


ಉತ್ತರ ಕನ್ನಡ ಕಸಾಪ ಚುನಾವಣೆ : ಬಿ ಎನ್ ವಾಸರೆಗೆ ದಾಖಲೆಯ ಗೆಲುವು
ಉತ್ತರಕನ್ನಡ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ (Kannada Sahitya Parishat Election) ಪತ್ರಕರ್ತ, ಸಾಹಿತಿ ಬಿ ಎನ್ ವಾಸರೆ ಅವರು 1573 ಮತಗಳ ಭಾರಿ ಅಂತರದಿಂದ ಗೆಲುವು ದಾಖಲಿಸಿದ್ದಾರೆ..

ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ (Kannada Sahitya Parishat Election) ನಡೆದ ಚುನಾವಣೆಯಲ್ಲಿ ಪತ್ರಕರ್ತ, ಸಾಹಿತಿ ಬಿ ಎನ್ ವಾಸರೆ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬಿ ಎನ್ ವಾಸರೆ ಒಟ್ಟು 1,897 ಮತಗಳನ್ನು ಪಡೆದು ಗೆಲುವು ಪಡೆದರು. ವೇಣುಗೋಪಾಲ ಮದ್ಗೂಣಿ ಅವರು 324 ಮತ ಪಡೆಯುವ ಮೂಲಕ ಸೋಲನುಭವಿಸಿದರು. ಜಿಲ್ಲೆಯಲ್ಲಿ ಒಟ್ಟು 4,747 ಮತಗಳಿದ್ದು, ಅದರಲ್ಲಿ 2810 ಮತಗಳು ಚಲಾವಣೆಗೊಂಡಿದ್ದವು.
ಕಳೆದ ಭಾರಿ ಅರವಿಂದ ಕರ್ಕಿಕೋಡಿ ವಿರುದ್ಧ ಕೇವಲ 7 ಮತಗಳ ಅಂತರದಿಂದ ಕಸಾಪ ಚುನಾವಣೆಯಲ್ಲಿ ಪರಾಭವಗೊಂಡಿದ್ದ ವಾಸರೆ ಅವರು, ಈ ಬಾರಿ ದಾಖಲೆಯ ಅಂತರದ ಗೆಲುವು ದಾಖಲಿಸಿದ್ದಾರೆ. (etbk)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
