‘ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇ ಬೇಕು’

ಮೂರು ಕೃಷಿ ಕಾಯಿದೆಗಳನ್ನು ಕೇಂದ್ರ ಸರ್ಕಾರ ವಾಪಸ್ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

Narendra Modi

ಬೆಂಗಳೂರು: ಮೂರು ಕೃಷಿ ಕಾಯಿದೆಗಳನ್ನು ಕೇಂದ್ರ ಸರ್ಕಾರ ವಾಪಸ್ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ‌ ಅಭೂತಪೂರ್ವ ಹೋರಾಟಕ್ಕೆ‌ ಸಿಕ್ಕ ಗೆಲುವಾಗಿದೆ. ರೈತ ಹೋರಾಟಗಾರರಿಗೆ ಅಭಿನಂದನೆಗಳು ಎಂದಿದ್ದಾರೆ.

ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇ ಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು. ಇದುವೇ ರೈತರ ಸ್ವಾತಂತ್ರ್ಯೋತ್ಸವ,
ಕೃಷಿ ಕಾಯ್ದೆ‌ಯಷ್ಟೇ ಅಲ್ಲ, ಕೇಂದ್ರ ಬಿಜೆಪಿ‌ ಸರ್ಕಾರದ ಪ್ರತಿಯೊಂದು ನೀತಿ ಮತ್ತು ಕಾರ್ಯಕ್ರಮಗಳು ರೈತ ವಿರೋಧಿಯಾದುದು ಎಂದಿದ್ದಾರೆ.

ಇದು ವಿರಮಿಸುವ ಕಾಲ ಅಲ್ಲ,‌ ರೈತ ವಿರೋಧಿ ಬಿಜೆಪಿ ವಿರುದ್ಧದ ಹೋರಾಟ ಮುಂದುವರಿಯಲಿದೆ. ರೈತರ ಹೋರಾಟಕ್ಕೆ ಸಿಕ್ಕ ಗೆಲುವಿನ‌‌ ಸ್ಪೂರ್ತಿ  ಕೇಂದ್ರ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ದ ಜನ ಹೋರಾಟಕ್ಕೆ ನಾಂದಿಯಾಗಲಿದೆ. ಪಟ್ರೋಲ್-ಡೀಸೆಲ್ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಏರಿಕೆ ವಿರುದ್ಧದ ಹೋರಾಟಕ್ಕೆ ದೇಶದ ಜನ ಅಣಿಯಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. (kpc)

ಮೂರು ಕರಾಳ ಕೃಷಿ ಕಾಯ್ದೆಗಳನ್ನು ರದ್ದು ಮಾಡುವ ಕೇಂದ್ರದ ನಿರ್ಧಾರ ಸ್ವಾಗತಾರ್ಹ. ಈ ನಿರ್ಧಾರ ಮೊದಲೇ ಆಗಬೇಕಿತ್ತು. ಆದರೆ ತಮ್ಮ ಕಾರ್ಪೊರೇಟ್ ಸ್ನೇಹಿತರನ್ನು ಉದ್ದಾರ ಮಾಡಲು ತಂದಿದ್ದ ಈ ಕಾನೂನು ರದ್ದು ಮಾಡಲು ಪ್ರಧಾನಿ‌‌ ಮೋದಿ ಮೀನ‌ ಮೇಷ ಎಣಿಸಿದ್ದರು. ಕೊನೆಗೂ ರೈತರ ಸಾಂಘಿಕ ಹೋರಾಟಕ್ಕೆ ಇಂದು ಫಲ ಸಿಕ್ಕಿದೆ. ಇದು ದೇಶದ ರೈತರ ನೈತಿಕ ಜಯ.ರೈತರ ಪಾಲಿಗೆ ಮರಣ ಶಾಸನವಾಗಿದ್ದ 3 ಕೃಷಿ ಕಾಯ್ದೆಗಳ ವಿರುದ್ಧ ದೇಶಾದ್ಯಂತ ರೈತರು ನಿರಂತರ ಹೋರಾಟ ಮಾಡಿದ್ದಾರೆ.ಈ ಹೋರಾಟದಲ್ಲಿ ಅದೆಷ್ಟೋ ರೈತರು ಹುತಾತ್ಮರಾಗಿದ್ದಾರೆ.ಇಂದು ಆ ಹುತಾತ್ಮ ರೈತರ ಆತ್ಮಕ್ಕೆ ಶಾಂತಿ ಸಿಕ್ಕಿದ ದಿನ.ತಾನೇನು ಮಾಡಿದರೂ ನಡೆಯುತ್ತೆ ಎಂಬ ಮೋದಿಯವರ ಭ್ರಮೆ ಇಂದು ಕಳಚಿ ಬಿದ್ದಿದೆ. ರೈತರ ಶಕ್ತಿ ದೇಶಕ್ಕೆ ಗೊತ್ತಾಗಿದೆ.ಕರಾಳ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಳ್ಳಲು BJPಯವರು ಮಾಡಬಾರದ ಕೆಲಸ‌ ಮಾಡಿದರು.ರೈತರಿಗೆ ಉಗ್ರರ ಪಟ್ಟ ಕಟ್ಟಿದರು.ರೈತರ ನ್ಯಾಯಯುತವಾದ ಹೋರಾಟವನ್ನು ಭಯೋತ್ಪಾದಕ ಕೃತ್ಯಕ್ಕೆ ಹೋಲಿಸಿದರು. ಕೊನೆಗೆ ತಮ್ಮ ಯಾವ ಕುತಂತ್ರವೂ ಫಲಿಸದೆ ರೈತರ ಮುಂದೆ ಶರಣಾಗಿದ್ದಾರೆ. ರೈತ ಸಿಡಿದು ನಿಂತರೆ ಏನಾಗಲಿದೆ ಎಂಬುದಕ್ಕೆ ಕಾಯ್ದೆ ವಾಪಾಸಾತಿಯೇ ನಿದರ್ಶನ.ಕೃಷಿ ಕಾಯ್ದೆಯು ಒಂದು ವರ್ಗದ ರೈತರಿಗೆ ಮನವರಿಕೆಯಾಗಲು ವಿಫಲವಾದ ಕಾರಣ ಕಾಯ್ದೆ ವಾಪಾಸು ಪಡೆಯಲಾಗಿದೆ ಎಂದು ಮೋದಿ ಹೇಳಿದ್ದಾರೆ. ಅದು ನಿಜವಲ್ಲ. ಇತ್ತೀಚೆಗೆ ನಡೆದ ಉಪಚುನಾವಣೆಗಳ ಸೋಲು ಹಾಗೂ ಮುಂಬರಲಿರುವ ಉ.ಪ್ರದೇಶ ಚುನಾವಣೆಯೇ ಕಾಯ್ದೆ ವಾಪಾಸಾತಿಗೆ ನೈಜ ಕಾರಣ. ರೈತರನ್ನು ಕೆಣಕಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂಬುದು ಅಂತಿಮ ಸತ್ಯ. dinesh gundoorao

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *