
ಸಾಗರ ತಾಲೂಕಿನ ಗ್ರಾಮೀಣ ಪ್ರದೇಶ ಹಾಗೂ ನಗರ ಪ್ರದೇಶಗಳಲ್ಲಿ ಗೋವು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ: ಸಾಗರ ತಾಲೂಕಿನಲ್ಲಿ ನಡೆದ ಗೋವು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಇತ್ತೀಚೆಗೆ ಸಾಗರ ತಾಲೂಕಿನ ಗ್ರಾಮೀಣ ಪ್ರದೇಶ ಹಾಗೂ ನಗರ ಪ್ರದೇಶಗಳಲ್ಲಿ ಗೋವು ಕಳ್ಳತನ ಮಾಡುತ್ತಿದ್ದ ಐವರು ಆರೋಪಿಗಳನ್ನು ಸಾಗರ ಪೇಟೆ ಠಾಣೆ ಪೊಲೀಸರು ಹಾಗೂ ಸಾಗರ ಗ್ರಾಮಾಂತರ ಠಾಣೆ ಪೊಲೀಸರ ಜಂಟಿ ಕಾರ್ಯಾಚರಣೆಯಿಂದ ಬಂಧಿಸಲಾಗಿದೆ.
