ಮಣ್ಣಿನಿಂದ ಎದ್ದುಬಂದ ಪುನೀತ್‌ ರಾಜ್‌ ಕುಮಾರ್!!?

Thumbnail image

ಮಣ್ಣಿನಲ್ಲಿ ಅರಳಿದ ‘ನಟಸಾರ್ವಭೌಮ’: ಅಪ್ಪು ಮೂರ್ತಿ ಸಿದ್ಧಪಡಿಸಿದ ಪ್ರಾಧ್ಯಾಪಕ

ಮಾಜಾಳಿಯ ಗಿರಿಜಾಬಾಯಿ ಸೈಲ್ ಎಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಭಿನಂದನ್ ಬಾಂದೇಕರ್ ಅವರು ನಟ ಪುನೀತ್ ರಾಜಕುಮಾರ್​ ಅವರ ಎರಡು ಅಡಿ ಎತ್ತರದ ಮಣ್ಣಿನ ಮೂರ್ತಿ ತಯಾರಿಸುವ ಮೂಲಕ ನೆಚ್ಚಿನ ನಟನನ್ನು ನೆನೆದಿದ್ದಾರೆ.

ಕಾರವಾರ: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನವಾಗಿ ವಾರ ಕಳೆಯುತ್ತಿದ್ದರೂ ಇನ್ನೂ ಕೂಡ ಅವರ ಅಭಿಮಾನಿಗಳಿಗೆ ಈ ಕಹಿ ಘಟನೆಯನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಕಾರವಾರದ ಪ್ರಾಧ್ಯಾಪಕರೊಬ್ಬರು ಪುನೀತ್ ಅವರ ಮಣ್ಣಿನ ಮೂರ್ತಿಯೊಂದನ್ನು ತಯಾರಿಸುವ ಮೂಲಕ ಅಪ್ಪುಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ

ಮಣ್ಣಿನಲ್ಲಿ ಅರಳಿದ ‘ನಟಸಾರ್ವಭೌಮ’

ತಾಲೂಕಿನ ಮಾಜಾಳಿಯ ಗಿರಿಜಾಬಾಯಿ ಸೈಲ್ ಎಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಭಿನಂದನ್ ಬಾಂದೇಕರ್ ಅವರು ಪುನೀತ್ ಅವರ ಎರಡು ಅಡಿ ಎತ್ತರದ ಮಣ್ಣಿನ ಮೂರ್ತಿ ತಯಾರಿಸುವ ಮೂಲಕ ನೆಚ್ಚಿನ ನಟನನ್ನು ನೆನೆದಿದ್ದಾರೆ.

ಅಭಿನಂದನ್ ಅವರದ್ದು ಕಲಾವಿದರ ಕುಟುಂಬ. ಕಳೆದ ಹತ್ತು- ಹದಿನೈದು ವರ್ಷಗಳಿಂದ ಅಭಿನಂದನ್ ಅವರ ತಂದೆ ಕಾಜುಬಾಗದ ಸಾರ್ವಜನಿಕ ಗಣಪತಿಯನ್ನು ಮಾಡಿಕೊಡುತ್ತಿದ್ದು, ಅಭಿನಂದನ್ ಕೂಡ ತಂದೆಗೆ ಸಹಾಯ ಮಾಡುತ್ತಾರೆ. ವರ್ಷದ ಹಿಂದೆ ಮೃತಪಟ್ಟಿದ್ದ ಸುಶಾಂತ್ ಸಿಂಗ್ ರಜಪೂತ್ ಅವರ ಮಣ್ಣಿನ ಮೂರ್ತಿಯನ್ನೂ ಅಭಿನಂದನ್ ನಿರ್ಮಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದರು. ಇದೀಗ ಅಪ್ಪು ಅವರ ಮಣ್ಣಿನ ಮೂರ್ತಿಯನ್ನು ಮೂರು ದಿನಗಳಲ್ಲಿ ನಿರ್ಮಿಸಿ, ಪುನೀತ್ ಅಭಿಮಾನಿಗಳ ಮನ ಗೆದ್ದಿದ್ದಾರೆ.‌

https://samajamukhi.net/2021/10/30/?fbclid=IwAR2pz_SQ8kCjqbZLAWX4ezf_p_2zxEruZU_mHDdIShRjmHXsEegyF5kMFaM

ಸಾಮಾಜಿಕ ಜಾಲತಾಣಗಳಲ್ಲಿ ಮೂರ್ತಿ ನಿರ್ಮಾಣದ ವಿಡಿಯೋ ಹಂಚಿಕೊಂಡಿರುವ ಅವರಿಗೆ ಮೆಚ್ಚುಗೆಗಳ ಮಹಾಪೂರವೇ ಹರಿದುಬಂದಿದೆ. ಜೊತೆಗೆ ಈಗಾಗಲೇ ಚಿತ್ರದುರ್ಗ ಹಾಗೂ ಬೆಂಗಳೂರಿನಿಂದ ತಮಗೂ ಮೂರ್ತಿ ಸಿದ್ಧಪಡಿಸಿಕೊಡುವಂತೆ ಆರ್ಡರ್ ಕೂಡ ಬಂದಿದೆಯಂತೆ.

ಈ ಬಗ್ಗೆ ಮಾತನಾಡಿದ ಅಭಿನಂದನ್, ನಮ್ಮದು ಕೊಂಕಣಿ ಭಾಷಿಗರ ಕುಟುಂಬವಾದರೂ ನಾವು ಕನ್ನಡದ ಅಭಿಮಾನಿಗಳು. ಪುನೀತ್ ರಾಜಕುಮಾರರ ಬಗ್ಗೆ ಅವರು ಬದುಕಿದ್ದಾಗ ಕೇಳಿದ್ದಕ್ಕಿಂತ ಹೆಚ್ಚು ಅವರ ನಿಧನ‌ದ ನಂತರ ತಿಳಿಯಲ್ಪಟ್ಟೆವು. ಅವರ ಸಾಮಾಜಿಕ ಕಾರ್ಯಗಳಿಗೆ ಇಡೀ ಭಾರತವೇ ತಲೆಬಾಗಿದೆ. ಹೀಗಾಗಿ ಅಂಥ ಅಗಲಿದ ಮಹಾಚೇತನಕ್ಕೆ ನನ್ನ ಕೈಲಾದಷ್ಟು ಸೇವೆ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದ್ದೇನೆ ಎಂದರು. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *