ಕೋಲಶಿರ್ಸಿ-ಕಾನಳ್ಳಿ ಭೇಟಿ ಮಾಡಿದ ಕಾಗೇರಿ, ರೈತರಲ್ಲಿ ಆತ್ಮವಿಶ್ವಾಸ ಮೂಡಿಸಲು ಕರೆ

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಅಕಾಲಿಕ ಮಳೆ ರೈತರಿಗೆ ಹಾನಿ ಮಾಡಿದೆ. ಬೆಳೆನಾಶ, ಪ್ರಕೃತಿಯೊಂದಿಗೆ ಸೆಣಸಾಡುತ್ತಿರುವ ರೈತ ಈ ಅಕಾಲಿಕ ಮಳೆಯಿಂದ ಕಂಗಾಲಾಗಿದ್ದು ಕೆಲವೆಡೆ ಆತ್ಮಹತ್ಯೆಗಳು ಕೂಡಾ ನಡೆಯುತ್ತಿವೆ. ಈ ಬಗ್ಗೆ ತೀವೃ ಕಳವಳ ವ್ಯಕ್ತಪಡಿಸಿರುವ ರಾಜ್ಯ ವಿಧಾನಸಭೆಯ ಸ್ಫೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅಕಾಲಿಕ ಮಳೆಯಿಂದ ಹಾನಿಗೊಳಗಾದ ರೈತರಲ್ಲಿ ಆತ್ಮವಿಶ್ವಾಸ ಮೂಡಿಸುವ ಅಗತ್ಯದ ಬಗ್ಗೆ ಪ್ರತಿಪಾದಿಸಿದ್ದಾರೆ.
ತಮ್ಮ ಕ್ಷೇತ್ರ ಶಿರಸಿ-ಸಿದ್ಧಾಪುರಗಳಲ್ಲಿ ಅಕಾಲಿಕ ಮಳೆಯ ಹಾನಿ ಪರಿಶೀಲಿಸಿದ ವಿಧಾನಸಭಾ ಅಧ್ಯಕ್ಷರು ರಾಜ್ಯದ ರೈತರು ಧೃತಿಗೆಡುವ ಅಗತ್ಯವಿಲ್ಲ.ರಾಜ್ಯಸರ್ಕಾರ ನೊಂದ ರೈತರ ಪರವಾಗಿದೆ. ಬೆಳೆವಿಮೆ, ಬೆಳೆಸಮೀಕ್ಷೆ ಇತ್ಯಾದಿ ಸರ್ಕಾರದ ಪ್ರಯತ್ನ, ರೈತರ ಹಿತಕಾಪಾಡುವ ಯತ್ನಗಳನ್ನು ಸರ್ಕಾರ ಆದ್ಯತೆಯ ಮೇರೆಗೆ ಮಾಡುತ್ತಿದೆ. ಎಂದಿದ್ದಾರೆ.


ಬೆಳೆಸಮೀಕ್ಷೆ, ಬೆಳೆಹಾನಿ ವರದಿ ಮಾಡುವ ಮೂಲಕ ಅಧಿಕಾರಿಗಳು ಸರ್ಕಾರದ ಪರಿಹಾರ, ಬೆಳೆವಿಮೆ, ಪ್ರಕೃತಿ ವಿಕೋಪದಡಿ ಸರ್ಕಾರದಿಂದ ದೊರೆಯುವ ಸೌಲಭ್ಯ ಒದಗಿಸಲು ಕೆಲಸ ಮಾಡುತಿದ್ದಾರೆ ಈ ವಿಚಾರದಲ್ಲಿ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಕ್ಷೇತ್ರ ಸಮೀಕ್ಷೆ ವೇಳೆ ಸ್ಫೀಕರ್‌ ಕಾಗೇರಿಯವರಿಗೆ ರೈತರು ತಮ್ಮ ಬವಣೆ ಹೇಳಿಕೊಂಡರು. ರೈತರ ಅಹವಾಲು, ಅನಿವಾರ್ಯತೆಗಳನ್ನು ಕೇಳಿ ಸಾಂತ್ವನ ಹೇಳಿದ ಅವರು ನಗರ ಗ್ರಾಮೀಣ ಪ್ರದೇಶಗಳೆನ್ನದೆ ರಾಜ್ಯದಾದ್ಯಂತ ಮಳೆ ಹಾನಿ ಗಣನೀಯ ಪ್ರಮಾಣದಲ್ಲಿ ಆಗಿದೆ. ಈ ಹಾನಿ. ತೊಂದರೆಗೆ ಹೆದರದಂತೆ ರೈತರಿಗೆ ಧೈರ್ಯನೀಡುವ ಕೆಲಸವನ್ನು ಸ್ಥಳಿಯ ಜನಪ್ರತಿನಿಧಿಗಳು, ಸಹಕಾರಿ ಕ್ಷೇತ್ರ ಮಾಡಬೇಕು. ಇದಕ್ಕೆ ಅಗತ್ಯ ನೆರವು ನೀಡಲು ಸರ್ಕಾರವನ್ನೂ ಕೋರಬೇಕು ಎಂದರು.
ಸ್ಥಳದಲ್ಲಿದ್ದ ಸ್ಥಳಿಯ ಜನಪ್ರತಿನಿಧಿಗಳು ರೈತರ ಪರವಾಗಿ ತಮ್ಮ ಬೇಡಿಕೆ ಸಲ್ಲಿಸಿದರು.ಇದಕ್ಕೆ ಪ್ರತಿಕ್ರೀಯಿಸಿದ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡಿ,ನ್ಯಾಯ ಒದಗಿಸುವ ಭರವಸೆ ನೀಡಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *