

ಸಿದ್ದಾಪುರ
ಜನತೆ ಆರೋಗ್ಯವಂತರಾಗಿದ್ದರೆ ಸಮಾಜಕ್ಕೆ ಹೆಚ್ಚಿನ ಕೊಡುಗೆ ನೀಡಲು ಸಾಧ್ಯ. ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವದು ಅಗತ್ಯವಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ|ಲಕ್ಮಿಕಾಂತ ನಾಯ್ಕ ಹೇಳಿದರು.
ಅವರು ಪಟ್ಟಣದ ಬಾಲಭವನದಲ್ಲಿ ತಾಲೂಕು ನಿವೃತ್ತ ನೌಕರರ ಸಂಘ ಆಯೋಜಿಸಿದ ನಿವೃತ್ತ ನೌಕರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಜೀವಿತ ಪ್ರಮಾಣ ಪತ್ರ ಒದಗಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶರೀರದ ಎಲ್ಲ ಅಂಗಗಳಿಗಿAತ ಮುಖ್ಯವಾದದ್ದು ಹೃದಯ. ಅದರ ಕುರಿತು ಹೆಚ್ಚಿನ ಕಾಳಜಿ ಅಗತ್ಯ. ಪ್ರತಿ ೬ ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವದರಿಂದ ಮುಂದಾಗಬಹುದಾದ ಅನಾಹುತವನ್ನು ನಿವಾರಿಸಿಕೊಳ್ಳುವದು ಸಾಧ್ಯವಾಗುತ್ತದೆ. ವಿನಾ:ಕಾರಣ ದೇಹವನ್ನು ದಂಡಿಸಿಕೊಳ್ಳುವ ಅಗತ್ಯವಿಲ್ಲ. ನಿಯಮಿತ ಓಡಾಟ, ಪ್ರಾಣಾಯಾಮ ಆರೋಗ್ಯವನ್ನು ಸುಸ್ಥಿರವಾಗಿಡಲು ಸಹಾಯಕವಾಗುತ್ತದೆ. ನಿವೃತ್ತರು ಆರೋಗ್ಯವಂತರಾಗಿದ್ದರೆ ಸಮಾಜ ಸಕ್ರೀಯವಾಗಿರುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ತಾಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಗೌಡರ್ ಮಾತನಾಡಿ ಪ್ರತಿ ವರ್ಷ ನಿವೃತ್ತ ನೌಕರರು ಬ್ಯಾಂಕುಗಳಿಗೆ ಜೀವಿತ ಪ್ರಮಾಣಪತ್ರ ಸಲ್ಲಿಸಬೇಕಿದ್ದು ಈ ಕುರಿತಂತೆ ಅವರಿಗೆ ಹಲವು ಸಮಸ್ಯೆಗಳು ಎದುರಾಗುತ್ತಿದ್ದವು. ಅದನ್ನು ನಿವಾರಿಸುವ ದೃಷ್ಟಿಯಿಂದ ಎಲ್ಲ ರಾಷ್ಟಿçಕೃತ ಬ್ಯಾಂಕುಗಳ ವ್ಯವಸ್ಥಾಪಕರನ್ನು ಒಂದೆಡೆ ಸೇರಿಸಿ, ಸ್ಥಳದಲ್ಲೇ ನಿವೃತ್ತ ನೌಕರರಿಗೆ ಜೀವಿತ ಪ್ರಮಾಣಪತ್ರ ಒದಗಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ. . ಬ್ಯಾಂಕುಗಳ ವ್ಯವಸ್ಥಾಪಕರು ಮಾನವೀಯ ಕಾಳಜಿಯಿಂದ ಭಾಗಿಯಾಗಿದ್ದಾರೆ. ಜಿಲ್ಲೆಯಲ್ಲೇ ಇದು ಪ್ರಥಮವಾಗಿದ್ದು ಉಳಿದ ತಾಲೂಕಿನವರಿಗೂ ಇದು ಮಾದರಿಯಾಗಿದೆ. ನಿವೃತ್ತರಿಗೆ ಆರೋಗ್ಯ ತಪಾಸಣೆಯನ್ನೂ ಮಾಡಲಾಗುತ್ತಿದೆ ಎಂದರು.


ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಸ್.ಬಿ.ಐ. ವ್ಯವಸ್ಥಾಪಕ ರವಿಕುಮಾರ್, ಬ್ಯಾಂಕ್ ಆಪ್ ಬರೋಡಾದ ವ್ಯವಸ್ಥಾಪಕ ರಘು, ಕೆನರಾ ಬ್ಯಾಂಕ್ ವ್ಯವಸ್ಥಾಪಕ ಭರತ್, ಸಿಂಡಿಕೇಟ ಬ್ಯಾಂಕ್ ವ್ಯವಸ್ಥಾಪಕ ಅಭಿಷೇಕ್ ಬ್ಯಾಂಕುಗಳು ನಿವೃತ್ತರಿಗೆ ನೀಡುವ ಸೇವೆ ಹಾಗೂ ಅವರು ವ್ಯವಹರಿಸಬೇಕಾದ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ನಿವೃತ್ತ ನೌಕರರ ಸಂಘದ ಕಾರ್ಯದರ್ಶಿ ವಾಸುದೇವ ಶೇಟ್, ಖಜಾಂಚಿ ಎನ್.ವಿ.ಹೆಗಡೆ ಉಪಸ್ಥಿತರಿದ್ದರು.
ಮೀರಾ ಹಬ್ಬು ಪ್ರಾರ್ಥಿಸಿದರು. ಜಿ.ಜಿ.ಹೆಗಡೆ ಬಾಳಗೋಡ ನಿರೂಪಿಸಿದರು. ಸಂಘದ ಎಲ್ಲ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






