; ಶೀಘ್ರದಲ್ಲೇ ಅಧಿಸೂಚನೆ: ಬಿಸಿ ನಾಗೇಶ್
ಶಿಕ್ಷಕ ಹುದ್ದೆಗಳ ಆಕಾಂಕ್ಷಿಗಳಿಗೆ ಸಿಹಿಸುದ್ದಿ. 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲಿಯೇ ಅಧಿಸೂಚನೆ ಹೊರಬೀಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.
ಬೆಂಗಳೂರು: ಶಿಕ್ಷಕ ಹುದ್ದೆಗಳ ಆಕಾಂಕ್ಷಿಗಳಿಗೆ ಸಿಹಿಸುದ್ದಿ. 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲಿಯೇ ಅಧಿಸೂಚನೆ ಹೊರಬೀಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಪದವೀಧರ ಪ್ರಾಥಮಿಕ ಶಾಲಾ (6ರಿಂದ 8ನೇ ತರಗತಿ) ಶಿಕ್ಷಕರ 10 ಸಾವಿರ ಹುದ್ದೆ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಪದವೀಧರ ಪ್ರಾಥಮಿಕ ಶಾಲಾ (6ರಿಂದ 8ನೇ ತರಗತಿ) ಶಿಕ್ಷಕರ 5 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು, ಕೆಲ ದಿನಗಳಲ್ಲೇ ನೇಮಕ ಪ್ರಕ್ರಿಯೆಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಶಿಕ್ಷಕರ ಕೊರತೆ ನೀಗಿಸಿ ಶಿಕ್ಷಣದ ಗುಣಮಟ್ಟ ಕಾಪಾಡಲು ಈಗಾಗಲೇ 23 ಸಾವಿರ ಅತಿಥಿ ಶಿಕ್ಷಕರ ಸೇವೆ ಪಡೆಯಲಾಗುತ್ತಿದ್ದು, ಹೆಚ್ಚುವರಿಯಾಗಿ 4 ಸಾವಿರ ಅತಿಥಿ ಶಿಕ್ಷಕರ ಸೇವೆ ಪಡೆಯಲು ನಿರ್ಧರಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.