ಬಿ.ಜೆ.ಪಿ. ಜೆ.ಡಿ.ಎಸ್.‌ ಮೈತ್ರಿ ವರ್ಕೌಟ್‌ ಆಗಲ್ಲ – ಮಧು ಬಂಗಾರಪ್ಪ

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಿಧಾನಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಕಾಂಗ್ರೆಸ್‌ ಮುಖಂಡ ಮಧು ಬಂಗಾರಪ್ಪ ಬಿ.ಜೆ.ಪಿ. ಮತ್ತು ಜೆ.ಡಿ.ಎಸ್.‌ ಮೈತ್ರಿ ಗುಪ್ತ ಹೊಂದಾಣಿಕೆ  ಮೊದಲೇ ವಿಧಾನ ಪರಿಷತ್‌ ಚುನಾವಣೆಯ ಮತದಾರರು ತಮ್ಮ ಮತ ಯಾರಿಗೆ ಎಂದು ತೀರ್ಮಾನಿಸಿರುವುದರಿಂದ ಈ ಮೈತ್ರಿ ವರ್ಕೌಟ್‌ ಆಗಲ್ಲ ಎಂದಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ವಿಧಾನ  ಪರಿಷತ್‌  ಅಭ್ಯರ್ಥಿ  ಭೀಮಣ್ಣ ನಾಯ್ಕ ಪರವಾಗಿ ಜಿಲ್ಲೆಯಲ್ಲಿ ಪ್ರಚಾರ ನಡೆಸಿದ ಮಧು ಬಂಗಾರಪ್ಪ ಬಿ.ಜೆ.ಪಿ. ಒಡೆದು ಆಳುವ ಬ್ರಿಟೀಷ್‌ ಜನತಾ ಪಕ್ಷ ಆ ಪಕ್ಷದ ಬಗ್ಗೆ ಜನ ಭೃಮನಿರಸನ ಗೊಂಡಿದ್ದಾರೆ. ಈ ವಿಧಾನ ಪರಿಷತ್‌ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಕಾಂಗ್ರೆಸ್‌ ಗೆಲ್ಲಲಿದೆ. ಜನರು ಬದಲಾವಣೆ ಬಯಸಿದ್ದಾರೆ. ವಾತಾವರಣ ಸ್ಥಿತಿ ಬದಲಾಗಲಿದೆ ಜೆ.ಡಿ.ಎಸ್.‌ ಮೈತ್ರಿ ಅಥವಾ ಇನ್ನ್ಯಾವುದೇ ತಂತ್ರ ಬಿ.ಜೆ.ಪಿ. ಯನ್ನು ಉಳಿಸಲು ಸಾಧ್ಯವಿಲ್ಲ ಎಂದರು.

ಬಿ.ಜೆ.ಪಿ. ಯ ಘಟಾನುಘಟಿ ಮುಖಂಡರಿರುವ ಶಿವಮೊಗ್ಗದಲ್ಲಿ ಜೆ.ಡಿ.ಎಸ್.‌ ಪ್ರತಿನಿಧಿಗಳು ಕಾಂಗ್ರೆಸ್‌ ಬೆಂಬಲಿಸಲಿದ್ದಾರೆ. ಜೆ.ಡಿ.ಎಸ್.‌ ಸೇರಿದಂತೆ ಇತರ ಪಕ್ಷಗಳಿಂದ ಕಾಂಗ್ರೆಸ್‌ ಗೆ ಸೇರ್ಪಡೆಯಾಗುವವರ ಪಟ್ಟಿ ದೊಡ್ಡದಿದೆ ಮುಂದಿನ ವರ್ಷ ಈ ಸ್ಥಿತಿ, ವಾತಾವರಣ ಬದಲಾಗಿ ಕಾಂಗ್ರೆಸ್‌ ಬಲವಾಗಲಿದೆ ಎಂದರು.

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಘೋಷಣೆಗೆ ರಾಜ್ಯ ಸರ್ಕಾರದ ವಿರೋಧ: ಕೇಂದ್ರಕ್ಕೆ ಸ್ಪಷ್ಟಪಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು,

ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ವಲಯ ಎಂದು ಘೋಷಿಸುವುದರಿಂದ ಈ ಭಾಗದಲ್ಲಿ ವಾಸಿಸುವ ಜನರ ಜೀವನೋಪಾಯಕ್ಕೆ ಧಕ್ಕೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರ್ಕಾರ ಹಾಗೂ ಈ ಭಾಗದ ಜನತೆಯ ಒಕ್ಕೊರಲಿನ ವಿರೋಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದರು.

ಅವರು ಇಂದು ಪಶ್ಚಿಮ ಘಟ್ಟದ ಕಸ್ತೂರಿ ರಂಗನ್ ವರದಿ ಜಾರಿ ಕುರಿತಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಕಾರ್ಮಿಕ ಸಚಿವ ಭೂಪೇಂದರ್ ಯಾದವ್ ಅವರು ನಡೆಸಿದ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು ರಾಜ್ಯದ ಈ ನಿಲುವನ್ನು ಸ್ಪಷ್ಟಪಡಿಸಿದರು.

ಪಶ್ಚಿಮ ಘಟ್ಟ ಪ್ರದೇಶದ ನಿವಾಸಿಗಳು, ಅಧಿಕಾರಿಗಳು ಮತ್ತು ಸಂಬಂಧಪಟ್ಟ ಎಲ್ಲರೊಂದಿಗೆ ಕೂಲಂಕಷವಾಗಿ ಸಮಾಲೋಚನೆ ನಡೆಸಿ ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸಿ ರಾಜ್ಯ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ ಎಂಬುದನ್ನು ಸಭೆಯ ಗಮನಕ್ಕೆ ತಂದರು.

ಕರ್ನಾಟಕ ರಾಜ್ಯ ಅತಿ ಹೆಚ್ಚು ಅರಣ್ಯ ಪ್ರದೇಶಗಳನ್ನು ಹೊಂದಿರುವ ರಾಜ್ಯಗಳಲ್ಲಿ ಒಂದು ಎಂಬ ಹೆಗ್ಗಳಿಕೆಯನ್ನು ಹೊಂದಿದೆ. ನಮ್ಮ ಸರ್ಕಾರ ಹಾಗೂ ಜನತೆ ಪಶ್ಚಿಮ ಘಟ್ಟದ ಜೀವ ವೈವಿಧ್ಯದ ಸಂರಕ್ಷಣೆಗೆ ಹೆಚ್ಚಿನ ಕಾಳಜಿ ತೋರಿದ್ದೇವೆ. ಯಾವುದೇ ಕಾಯ್ದೆ ಕಾನೂನು ಜಾರಿಯಾಗುವ ಮುನ್ನವೂ ಈ ಭಾಗದ ಜನರು ಇಲ್ಲಿನ ಪ್ರಕೃತಿಗೆ ಸಹಜವಾದ ಕೃಷಿ, ತೋಟಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದು, ಪರಿಸರ ಸ್ನೇಹಿ ಜೀವನ ಶೈಲಿಯನ್ನು ರೂಢಿಸಿಕೊಂಡಿದ್ದಾರೆ; ಪಶ್ಚಿಮ ಘಟ್ಟದ ಸಂರಕ್ಷಣೆಗೆ ಆದ್ಯತೆ ನೀಡುತ್ತಲೇ ಬಂದಿದ್ದಾರೆ. ಈಗಾಗಲೇ ಜೀವ ವೈವಿಧ್ಯ ಸಂರಕ್ಷಣೆ ಕಾಯ್ದೆ, ಅರಣ್ಯ ಸಂರಕ್ಷಣೆ ಕಾಯ್ದೆ ಮೊದಲಾದ ಹಲವಾರು ಕಾನೂನುಗಳಡಿ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೊಂದು ಕಾನೂನು ಜಾರಿಗೆ ತರುವ ಮೂಲಕ ಈ ಭಾಗದ ಜನರ ಜೀವನೋಪಾಯಕ್ಕೆ ಧಕ್ಕೆ ತರುವುದು ಸರಿಯಲ್ಲ ಎಂದು ಮುಖ್ಯಮಂತ್ರಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.

ಉಪಗ್ರಹ ಸಮೀಕ್ಷೆಯ ಆಧಾರದಲ್ಲಿ ಕಸ್ತೂರಿ ರಂಗನ್ ವರದಿ ರೂಪಿಸಲಾಗಿದೆ. ಆದರೆ ವಸ್ತುಸ್ಥಿತಿ ಇದಕ್ಕಿಂತ ಭಿನ್ನವಾಗಿದೆ. ಪ್ರತಿ ಎಕರೆಯನ್ನು ಪ್ರತ್ಯಕ್ಷವಾಗಿ ಸಮೀಕ್ಷೆ ನಡೆಸುವುದರಿಂದ ಜನರ ಪರಿಸರ ಸ್ನೇಹಿ ಜೀವನಶೈಲಿಯನ್ನು ಗಮನಿಸಬಹುದಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಈ ಹಿನ್ನೆಲೆಯಲ್ಲಿ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ಅಧಿಕಾರಿಗಳು ರಾಜ್ಯಕ್ಕೆ ಭೇಟಿ ನೀಡಿ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಕೇಂದ್ರ ಸಚಿವರು ತಿಳಿಸಿದರು.

ಸಭೆಯಲ್ಲಿ ಸಚಿವರಾದ ಅರಗ ಜ್ನಾನೇಂದ್ರ , ಆನಂದ್ ಸಿಂಗ್, ಮುಖ್ಯಮಂತ್ರಿ ಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಸೇರಿದಂತೆ ಇತರರು ವರ್ಚುವಲ್ ಸಭೆಯಲ್ಲಿ ಉಪಸ್ಥಿತರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *