ಉಪ ಚುನಾವಣೆ ಫಲಿತಾಂಶ: ಹಾನಗಲ್ ಕ್ಷೇತ್ರದ ಕೈ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು, ತವರು ಜಿಲ್ಲೆಯಲ್ಲಿ ಸಿಎಂಗೆ ಮುಖಭಂಗ! ಸಿಂದಗಿಯಲ್ಲಿ ಬಿಜೆಪಿಗೆ ಜಯ

ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು ಸಾಧಿಸಿದ್ದಾರೆ. ಈ ಮೂಲಕ  ತವರು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತೀವ್ರ ಮುಖಭಂಗವಾಗಿದೆ.ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಜಯ ಸಾಧಿಸಿದ್ದಾರೆ.

Srinivas_mane1

ಹಾನಗಲ್: ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು ಸಾಧಿಸಿದ್ದಾರೆ. ಈ ಮೂಲಕ  ತವರು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತೀವ್ರ ಮುಖಭಂಗವಾಗಿದೆ.ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಜಯ ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ತನ್ನ ಸಮೀಪದ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನ ಅವರಿಗಿಂತ 7,373  ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಕೇಂದ್ರ ಚುನಾವಣಾ ಆಯೋಗ ಅಧಿಕೃತ ಮಾಹಿತಿ ನೀಡಿದೆ. 

ಶ್ರೀನಿವಾಸ ಮಾನೆ 87, 490 ಮತಗಳನ್ನು ಪಡೆದರೆ, ಶಿವರಾಜ್ ಸಜ್ಜನರಗೆ  80, 117  ಮತಗಳು ಸಿಕ್ಕಿವೆ. ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್ 927 ಮತಗಳನ್ನು ಪಡೆದಿದ್ದಾರೆ.

ಹಾನಗಲ್ ಕ್ಷೇತ್ರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯ ಕ್ಷೇತ್ರವಾಗಿದ್ದು, ಭಾರೀ ಪ್ರತಿಷ್ಠೆಗೆ ಕಾರಣವಾಗಿತ್ತು. ಮುಖ್ಯಮಂತ್ರಿ, ಸಚಿವರು ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಭಾರೀ ಪ್ರಚಾರ ನಡೆಸಿದ್ದರು.

ಸಿಂದಗಿ ಕ್ಷೇತ್ರದ ಉಪ ಚುನಾವಣೆಯ 22 ಸುತ್ತಿನ ಮತ ಎಣಿಕೆಯಲ್ಲಿ ಎಲ್ಲಾ ಸುತ್ತುಗಳಲ್ಲಿ ಮುನ್ನಡೆ ಸಾಧಿಸಿಕೊಂಡು ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ 30 ಸಾವಿರಕಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದಾರೆ.

ಪ್ರತಿ ಸುತ್ತಿನಲ್ಲಿಯೂ ಭೂಸನೂರ ತಮ್ಮ ನಿಕಟಸ್ಪರ್ಧಿ ಕಾಂಗ್ರೆಸ್ ನ ಅಶೋಕ್ ಮನಗುಳಿಯವರಿಗಿಂತ 2,500 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದರು. ವಿಜಯಪುರದ ವಡೆಯರ್ ಭವನ ಸೈನಿಕ ಶಾಲೆಯಲ್ಲಿ ಮತ ಎಣಿಕೆ ಕಾರ್ಯ ನಡೆಯಿತು. 

ಬಿಜೆಪಿ 93,380 ಮತಗಳನ್ನು ಪಡೆದುಕೊಂಡಿದೆ, ಕಾಂಗ್ರೆಸ್ 62,292 ಮತಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ ಮತ್ತು ಜೆಡಿಎಸ್ (ಎಸ್) ಕೇವಲ 4,321 ಮತಗಳನ್ನು ಪಡೆಯುವ ಮೂಲಕ ಮೂರನೇ ಸ್ಥಾನದಲ್ಲಿದೆ, ಅಲ್ಲಿ ಅದು ಠೇವಣಿ ಕಳೆದುಕೊಂಡಿತು. ಇದೇ ವೇಳೆ 1,029 ಮಂದಿ ನೋಟಾಕ್ಕೆ ಮತ ನೀಡಿದ್ದಾರೆ. ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಶೇ.69.47ರಷ್ಟು ಮತದಾನವಾಗಿದೆ.

ರಮೇಶ ಭೂಸನೂರ ಸಿಂದಗಿ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಒಂದೇ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾದ ಮೊದಲ ರಾಜಕಾರಣಿಯಾಗಿದ್ದಾರೆ. 

ಈ ಸಂದರ್ಭದಲ್ಲಿ ಜೊತೆ ಮಾತನಾಡಿದ ರಮೇಶ ಭೂಸನೂರ, “ನಾನು 25,000 ಮತಗಳ ಅಂತರದಿಂದ ಚುನಾವಣೆಯಲ್ಲಿ ಗೆಲ್ಲುತ್ತೇನೆ ಎಂದು ವಿಶ್ವಾಸ ಹೊಂದಿದ್ದೆ ಆದರೆ ಜನರು ನನ್ನನ್ನು 31,088 ಮತಗಳ ಮುನ್ನಡೆಯೊಂದಿಗೆ ಆಯ್ಕೆ ಮಾಡಿದ್ದಾರೆ. ನನ್ನ ಮತ್ತು ನನ್ನ ಪಕ್ಷದ ಮೇಲೆ ವಿಶ್ವಾಸ ತುಂಬಿದ ಮತದಾರರಿಗೆ ನಾನು ಧನ್ಯವಾದ ಹೇಳುತ್ತೇನೆ. ನನ್ನ ಗೆಲುವಿಗಾಗಿ ಸಚಿವರಾದ ವಿ ಸೋಮಣ್ಣ, ಸಿ ಸಿ ಪಾಟೀಲ್ ಮತ್ತು ಗೋವಿಂದ್ ಕಾರಜೋಳ ಸೇರಿದಂತೆ ಹಿರಿಯ ನಾಯಕರು ಮೂರು ವಾರಗಳ ಕಾಲ ಕ್ಷೇತ್ರದಲ್ಲಿ ತೀವ್ರ ಪ್ರಚಾರ ನಡೆಸಿದರು ಎಂದು ಹೇಳಿದರು.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *