ಕೇರಳ: ಕರ್ನಾಟಕದ ನಕ್ಸಲ್‌ ನಾಯಕರಾದ ಬಿ.ಜಿ ಕೃಷ್ಣಮೂರ್ತಿ ಮತ್ತು ಸಾವಿತ್ರಿ ಬಂಧನ!

ಮಹತ್ವದ ಬೆಳವಣಿಗೆಯೊಂದರಲ್ಲಿ ಕರ್ನಾಟಕ ಮೂಲದ ನಕ್ಸಲ್‌ ನಾಯಕರಾದ  ಬಿ.ಜಿ.ಕೃಷ್ಣಮೂರ್ತಿ ಮತ್ತು ಸಾವಿತ್ರಿ ಅವರನ್ನು ಕೇರಳದ ಭಯೋತ್ಪಾದನಾ ನಿಗ್ರಹ ಪಡೆ ದಳ ಬಂಧಿಸಿದೆ.

Representational image

ಕೋಯಿಕ್ಕೋಡ್‌ : ಮಹತ್ವದ ಬೆಳವಣಿಗೆಯೊಂದರಲ್ಲಿ ಕರ್ನಾಟಕ ಮೂಲದ ನಕ್ಸಲ್‌ ನಾಯಕರಾದ  ಬಿ.ಜಿ.ಕೃಷ್ಣಮೂರ್ತಿ ಮತ್ತು ಸಾವಿತ್ರಿ ಅವರನ್ನು ಕೇರಳದ ಭಯೋತ್ಪಾದನಾ ನಿಗ್ರಹ ಪಡೆ ದಳ ಬಂಧಿಸಿದೆ.

ಕೃಷ್ಣಮೂರ್ತಿ ಅವರು ಕರ್ನಾಟಕದ ಶೃಂಗೇರಿಯವರು. ನಕ್ಸಲ್‌ ವಲಯದಲ್ಲಿ ಅವರನ್ನು ‘ಬಿಜಿಕೆ’ ಎಂದೇ ಕರೆಯಲಾಗುತ್ತದೆ. ಸಿಪಿಐನ (ಮಾವೊವಾದಿ) ಪಶ್ಚಿಮ ಘಟ್ಟಗಳ ವಿಶೇಷ ವಲಯ ಸಮಿತಿಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಕರ್ನಾಟಕ ಮತ್ತು ವಯನಾಡು ಗಡಿ ಪ್ರದೇಶದಲ್ಲಿ ಎಟಿಎಸ್‌ ನಡೆಸಿದ ಕಾರ್ಯಾಚರಣೆ ವೇಳೆ ಪಶ್ಚಿಮ ಘಟ್ಟವಲಯ ಸಮಿತಿ ಕಾರ್ಯದರ್ಶಿ ಬಿ.ಜಿ.ಕೃಷ್ಣಮೂರ್ತಿ ಮತ್ತು ಕಬನಿದಳಂ ಕೇಡರ್‌ನ ಸಾವಿತ್ರಿಯನ್ನು ಬಂಧಿಸಲಾಗಿದೆ. ಕೃಷ್ಣಮೂರ್ತಿ, ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಮೂಲದ ವ್ಯಕ್ತಿಯಾಗಿದ್ದರೆ, ಸಾವಿತ್ರಿ ಚಿಕ್ಕಮಗಳೂರು ಜಿಲ್ಲೆ ಕಳಸಮೂಲದವಳು.

ಕೃಷ್ಣಮೂರ್ತಿ ಶೃಂಗೇರಿ ತಾಲೂಕು ಭುವನಹಡ್ಲು ಗ್ರಾಮದವನು. ಶಿವಮೊಗ್ಗದಲ್ಲಿ ನ್ಯಾಯಾಂಗ ಪದವಿ ಪಡೆದಿದ್ದ ಈತ, ಅಲ್ಲಿಯೇ ಸಾಕಷ್ಟುಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದ. ಬಳಿಕ ಪಶ್ಚಿಮ ಘಟ್ಟ ಉಳಿಸಿ ಹೋರಾಟ, ಕುದುರೆಮುಖ ಉಳಿಸಿ ಮೊದಲಾದ ಹೋರಾಟಗಳ ಮೂಲಕ ಪ್ರವರ್ಧಮಾನಕ್ಕೆ ಬಂದು ಬಳಿಕ ಇದ್ದಕ್ಕಿದ್ದಂತೆ ನಕ್ಸಲ್‌ ವಲಯದಲ್ಲಿ ಕಾಣಿಸಿಕೊಂಡಿದ್ದ. ಬಳಿಕ ಕರ್ನಾಟಕದಲ್ಲಿ ನಕ್ಸಲ್‌ ಚಳವಳಿಯನ್ನು ಕಾಯ್ದಿಡುವಲ್ಲಿ, ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ.

ಹೊಸಗದ್ದೆ ಮೂಲದ ಪ್ರಭಾ ಎಂಬ ನಕ್ಸಲ್‌ ಕಾರ್ಯಕರ್ತೆಯನ್ನು ವಿವಾಹವಾಗಿದ್ದ ಈತ, ಕರ್ನಾಟಕ ಭಾಗದಲ್ಲಿ ನಕ್ಸಲ್‌ ಸಂಘಟನೆಗೆ ಹಿನ್ನಡೆಯಾದ ಬಳಿಕ ಕೇರಳದತ್ತಮುಖ ಮಾಡಿದ್ದ. ಈತನ ವಿರುದ್ಧ ಚಿಕ್ಕಮಗಳೂರು, ಶಿವಮೊಗ್ಗ, ಮಂಗಳೂರು, ಉಡುಪಿ ಜಿಲ್ಲೆಗಳಲ್ಲಿ ಹತ್ಯೆ ಸೇರಿದಂತೆ 30ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. 2005ರಲ್ಲಿ ಸಾಕೇತ್‌ ರಾಜನ್‌ ಹತ್ಯೆ ನಂತರ ಅವರು ಪಕ್ಷದ ನಾಯಕತ್ವ ವಹಿಸಿಕೊಂಡರು. ಸಾವಿತ್ರಿ ಅವರು ಸಂಘಟನೆಯ ‘ಕಬನಿ ದಳಂ’ನ ಕಮಾಂಡರ್‌ ಆಗಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *