


ಮಳೆಯಿಂದ ಬೆಳೆ ನಷ್ಟವಾದ ಹಿನ್ನೆಲೆ ಬೇಸರಗೊಂಡು ಶಿರಸಿ ತಾಲೂಕಿನ ಬನವಾಸಿಯ ರೈತನೋರ್ವ ಆತ್ಮಹತ್ಯೆಗೆ (farmer Commits suicide)ಶರಣಾಗಿದ್ದಾರೆ..

ಶಿರಸಿ : ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಬೆಳೆ ನಾಶವಾಗಿದ್ದಕ್ಕೆ ಬೇಸರಗೊಂಡ ಶಿರಸಿ ತಾಲೂಕಿನ ಬನವಾಸಿಯ ರೈತನೋರ್ವ ಕೀಟ ನಾಶಕ ಸೇವಿಸಿ ಆತ್ಮಹತ್ಯೆ( farmer Commits suicide) ಮಾಡಿಕೊಂಡಿದ್ದಾರೆ.
ಬನವಾಸಿಯ ನರೂರು ಗ್ರಾಮದ ಗಂಗಾಧರ ಫಕೀರಣ್ಣ ಶೇಷಣ್ಣನವರ್ (58) ಆತ್ಮಹತ್ಯೆಗೆ ಶರಣಾದ ರೈತ. ತನ್ನ ಗದ್ದೆಯಲ್ಲಿ ಬೆಳೆಸಿದ್ದ ಶುಂಠಿ, ಭತ್ತದ ಬೆಳೆ ಮಳೆಗೆ ಹಾಳಾಗಿದ್ದರಿಂದ ಬೇಸರಗೊಂಡಿದ್ದರು.


ನ.17ರಂದು ಕೀಟ ನಾಶಕ ಸೇವಿಸಿದ್ದರು. ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ರೈತ ಚಿಕಿತ್ಸೆಗೆ ಸ್ಪಂದಿಸದೆ ನ. 19ರಂದು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಬನವಾಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (etbk)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






