ಗೆಲುವು ನಮ್ಮದೇ ಎಂದು ಹೂಂಕರಿಸಿದ ದೇಶಪಾಂಡೆ!

ಇದೇ ತಿಂಗಳ ೧೦ ರಂದು ನಡೆಯಲಿರುವ ಸ್ಥಳಿಯ ಸಂಸ್ಥೆಗಳಿಂದ ರಾಜ್ಯ ವಿಧಾನಪರಿಷತ್‌ ಸದಸ್ಯತ್ವದ ಚುನಾವಣೆ  ಉತ್ತರ ಕನ್ನಡದಲ್ಲಿ ತುರುಸು ಪಡೆದುಕೊಂಡಿದೆ. ಆಡಳಿತಾರೂಢ ಬಿ.ಜೆ.ಪಿ. ಪ್ರಚಾರದಿಂದ ಸದ್ದು ಮಾಡುತ್ತಿದೆ.ಬಿ.ಜೆ.ಪಿ.ಗೆ ಪ್ರಬಲ ಸ್ಫರ್ಧೆ ನೀಡುತ್ತಿರುವ ಕಾಂಗ್ರೆಸ್‌ ಗೆಲುವಿನ ಆತ್ಮವಿಶ್ವಾಸದಲ್ಲಿದೆ. ಆಡಳಿತಾರೂಢ ಬಿ.ಜೆ.ಪಿ.ಗೆ ಪಂಥಾಹ್ವಾನ ನೀಡಿರುವ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಈ ಹಿಂದಿನ ಐದು ವಿಧಾನಪರಿಷತ್‌ ಚುನಾವಣೆ ಗೆದ್ದಿದ್ದೇವೆ. ಬೇರೆ ಬೇರೆ ಪಕ್ಷಗಳಿಂದ ನಿರಂತರ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿರುವ ತಮಗೆ ಈ ಚುನಾವಣೆ ಗೆಲುವು ಕೂಡಾ ಕಟ್ಟಿಟ್ಟ ಬುತ್ತಿ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.


 ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್‌ ವಿ.ಪ. ಅಭ್ಯರ್ಥಿ ಪರ ಕಳೆದ ಎರಡು ದಿವಸಗಳಿಂದ ಪ್ರಚಾರ ನಡೆಸಿರುವ ಅವರು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ನಡ್ಡಾ ಅಧ್ಯಕ್ಷತೆಯ ಬಿ.ಜೆ.ಪಿ.ಗಳಿಗೆ ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ. ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌ ಮತ್ತು ತಾಲೂಕಾ ಪಂಚಾಯತ್‌ ಚುನಾವಣೆ ನಡೆಸದ ಸರ್ಕಾರ ವಿಧಾನಪರಿಷತ್‌ ನಲ್ಲಿ ಬಹುಮತಕ್ಕೆ ಪ್ರಯತ್ನಿಸುತ್ತಿದೆ. ಸ್ಥಳೀಯ, ವಿಕೇಂದ್ರೀಕರಣ ವ್ಯವಸ್ಥೆ ಹಾಳುಮಾಡಿದ ಬಿ.ಜೆ.ಪಿ.ಗೆ ವಿಧಾನ ಪರಿಷತ್‌ ಸೇರಿದಂತೆ ಯಾವುದೇ ಚುನಾವಣೆಯಲ್ಲಿ ಮತ ಕೇಳುವ ನೈತಿಕತೆ ಇಲ್ಲ ಎಂದರು.
ರಾಜ್ಯ, ದೇಶದಲ್ಲಿ ಮೂಲಭೂತ ಸೌಲಭ್ಯಗಳನ್ನು ಪೂರೈಸದೆ, ಜನರ ಅಪೇಕ್ಷೆಗೆ ವಿರುದ್ಧವಾಗಿ ಕೆಲಸ ಮಾಡುತ್ತಿರುವ ಬಿ.ಜೆ.ಪಿ. ಎಲ್ಲಾ ಕ್ಷೇತ್ರಗಳಲ್ಲಿ ವಿಫಲವಾಗಿದೆ. ಜನರ ವಿಶ್ವಾಸ ಕಳೆದುಕೊಂಡಿರುವ ಬಿ.ಜೆ.ಪಿ. ಗೆಲ್ಲಲು ಹೇಗೆ ಸಾಧ್ಯ ಎಂದರು. ಕಾಂಗ್ರೆಸ್‌ ಅಭ್ಯರ್ಥಿ ಭೀಮಣ್ಣ ನಾಯ್ಕ ತಮ್ಮ ಸಾಧನೆ, ಅನುಭವ ವಿವರಿಸಿ ಮತ ಯಾಚಿಸಿದರು.

Thumbnail image

ರಂಗೇರಿದ ಪರಿಷತ್ ಚುನಾವಣೆ ಪ್ರಚಾರ: ಭುಗಿಲೆದ್ದ ಕೈ ಕಾರ್ಯಕರ್ತರ ಅಸಮಾಧಾನ

ನಿನ್ನೆ ಶಾಸಕ ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಕಾರವಾರದಲ್ಲಿ ಪಕ್ಷದ ಸದಸ್ಯರೊಂದಿಗೆ ಪ್ರಚಾರ ಸಭೆ ನಡೆಸಲಾಯಿತು. ಈ ವೇಳೆ ಪಕ್ಷದ ಕೆಲ ಚುನಾಯಿತ ಸದಸ್ಯರು ಎದ್ದು ನಿಂತು ಪ್ರಚಾರ ಕಾರ್ಯ ಕೈಗೊಳ್ಳುವಲ್ಲಿ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರುಗಳಲ್ಲಿ ಹೊಂದಾಣಿಕೆ ಇಲ್ಲ. ಈ ಕಾರಣದಿಂದ ಅಭ್ಯರ್ಥಿ ಪರ ಪರಿಣಾಮಕಾರಿಯಾಗಿ ಪ್ರಚಾರ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾರವಾರ: ವಿಧಾನಪರಿಷತ್ ಚುನಾವಣೆಗೆ ಇನ್ನೇನು ದಿನಗಣನೆ ಆರಂಭವಾಗಿದ್ದು ಮತದಾನಕ್ಕೆ ಕೆಲವೇ ದಿನಗಳು ಬಾಕಿ ಉಳಿದಿರುವುದರಿಂದ ರಾಜಕೀಯ ಪಕ್ಷಗಳು ಭರದ ಪ್ರಚಾರದಲ್ಲಿ ತೊಡಗಿವೆ. ಈ ನಡುವೆ ಉತ್ತರಕನ್ನಡ ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಕೆಲ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿ ಗದ್ದಲ ಎಬ್ಬಿಸಿದ ಘಟನೆ ಜರುಗಿತು.

ಪರಿಷತ್ ಚುನಾವಣೆಗೆ ದಿನ ಹತ್ತಿರವಾಗುತ್ತಿರುವಂತೆ ಚುನಾವಣಾ ಕಣ ರಂಗು ಪಡೆದುಕೊಳ್ಳುತ್ತಿದ್ದು, ಉತ್ತರಕನ್ನಡ ಜಿಲ್ಲೆಯಲ್ಲಿ ರಾಷ್ಟ್ರೀಯ ಪಕ್ಷಗಳ ನಡುವೆಯೇ ನೇರ ಹಣಾಹಣಿ ಏರ್ಪಟ್ಟಿದೆ. ಈ ನಿಟ್ಟಿನಲ್ಲಿ ಶತಾಯಗತಾಯ ತಮ್ಮ ಅಭ್ಯರ್ಥಿಗಳನ್ನ ಗೆಲ್ಲಿಸಿಕೊಂಡು ಬರಲು ಪಕ್ಷಗಳು ಹರಸಾಹಸ ಪಡುತ್ತಿದ್ದು ಕಾಂಗ್ರೆಸ್ ಸಹ ಸದ್ದಿಲ್ಲದೇ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ.

ನಿನ್ನೆ ಕಾಂಗ್ರೆಸ್‌ನ ಹಿರಿಯ ಮುಖಂಡ, ಶಾಸಕ ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಕಾರವಾರದಲ್ಲಿ ಪಕ್ಷದ ಸದಸ್ಯರೊಂದಿಗೆ ಪ್ರಚಾರ ಸಭೆಯನ್ನ ನಡೆಸಲಾಯಿತು. ಪಕ್ಷದ ವಿಧಾನ ಪರಿಷತ್ ಅಭ್ಯರ್ಥಿ ಭೀಮಣ್ಣ ನಾಯ್ಕ ಸೇರಿದಂತೆ ಸ್ಥಳೀಯ ಮುಖಂಡರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಭಾಗವಹಿಸಿದ್ದರು.

ಈಗಾಗಲೇ ಜಿಲ್ಲೆಯ ಹನ್ನೊಂದು ತಾಲೂಕುಗಳ ಪೈಕಿ ಕಾಂಗ್ರೆಸ್ ಬಹುತೇಕ ಎಲ್ಲ ತಾಲೂಕುಗಳಲ್ಲೂ ಪ್ರಚಾರವನ್ನ ಕೈಗೊಂಡಿದ್ದು, ನಿನ್ನೆ ಕಾರವಾರ, ಅಂಕೋಲಾ ತಾಲೂಕಿನಲ್ಲಿ ಪ್ರಚಾರ ಸಭೆಯನ್ನ ಹಮ್ಮಿಕೊಳ್ಳಲಾಗಿತ್ತು. ಆರ್.ವಿ ದೇಶಪಾಂಡೆ ಪಕ್ಷದ ಅಭ್ಯರ್ಥಿಯನ್ನ ಗೆಲ್ಲಿಸಿಕೊಂಡು ಬರುವ ನಿಟ್ಟಿನಲ್ಲಿ ಸೂಕ್ತ ರೀತಿಯಲ್ಲಿ ಪ್ರಚಾರ ಕೈಗೊಳ್ಳುವಂತೆ ಸದಸ್ಯರಿಗೆ ಸಲಹೆ ಸೂಚನೆಗಳನ್ನ ನೀಡಿ, ಮನವಿ ಮಾಡಿದರು. ಆದ್ರೆ ಈ ವೇಳೆ ಪಕ್ಷದ ಕೆಲ ಚುನಾಯಿತ ಸದಸ್ಯರು ಎದ್ದು ನಿಂತು ಪ್ರಚಾರಕಾರ್ಯ ಕೈಗೊಳ್ಳುವಲ್ಲಿ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರುಗಳಲ್ಲಿ ಹೊಂದಾಣಿಕೆ ಇಲ್ಲ. ಈ ಕಾರಣದಿಂದ ಅಭ್ಯರ್ಥಿ ಪರ ಪರಿಣಾಮಕಾರಿಯಾಗಿ ಪ್ರಚಾರ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಕುರಿತು ಪ್ರತಿಕ್ರಿಯಿಸಿದ ದೇಶಪಾಂಡೆ, ಕೆಲವೊಂದು ವಿಚಾರದಿಂದ ಗೊಂದಲ ಉಂಟಾಗಿದ್ದು ಪಕ್ಷದ ಕಾರ್ಯಕರ್ತರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ತಿಳಿಸಿದರು.

ಕಾಂಗ್ರೆಸ್ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಐವತ್ತಕ್ಕಿಂತ ಕಡಿಮೆ ಸದಸ್ಯರು ಭಾಗವಹಿಸಿದ್ದು, ಬಹುತೇಕ ಪಂಚಾಯತ್‌ಗಳಿಂದ ಕೇವಲ ಮುಖಂಡರು ಮಾತ್ರ ಆಗಮಿಸಿದ್ದರು. ಸಭೆಯ ಕುರಿತು ಸೂಕ್ತ ಮಾಹಿತಿ ನೀಡಿ ಎಲ್ಲರನ್ನೂ ಆಹ್ವಾನಿಸಿದ್ದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಸದಸ್ಯರು ಸಹ ಆಗಮಿಸುತ್ತಿದ್ದರು. ಪಕ್ಷದ ಕೆಲ ಹಿರಿಯ ಮುಖಂಡರ ನಡುವಿನ ಹೊಂದಾಣಿಕೆ ಕೊರತೆಯಿಂದಲೇ ಸಭೆಗೆ ಸದಸ್ಯರು ಬಾರದಂತಾಗಿದೆ ಅಂತಾ ಚುನಾಯಿತ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಬಳಿಕ ದೇಶಪಾಂಡೆ ಅವರನ್ನ ಸಮಾಧಾನಪಡಿಸಿದರು.

ಪ್ರಚಾರ ಕಾರ್ಯದ ಕುರಿತು ಪ್ರತಿಕ್ರಿಯಿಸಿದ ಅಭ್ಯರ್ಥಿ ಭೀಮಣ್ಣ ನಾಯ್ಕ, ಸ್ಥಳೀಯ ಸಂಸ್ಥೆಗಳನ್ನ ಬಲಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಯಾವುದೇ ಕ್ರಮಗಳನ್ನ ಕೈಗೊಂಡಿಲ್ಲವಾಗಿದ್ದು, ಹಲವೆಡೆ ಈ ಕುರಿತು ಚುನಾಯಿತ ಸದಸ್ಯರು ಬೇಸರ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮತದಾರರು ನನಗೆ ಮತ ನೀಡಿ ಗೆಲ್ಲಿಸಿಕೊಂಡು ಬರಲಿದ್ದಾರೆ ಅಂತಾ ತಿಳಿಸಿದರು. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *