ಕರ್ನಾಟಕದ ಇಶಾಡ್ ಮಾವು, ಕುಮಟಾ ಈರುಳ್ಳಿ, ಭಟ್ಕಳ ಮಲ್ಲಿಗೆಗೆ ಜಿಐ ಟ್ಯಾಗ್ ಪಡೆಯುವ ಪ್ರಕ್ರಿಯೆಗೆ ಚಾಲನೆ!

ಎಲ್ಲವೂ ಅಂದುಕೊಂಡಂತೆಯೇ ಆದರೆ ಶೀಘ್ರದಲ್ಲೆ ಕರ್ನಾಟಕದ ಇಶಾದ್ ಮಾವು, ಕುಮಟಾ ಈರುಳ್ಳಿ, ಭಟ್ಕಳ ಮಲ್ಲಿಗೆಗೆ ಭೌಗೋಳಿಕ ಸನ್ನದು (ಜಿಐ ಟ್ಯಾಗ್) ಲಭ್ಯವಾಗಲಿದೆ. 

The sweet onion of Kumta, which will soon receive a GI tag, being arranged for sale | EXPRESS

ಕಾರವಾರ:ಎಲ್ಲವೂ ಅಂದುಕೊಂಡಂತೆಯೇ ಆದರೆ ಶೀಘ್ರದಲ್ಲೆ ಕರ್ನಾಟಕದ ಇಶಾಡ್ ಮಾವು, ಕುಮಟಾ ಈರುಳ್ಳಿ, ಭಟ್ಕಳ ಮಲ್ಲಿಗೆಗೆ ಭೌಗೋಳಿಕ ಸನ್ನದು (ಜಿಐ ಟ್ಯಾಗ್) ಲಭ್ಯವಾಗಲಿದೆ. 

ಹಲವು ಶತಮಾನಗಳಿಂದ ಈ ಬೆಳೆಗಳನ್ನು ಸಣ್ಣ ಪ್ರದೇಶಗಳಲ್ಲಿ ಬೆಳೆಯಲಾಗುತ್ತಿದೆ. ಸ್ವಾದಿಷ್ಟ ಇಶಾದ್ ಮಾವು ಅಂಕೋಲದಿಂದ, ಸಿಹಿ ಈರುಳ್ಳಿ ಕುಮಟಾದಿಂದ, ಹೊನ್ನಾವರದ ವೀಳ್ಯದೆಲೆ, ಭಟ್ಕಳದ ಮಲ್ಲಿಗೆಗಳು ಶತಮಾನಗಳಿಂದ ಬೆಳೆಯಲ್ಪಡುತ್ತಿರುವ ವಿಶೇಷವಾದ ಬೆಳೆಗಳಾಗಿವೆ, ಇವುಗಳಿಗೆ ಜಿಐ ಟ್ಯಾಗ್ ನ್ನು ಪಡೆಯುವುದಕ್ಕೆ  ತೋಟಗಾರಿಕಾ ಇಲಾಖೆ ಪ್ರಕ್ರಿಯೆಗಳನ್ನು ಪ್ರಾರಂಭಿಸಿದೆ. 

ಒಮ್ಮೆ ಜಿಐ ಟ್ಯಾಗ್ ಲಭ್ಯವಾದಲ್ಲಿ ಅದರಿಂದ ಈ ಬೆಳೆಗಳಿಗೆ ಅಂತಾರಾಷ್ಟ್ರೀಯ ಖ್ಯಾತಿ, ಮನ್ನಣೆಯನ್ನು ತಂದುಕೊಡಲಿದ್ದು, ರೈತರಿಗೂ ಸಹಾಯವಾಗಲಿದೆ. ನಾವು ಜಿಐ ಟ್ಯಾಗ್ ಪಡೆಯುವುದಕ್ಕೆ ಪ್ರಕ್ರಿಯೆಗಳನ್ನು ಪ್ರಾರಂಭಿಸಿದ್ದೇವೆ.  ಜಿಐ ನಿರ್ದೇಶನಾಲಯಕ್ಕೆ ಪೂರೈಕೆ ಮಾಡಬೇಕಿರುವ ಡೇಟಾ ಸಂಗ್ರಹಿಸಲಾಗುತ್ತಿದೆ ಎಂದು ಕಾರವಾರದ ತೋಟಗಾರಿಕಾ ಇಲಾಖೆ ನಿರ್ದೇಶಕ ಸತೀಶ್ ತಿಳಿಸಿದ್ದಾರೆ. 

ಸಿಹಿ ಈರುಳ್ಳಿ ಇತರ ಈರುಳ್ಳಿಗಳಂತೆ ಇರುವುದಿಲ್ಲ. ಇತ್ತೀಚಿನ ದಿನಗಳಲ್ಲಿ ಈ ಈರುಳ್ಳಿಗೆ ದೂರದ ಪ್ರದೇಶಗಳಿಂದಲೂ ಬೇಡಿಕೆ ಹೆಚ್ಚುತ್ತಿದೆ. ಇದು ಜಿಐ ಟ್ಯಾಗ್ ಪಡೆಯುವುದಕ್ಕೆ ಅತ್ಯಂತ ಸೂಕ್ತವಾದ ಬೆಳೆ ಎನ್ನುತ್ತಾರೆ ತೋಟಗಾರಿಕೆ ಇಲಾಖೆಯ ಮಾಜಿ ನಿರ್ದೇಶಕ ಎಸ್ ವಿ ಹಿತ್ತಲಮನಿ

ಕಪ್ಪು ಇಶಾದ್ ಮಾವು ಅತ್ಯಂತ ರುಚಿಕರ ಹಾಗೂ ತಿರುಳಿರುವ ಹಣ್ಣಾಗಿದೆ. ಈ ಹಿಂದೆ ಡಬ್ಬಿಯಲ್ಲಿಟ್ಟು ಅದನ್ನು ರಫ್ತು ಮಾಡಲಾಗುತ್ತಿತ್ತು. ಅದರ ಗತ ವೈಭವ ಮರುಕಳಿಸುತ್ತದೆ ಎಂಬ ನಂಬಿಕೆ ಇದೆ ಎನ್ನುತ್ತಾರೆ ಸತೀಶ್

ಹೊನ್ನಾವರದ ವೀಳ್ಯದೆಲೆ ರಾಣಿ ಎಲೆ ಎಂದೇ ಖ್ಯಾತಿ ಪಡೆದಿದ್ದು, ಕಳೆದ 500 ವರ್ಷಗಳಿಂದಲೂ ಬೆಳೆಯಲಾಗುತ್ತಿದೆ. ಈ ತಳಿಯನ್ನು ಖ್ಯಾತ ರಾಣಿ ಚೆನ್ನಭೈರಾ ದೇವಿ ಪೋಷಿಸಿದರು ಎಂಬ ಉಲ್ಲೇಖವೂ ಇದೆ. 

ಇನ್ನು ಭಟ್ಕಳ ಮಲ್ಲಿಗೆಯಂತೂ ಬಂಟ್ ಹಾಗೂ ಸ್ಥಳೀಯವಾಗಿರುವ ಇತರ ಸಮುದಾಯಗಳಿಗೆ ಅತ್ಯಂತ ಪ್ರಿಯವಾಗಿದ್ದು, ಭಟ್ಕಳ ಮಲ್ಲಿಗೆ ಇಲ್ಲದೇ ಯಾವ ವಿವಾಹವೂ ಪೂರ್ಣ ಎನಿಸುವುದಿಲ್ಲ. 

ಆದರೆ ಜಿಐ ಟ್ಯಾಗ್ ಪಡೆಯುವುದು ಅಷ್ಟು ಸುಲಭದ ಮಾತಲ್ಲ. ಜೀವಂತ ಅಥವಾ ನಿರ್ಜೀವ ಯಾವುದೇ ಅಂಶವಾಗಿರಲಿ ಜಿಐ ಟ್ಯಾಗ್ ಪಡೆಯುವುದಕ್ಕೆ ಅದನ್ನು ಶತಮಾನಗಳಿಂದ ಪೋಷಿಸಲಾಗುತ್ತಿದೆ ಎಂಬುದಕ್ಕೆ ಪೂರಕ ದಾಖಲಾತಿಗಳನ್ನು ನೀಡಬೇಕಾಗುತ್ತದೆ. ಸಮಿತಿಗೆ ಅದು ಮಾನ್ಯ ಎನಿಸಿದರೆ ಮಾತ್ರವೇ ಜಿಐ ಟ್ಯಾಗ್ ನೀಡಲಾಗುತ್ತದೆ. ಮಾಹಿತಿಯ ಕೊರತೆಯ ಕಾರಣದಿಂದಾಗಿ ಹಲವು ಅರ್ಜಿಗಳು ಇನ್ನೂ ಹಾಗೆಯೇ ಬಾಕಿ ಉಳಿದಿವೆ. (kpc)‌

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *