ವೃತ್ತಿ ನಿಷೇಧಿಸಿ ಹಾನಿ ಮಾಡಿದ ಪ್ರಕರಣ, ಅಧಿಕಾರಿ ಮತ್ತು ಗ್ರಾ.ಪಂ. ಸದಸ್ಯರ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲು

ವ್ಯಕ್ತಿಯೊಬ್ಬರ ಮೇಲೆ ವೃತ್ತಿ ನಿಷೇಧ ಹೇರಿದ ಕಾರಣಕ್ಕೆ ಸಂಬಂಧಿಸಿದಂತೆ ಸಿದ್ಧಾಪುರ ಕ್ಯಾದಗಿ ಗ್ರಾಮ ಪಂಚಾಯತ್‌ ಸದಸ್ಯರು ಮತ್ತು ಅಧಿಕಾರಿಯ ವಿರುದ್ಧ ಸ್ಥಳೀಯ ನ್ಯಾಯಾಲಯದಲ್ಲಿ ಸಿವಿಲ್‌ ಮತ್ತು ಕ್ರಿಮಿನಲ್‌ ಪ್ರಕರಣಗಳು ದಾಖಲಾದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಕೋವಿಡ್‌ ಸಮಯದಲ್ಲಿ ವಂದಾನೆ ಗೋಪಾಲಕೃಷ್ಣ ಕೊಡಿಯಾ ಕುಟುಂಬಕ್ಕೆ ಅವಧಿಮೀರಿದ ಸೆನಿಟೈಸರ್‌ ಪೂರೈಸಿದ ಸ್ಥಳಿಯ ವ್ಯವಸ್ಥೆ ವಿರುದ್ಧ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ ಕಾರಣಕ್ಕೆ ಮುನಿಸಿಕೊಂಡ ಕ್ಯಾದಗಿ ಗ್ರಾ.ಪಂ. ಆಡಳಿತ ಮತ್ತು ಅಧಿಕಾರಿ ವೃತ್ತಿ ನಿಷೇಧ ಹೇರಿ ತೊಂದರೆ ಮಾಡಿದ ಕಾರಣಕ್ಕೆ ಕೊಡಿಯಾ ಸ್ಥಳೀಯ ನ್ಯಾಯಾಲಯದಲ್ಲಿ ಅಂದಿನ ಗ್ರಾಮ ಪಂಚಾಯತ್‌ ಅಧಿಕಾರಿ ಮೇಲೆ ಕ್ರಿಮಿನಲ್‌ ಪ್ರಕರಣ ಮತ್ತು ಕ್ಯಾದಗಿ ಗ್ರಾ.ಪಂ. ಸದಸ್ಯರ ಮೇಲೆ ಸಿವಿಲ್‌ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಗೋಪಾಲಕೃಷ್ಣ ಕೊಡಿಯಾ ಕುಟುಂಬದ ಇಬ್ಬರಿಗೆ ಕೋವಿಡ್‌ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ಮನೆಯನ್ನು ಸೀಲ್‌ ಡೌನ್‌ ಮಾಡಿ ನಿರ್ಬಂಧ ವಿಧಿಸಲಾಗಿತ್ತು. ಈ ಕಾರಣಕ್ಕೆ ಸ್ಥಳಿಯ ಆಡಳಿತ ಅವರ ಕುಟುಂಬಕ್ಕೆ ಫುಡ್‌ ಕಿಟ್‌ ವಿತರಿಸಬೇಕಿತ್ತು. ಅಗತ್ಯ ವಸ್ತು ಪೂರೈಸದೆ ಕೊಟ್ಟ ಸೆನಿಟೈಸರ್‌ ಅವಧಿಮೀರಿದ ಕಾರಣದಿಂದ ಕೊಡಿಯಾ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು.

ಈ ದೂರು, ಮಾಹಿತಿ ಕೇಳಿದ ಆಧಾರದಲ್ಲಿ ಕ್ಯಾದಗಿ ಪಂಚಾಯತ್‌ ಠರಾವು ಮಾಡಿ ಗೋಪಾಲಕೃಷ್ಣ ಕೊಡಿಯಾ ತಮ್ಮ ವೃತ್ತಿ ಮಾಡಬಾರದೆಂದು ನಿರ್ಬಂಧ ವಿಧಿಸಿತ್ತು. ಈ ಪ್ರಕರಣದಲ್ಲಿ ವ್ಯಕ್ತಿಯ ವೃತ್ತಿ ಸ್ವಾತಂತ್ರ್ಯ ದುಡಿಯುವ ಅವಕಾಶ ಕಸಿದುಕೊಂಡ ಕಾರಣಕ್ಕೆ ಕೊಡಿಯಾ ಹಾನಿ ಮಾಡಿರುವ ಅಧಿಕಾರಿ ವಿರುದ್ಧ ಕ್ರಿ ಮಿನಲ್‌ ಪ್ರಕರಣ ಮತ್ತು ಇದಕ್ಕೆ ಕಾರಣರಾದ ಗ್ರಾ.ಪಂ. ಅಧ್ಯಕ್ಷರು, ಸದಸ್ಯರ ವಿರುದ್ಧ ಸಿವಿಲ್‌ ಪ್ರಕರಣ ದಾಖಲಿಸಿದ್ದಾರೆ. ಕಳೆದ ನಾಲ್ಕೈದು ತಿಂಗಳ ಹಿಂದೆ ನಡೆದ ಈ ಪ್ರಹಸನದ ಬಗ್ಗೆ ಆಗಸ್ಟ್‌ ತಿಂಗಳಲ್ಲಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಸ್ಥಳಿಯರು ಮಾಧ್ಯಮಪ್ರತಿನಿಧಿಗಳಿಗೆ ದಾಖಲೆ ಸಹಿತ ಈ ಮಾಹಿತಿ ಹಂಚಿಕೊಂಡಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *