

ಕರ್ನಾಟಕ ವಿಧಾನ ಪರಿಷತ್ನ 25 ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ.

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ನ 25 ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ.
ರಾಜ್ಯ ಮೇಲ್ಮನೆಯ 25 ಸ್ಥಾನಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದ್ದು ಡಿಸೆಂಬರ್ 14ರಂದು ಫಲಿತಾಂಶ ಪ್ರಕಟವಾಗಿಲಿದೆ. ನವೆಂಬರ್ 16ರಂದು ಮೇಲ್ಮನೆ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದ್ದು, ನವೆಂಬರ್ 23ರಂದು ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾಗಿದೆ.
ನವೆಂಬರ್ 24ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು ನವೆಂಬರ್ 26 ನಾಮಪತ್ರ ಹಿಂಪಡೆಯಲು ಕೊನೇ ದಿನವಾಗಿದೆ. ಡಿಸೆಂಬರ್ 10 ಶುಕ್ರವಾರ ಬೆಳಗ್ಗೆ 8 ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಉತ್ತರ ಕನ್ನಡ, ಧಾರವಾಡ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಮಂಡ್ಯ, ಕೋಲಾರ, ಕೊಡಗು ಮತ್ತು ಮೈಸೂರು ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರಗಳಿಂದ ಚುನಾವಣೆ ನಡೆಯಲಿದೆ.
