ಹೊಸನಗರದಲ್ಲಿ ಸಿದ್ದಾಪುರದ ಶಿಕ್ಷಕಿಯ ಆತ್ಮಹತ್ಯೆ

ಸಿದ್ಧಾಪುರ ಶಿರಳಗಿ ಮೂಲದ ಶಿಕ್ಷಕಿ ಪಲ್ಲವಿ ಆನಂದ ಪಾಟೀಲ್ ಹೊಸನಗರ ಹರಿದ್ರಾವತಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪಲ್ಲವಿ ಪಾಟೀಲ್‌ ಕೆಲವು ವರ್ಷಗಳ ಹಿಂದೆ ನಗರದ ಎಸ್.ವಿ. ಹೈಸ್ಕೂಲ್‌ ನಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತಿದ್ದರು. ಶಿರಳಗಿಯ ಕೃಷಿಕ ಆನಂದ ಶಿವಲಿಂಗ ಪಾಟೀಲ್‌ ರ ಮಗಳು ಪಲ್ಲವಿ ಪಾಟೀಲ್‌ ರನ್ನು ಹೊಸನಗರ ಹರಿದ್ರಾವತಿಯ ಹುಡುಗನಿಗೆ ವಿವಾಹ ಮಾಡಿ ಕಳುಹಿಸಲಾಗಿತ್ತು. ವಿವಾಹಿತ ಪಲ್ಲವಿ ಪಾಟೀಲ್‌ 6 ವರ್ಷಗಳ ಹಿರಿಯ ಮಗಳು ಮತ್ತು ಒಂದೂವರೆ ವರ್ಷದ ಹೆಣ್ಣು ಶಿಶುವನ್ನು ಹೊಂದಿದ್ದರು. ಆತ್ಮಹತ್ಯೆಯ ನಿಖರ ಕಾರಣ ತಿಳಿದು ಬಂದಿಲ್ಲ. ಇಬ್ಬರು ಹೆಣ್ಣು ಮಕ್ಕಳ ತಾಯಿ ಪಲ್ಲವಿ ಪಾಟೀಲ್‌ ಮಗುವನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗಾಳಿಸುದ್ದಿ ಹರಿದಾಡುತ್ತಿದೆ ಆದರೆ ಪಲ್ಲವಿ ಮಕ್ಕಳನ್ನು ಬಿಟ್ಟು ತಾನೊಬ್ಬಳೇ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಬಗ್ಗೆ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದೆ ಎಂದು ಸಮಾಜಮುಖಿಯ ಪಕ್ಕಾ ಮಾಹಿತಿದಾರರು ಸ್ಪಷ್ಟಪಡಿಸಿದ್ದಾರೆ.

ಮಡಿವಾಳ ಸಮಾಜದ ಸಂಘದ ಪದಾಧಿಕಾರಿಗಳ ಆಯ್ಕೆ- ಸಿದ್ದಾಪುರ: ತಾಲೂಕಿನ ರಾಘವೇಂದ್ರ ಮಠ ಸಭಾಭನದಲ್ಲಿ ಚಿತ್ರದುರ್ಗ ಮಡಿವಾಳ ಮಾಚಿದೇವ ಮಠದ ಶ್ರೀ ಶ್ರೀ ಬಸವ ಮಾಚಿದೇವ ಸ್ವಾಮಿಜಿಗಳರವರ ಉಪಸ್ಥಿತಿಯಲ್ಲಿ ಮಂಗಳವಾರ ತಾಲೂಕು ಮಡಿವಾಳ ಸಮಾಜದ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.
ಹಳೆ ಸಂಘದ ಅವಧಿ ಕೊನೆಗೊಂಡಿದ್ದರಿಂದ ಸಂಘದ ನೂತನ ಅಧ್ಯಕ್ಷ ಮತ್ತು ಕಾರ್ಯದರ್ಶಿ ಆಯ್ಕೆ ಪ್ರಕ್ರಿಯೆ ನಡೆಯಿತು. ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಪಿ ಬಿ ಹೊಸೂರ ಹಾಗೂ ಕಾರ್ಯದರ್ಶಿಯಾಗಿ ಸುರೇಶ ಮಡಿವಾಳ ಕಡಕೇರಿ ಯವರನ್ನು ಸರ್ವ ಸಮ್ಮಮತದಿಂದ ಆಯ್ಕೆ ಮಾಡಲಾಯಿತು. ಸಂಘದ ಉಳಿದ ಪದಾಧಿಕಾರಿಗಳು ಮತ್ತು ಸದಸ್ಯರನ್ನು ಆಯ್ಕೆ ಮಾಡುವ ಅಧಿಕಾರವನ್ನು ಅಧ್ಯಕ್ಷ , ಕಾರ್ಯದರ್ಶಿಗಳಿಗೆ ನೀಡಲಾಯಿತು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *