ಹಿಮಾಚಲ ಉಪ ಚುನಾವಣೆ ಫಲಿತಾಂಶ: ಎಲ್ಲಾ 4 ಸ್ಥಾನಗಳಲ್ಲೂ ಕಾಂಗ್ರೆಸ್ ಗೆಲುವು, ಆಡಳಿತರೂಢ ಬಿಜೆಪಿಗೆ ತೀವ್ರ ಮುಖಭಂಗ
ಹಿಮಾಚಲ ಪ್ರದೇಶದ ಒಂದು ಲೋಕಸಭಾ ಹಾಗೂ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಆಡಳಿತಾರೂಢ ಬಿಜೆಪಿಗೆ ಭಾರಿ ಮುಖಭಂಗವಾಗಿದೆ.
ಶಿಮ್ಲಾ: ಹಿಮಾಚಲ ಪ್ರದೇಶದ ಒಂದು ಲೋಕಸಭಾ ಹಾಗೂ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಆಡಳಿತಾರೂಢ ಬಿಜೆಪಿಗೆ ಭಾರಿ ಮುಖಭಂಗವಾಗಿದೆ.
ಮಂಡಿ ಲೋಕಸಭಾ ಕ್ಷೇತ್ರ ಹಾಗೂ ಮೂರು ವಿಧಾನಸಭಾ ಕ್ಷೇತ್ರಗಳಾದ ಅರ್ಕಿ, ಫತೇಪುರ್ ಮತ್ತು ಜುಬ್ಬಲ್-ಕೋಟ್‌ಖಾಯ್ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ.
ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರಿಗೆ ಪ್ರತಿಷ್ಠೆಯಾಗಿದ್ದ ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಗೇಡಿಯರ್ ಖುಶಾಲ್ ಠಾಕೂರ್ (ನಿವೃತ್ತ) ಅವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಪ್ರತಿಭಾ ಸಿಂಗ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
2019 ರಲ್ಲಿ 3.98 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದ ಎರಡು ಬಾರಿ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ಅವರ ನಿಧನದಿಂದ ತೆರವಾಗಿದ್ದ ಮಂಡಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿತ್ತು.
ಆರ್ಕಿ, ಜುಬ್ಬಲ್-ಕೋಟ್‌ಖೈ ಮತ್ತು ಫತೇಪುರ್ ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. (kpc)
ಆಂಧ್ರ ಉಪ ಚುನಾವಣೆ: ವೈಎಸ್‌ಆರ್ ಕಾಂಗ್ರೆಸ್ ಅಭ್ಯರ್ಥಿ 90 ಸಾವಿರ ಮತಗಳ ಅಂತರದಿಂದ ಗೆಲುವು; ಕಾಂಗ್ರೆಸ್, ಬಿಜೆಪಿಗೆ ಠೇವಣಿ ನಷ್ಟ
ಆಂಧ್ರ ಪ್ರದೇಶದ ಬದ್ವೇಲ್ (ಎಸ್‌ಸಿ) ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಅಭ್ಯರ್ಥಿ 90 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ…
ಕಡಪ: ಆಂಧ್ರ ಪ್ರದೇಶದ ಬದ್ವೇಲ್ (ಎಸ್‌ಸಿ) ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಅಭ್ಯರ್ಥಿ 90 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ ಕ್ಷೇತ್ರವನ್ನು ಉಳಿಸಿಕೊಂಡಿದೆ. ಆದರೆ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಠೇವಣಿ ಕಳೆದುಕೊಂಡಿವೆ.
ವೈಎಸ್‌ಆರ್ ಕಾಂಗ್ರೆಸ್ ಅಭ್ಯರ್ಥಿ ಡಾ ಜಿ ಸುಧಾ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಪಿ ಸುರೇಶ್ ವಿರುದ್ಧ ಮೊದಲ ಸುತ್ತಿನಿಂದಲೇ ಮುನ್ನಡೆ ಕಾಯ್ದುಕೊಂಡರು. ಪ್ರಮುಖ ಪ್ರತಿಪಕ್ಷವಾದ ಟಿಡಿಪಿ ಮತ್ತು ಜನಸೇನಾ ಪಕ್ಷಗಳು ಉಪಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.
ಈ ವರ್ಷದ ಮಾರ್ಚ್‌ನಲ್ಲಿ ವೈಎಸ್‌ಆರ್‌ಸಿ ಶಾಸಕ ಡಾ ಜಿ ವೆಂಕಟಸುಬ್ಬಯ್ಯ ಅವರ ನಿಧನದಿಂದ ತೆರವಾಗಿದ್ದ ಬದ್ವೇಲ್ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು, ವೆಂಕಟಸುಬ್ಬಯ್ಯ ಅವರ ಪತ್ನಿ ಡಾ.ಸುಧಾ ಅವರು ಉಪಚುನಾವಣೆಯಲ್ಲಿ ವೈಎಸ್ ಆರ್ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದರು. ಬಿಜೆಪಿ ಯುವ ಮುಖಂಡ ಪಿ.ಸುರೇಶ್ ಅವರನ್ನು ಕಣಕ್ಕಿಳಿಸಿತ್ತು. (ಕ.ಪ್ರ.ಡಾ.)