

ಉಗ್ರ ಸಂಘಟನೆ ಪತ್ರಿಕೆಯಲ್ಲಿ ಮುರುಡೇಶ್ವರನ ಭಗ್ನಗೊಂಡ ಪ್ರತಿಮೆ..! ಕರ್ನಾಟಕದ ಪ್ರಸಿದ್ಧ ಯಾತ್ರಾತಾಣದ ಮೇಲೆ ಐಸಿಸ್ ದಾಳಿಗೆ ಸಂಚು?
ಕರ್ನಾಟಕದ ಪ್ರಸಿದ್ಧ ಯಾತ್ರಾತಾಣಗಳಲ್ಲಿ ಒಂದಾದ ಉತ್ತರ ಕನ್ನಡದ ಮುರುಡೇಶ್ವರ(murudeshwar) ದ ಬೃಹತ್ ಈಶ್ವರ ಪ್ರತಿಮೆ ಚಿತ್ರ ಜಗತ್ತಿನ ಕುಖ್ಯಾತ ಉಗ್ರ ಸಂಘಟನೆಯ ಪತ್ರಿಕೆಯಲ್ಲಿ ಪ್ರಕಟವಾಗಿದ್ದು, ಇದು ಉಗ್ರ ಸಂಘಟನೆಯ ದಾಳಿಗೆ ಸಂಚೇ ಎಂಬ ಪ್ರಶ್ನೆ ಮೂಡುವಂತೆ ಮಾಡಿದೆ.



ಕಾರವಾರ: ಕರ್ನಾಟಕದ ಪ್ರಸಿದ್ಧ ಯಾತ್ರಾತಾಣಗಳಲ್ಲಿ ಒಂದಾದ ಉತ್ತರ ಕನ್ನಡದ ಮುರುಡೇಶ್ವರ(murudeshwar) ದ ಬೃಹತ್ ಈಶ್ವರ ಪ್ರತಿಮೆ ಚಿತ್ರ ಜಗತ್ತಿನ ಕುಖ್ಯಾತ ಉಗ್ರ ಸಂಘಟನೆಯ ಪತ್ರಿಕೆಯಲ್ಲಿ ಪ್ರಕಟವಾಗಿದ್ದು, ಇದು ಉಗ್ರ ಸಂಘಟನೆಯ ದಾಳಿ ಸಂಚೇ ಎಂಬ ಪ್ರಶ್ನೆ ಮೂಡುವಂತೆ ಮಾಡಿದೆ.
ಅಂಶುಲ್ ಸಕ್ಸೇನಾ ಎಂಬುವವರು ಇದನ್ನು ತಮ್ಮ ಖಾತೆಗಳಲ್ಲಿ ಪೋಸ್ಟ್ ಮಾಡಿ ಸರ್ಕಾರಗಳ ಗಮನ ಸೆಳೆಯಲು ಯತ್ನಿಸಿದ್ದಾರೆ. ‘ಐಸಿಸ್’ ಮುಖವಾಣಿ ಪತ್ರಿಕೆ ‘ದಿ ವಾಯ್ಸ್ ಆಫ್ ಹಿಂದ್’ (the Voice of hind)ನಲ್ಲಿ ಮುರುಡೇಶ್ವರದ ಶಿವನ ವಿಗ್ರಹವನ್ನು ಪ್ರಕಟಿಸಲಾಗಿದೆ. ಅದರ ಮೇಲೆ ‘ಇದು ನಕಲಿ ದೇವರನ್ನು ಒಡೆಯುವ ಸಮಯ’ (Its time to Break False Gods) ಎಂಬ ವಾಕ್ಯವನ್ನು ಬರೆಯಲಾಗಿದೆ. ಅಲ್ಲದೆ ಶಿವನ ಪ್ರತಿಮೆಯನ್ನು ಅರ್ಧಕ್ಕೆ ಕತ್ತರಿಸಿ, ತಲೆಯ ಭಾಗದಲ್ಲಿ ಉಗ್ರ ಸಂಘಟನೆಯ ಮಾದರಿಯ ಧ್ವಜ ಹಾರಾಡುತ್ತಿರುವಂತೆ ಚಿತ್ರಿಸಲಾಗಿದೆ.
ಇನ್ನು ಪೋಸ್ಟ್ ನ ಅಧಿಕೃತತೆ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲವಾದರೂ, ಈ ಕುರಿತು ಕೂಡಲೇ ಸುರಕ್ಷಾ ಕ್ರಮ ಕೈಗೊಳ್ಳಬೇಕು ಎಂದು ಅಂಶುಲ್ ಸಕ್ಸೇನಾ ತಮ್ಮ ಪೋಸ್ಟ್‌ನಲ್ಲಿ ಸರ್ಕಾರಗಳನ್ನು ಆಗ್ರಹಿಸಿದ್ದಾರೆ. ಈ ಬಗ್ಗೆ ಪೊಲೀಸ್ ಇಲಾಖೆಯಿಂದ ತಕ್ಷಣದ ಪ್ರತಿಕ್ರಿಯೆ ಲಭ್ಯವಾಗಿಲ್ಲ.
ಈ ಪೋಟೋ ಮತ್ತು ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದರ ಸತ್ಯಾಸತ್ಯತೆ ಸಂಬಂಧಿಸಿದ ಇಲಾಖೆ ಕ್ರಮವಹಿಸಬೇಕು ಮತ್ತು ಇಂತಹ ದುಷ್ಕೃತ್ಯಕ್ಕೆ ಸರ್ಕಾರ ಅವಕಾಶ ನೀಡಬಾರದು ಎಂಬುದು ಸಾರ್ವಜನಿಕರ ಆಗ್ರಹಿಸಿದ್ದಾರೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
