನು...

Latest Posts

“ಒಂದೇ ಕಲ್ಲಿಗೆ ಎರಡು ಹಕ್ಕಿ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಕಕ್ಕಾಬಿಕ್ಕಿ!”

ವಿಶ್ಲೇಷಣೆ….. (- ಅನಾಮಿಕ) ​ಶಿರಸಿ ಮತ್ತು ಸಿದ್ದಾಪುರ, ಎರಡು ಕಣ್ಣುಗಳಿದ್ದಂತೆ, ಆದರೆ ಈ ಎರಡೂ ಕಣ್ಣುಗಳಿಗೆ ಒಂದೇ ಜೋಡಿ ಕನ್ನಡಕ! ಹೌದು, ಎರಡೂ ಕ್ಷೇತ್ರಗಳಿಗೆ ಒಬ್ಬರೇ ಶಾಸಕರು’. ಆದರೆ ಹೈಕಮಾಂಡ್ ಸೂತ್ರ ಮಾತ್ರ ಅತ್ತ ಶಿರಸಿಯಲ್ಲಿ ಬೆಂಕಿ ಹಚ್ಚಿದರೆ, ಇತ್ತ ಸಿದ್ದಾಪುರದಲ್ಲಿ ಅದೇ ಸೂತ್ರ ಸಾಹೇಬರಿಗೆ ಬಾಯಿಗೆ ಜಾರಿ ಬಿದ್ದ ತುಪ್ಪದಂತಾಗಿದೆ! ಬನ್ನಿ.. ಸಿದ್ದಾಪುರ...

Recommended For You

About the Author: Kanneshwar Naik

Leave a Reply

Your email address will not be published. Required fields are marked *