ಜನಧನ್ ಖಾತೆಗಳಿಂದ ಸಾವಿರಾರು ಕೋಟಿ ಕಳುವಾಗಿರುವ ಶಂಕೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶಂಕೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಜನಧನ್ ಖಾತೆಗಳಿಂದ ಸಾವಿರಾರು ಕೋಟಿ ಕಳುವಾಗಿರುವ ಶಂಕೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶಂಕೆ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಬದಲಾವಣೆ ಕುರಿತು ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಪ್ರತಿ ಜನಧನ್ ಖಾತೆಯ ಮೂಲಕ ಒಂದು ಅಥವಾ ಎರಡು ರೂಪಾಯಿ ಕದ್ದಿರುವ ಮಾಹಿತಿಯಿದೆ. ಇದರಲ್ಲಿ ಎರಡೂ ಪಕ್ಷಗಳು ಶಾಮೀಲಾಗಿವೆ. ಇದೊಂದು ಅಂತರರಾಷ್ಟ್ರೀಯ ಮಟ್ಟದ ಹಗರಣ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕ್ರಮ ಕೈಗೊಳ್ಳಬೇಕಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಬಗ್ಗೆ ಯಾರೋ ಮಾಹಿತಿ ನೀಡಿದ್ದಾರೆ. ಅವರೂ ಈ ವಿಚಾರವನ್ನು ಗಂಭೀರವಾಗಿಪರಿಗಣಿಸಿದ್ದಾರೆಎಂದು ಹೇಳಿದರು.
ಬಿಟ್ಕಾಯಿನ್ ಹಗರಣದ ಪ್ರಮುಖ ಆರೋಪಿಗೆ ಜಾಮೀನು ಸಿಕ್ಕಿದೆ. ಇದು ಹೇಗೆ ಸಾಧ್ಯವಾಯಿತು? ಜಾಮೀನು ಕೊಡಲು ವಾದಿಸಿದ್ದು, ಜಾಮೀನು ಕೊಟ್ಟವರು ಯಾರು? ಬಿಟ್ಕಾಯಿನ್ ಪ್ರಕರಣದಲ್ಲಿ ಹಲವರ ಹೆಸರುಗಳು ಕೇಳಿ ಬರುತ್ತಿವೆ ಚಾರ್ಜ್ಶೀಟ್ ಹಾಕುವ ಬಗ್ಗೆ ಮಾಧ್ಯಮಗಳಿಂದ ಮಾಹಿತಿ ಲಭ್ಯವಾಗಿದೆ. ದೊಡ್ಡಮಟ್ಟದಲ್ಲೇ ಈ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಗಳು ನಡೆಯುತ್ತಿವೆ. ಅಷ್ಟು ಸುಲಭವಾಗಿ ಆರೋಪಿಗೆ ಜಾಮೀನು ಹೇಗೆ ಸಿಕ್ಕಿತು? ಸರ್ಕಾರಿ ಅಭಿಯೋಜಕರು ಹೇಗೆ ವಾದ ಮಾಡಿದರು ಎಂದು ಪ್ರಶ್ನಿಸಿದರು (kpc)