ಕಾನಗೋಡು ಗ್ರಾ.ಪಂ. ಸದಸ್ಯ ದಿನೇಶ್‌ ನಾಯ್ಕ ಮೃತ್ಯು & ಸ್ಪೀಕರ್ ಕಾಗೇರಿ ಗರಂ ಆದದ್ದೇಕೆ?

ಅಂಬೇಡ್ಕರ್ ಫೋಟೋ ವಿಚಾರ: ವಿಧಾನಸಭೆಯಲ್ಲಿ ಗರಂ ಆದ ಸ್ಪೀಕರ್ ಕಾಗೇರಿ!

ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಗರಂ ಆದ ಘಟನೆ ಇಂದು ನಡೆಯಿತು. ನಿಯಮಾವಳಿಗಳ ಪ್ರಕಾರ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಧ್ಯಾಹ್ನದ ನಂತರ ಮಾತನಾಡಬೇಕಿತ್ತು. 

Kageri

ಬೆಳಗಾವಿ: ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಗರಂ ಆದ ಘಟನೆ ಇಂದು ನಡೆಯಿತು. ನಿಯಮಾವಳಿಗಳ ಪ್ರಕಾರ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಧ್ಯಾಹ್ನದ ನಂತರ ಮಾತನಾಡಬೇಕಿತ್ತು. 

ಆದರೆ, ಶಾಸಕ ಅನ್ನದಾನಿ ಅವರು, ಸಭೆಯಲ್ಲಿ ಎದ್ದು ನಿಂತು ಅಂಬೇಡ್ಕರ್ ಅವರ ವಿಚಾರ ಮಾತನಾಡಲು ಆರಂಭಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಸಭಾಧ್ಯಕ್ಷ ಕಾಗೇರಿ ಅವರು, ನೀವು ಯಾವಾಗ ವಿಷಯವನ್ನು ಪ್ರಸ್ತಾಪಿಸಬೇಕೆಂಬುದನ್ನು ಸ್ಪೀಕರ್ ಆಗಿ ನಾನು ನಿರ್ಧಾರ ಮಾಡುತ್ತೇನೆ. ನೀವು ಯಾವಾಗ ಬೇಕಾದ್ರೆ ಎದ್ದು ನಿಂತು ಪ್ರಶ್ನೆ ಕೇಳಲು ಪ್ರಾರಂಭಿಸಿದರೆ ಸಭೆ ನಿಯಮಾವಳಿ ಪ್ರಕಾರ ನಡೆಯಬೇಕೋ.. ಇಲ್ಲೋ ಮನಸೋ ಇಚ್ಛೆ ನಡೆಯಬೇಕು ಅಂತಾ ಪ್ರಶ್ನೆ ಮಾಡಿದರು.

ನೀವು ಹೇಳಿದ ಹಾಗೇ ನಡೆಯಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರು ಬೆಳೆ ಹಾನಿ ಬಗ್ಗೆ ಈಗ ಮಾತನಾಡುತ್ತಾರೆ. ನೀವು ಕುಳಿತುಕೊಳ್ಳಿ ಎಂದು ಅನ್ನದಾನಿ ಅವರನ್ನು ತಡೆಯಲು ಯತ್ನಿಸಿದರು. ಆದರೆ ಶಾಸಕ ಅನ್ನದಾನಿ ಅವರು ಕುಳಿತುಕೊಳ್ಳಲೇ ಇಲ್ಲ. ನೀವು ಯಾವ ವಿಷಯವನ್ನು ಪ್ರಸ್ತಾಪಿಸಬೇಕು ಎನ್ನುತ್ತಿದ್ದಿರೋ ಅದಕ್ಕೆ ಅವಕಾಶ ನೀಡಿಲ್ಲ. ಇದಕ್ಕೆ ಮುಂಚಿತವಾಗಿ ಅವಕಾಶ ಪಡೆದು ಪ್ರಸ್ತಾಪಿಸಬೇಕಾಗುತ್ತದೆ.

ಸಭಾಧ್ಯಕ್ಷರು ಶಾಂತಿ, ಸಮಾಧಾನದಿಂದ ಹೇಳಿದರೂ ಶಾಸಕರು ಸುಮ್ಮನಾಗಲಿಲ್ಲ. ಇದರಿಂದ ಆಕ್ರೋಶಗೊಂಡ ಸಭಾಧ್ಯಕ್ಷರು ಸಾವಿರ ಸಲ ಹೇಳಿದ್ದೇನೆ. ನಾನು ಅಶಿಸ್ತು ಸಹಿಸಲ್ಲ ಎಂದರು. ಒಂದು ವೇಳೆ ಅಶಿಸ್ತು ಮುಂದುವರಿಸಿದರೆ ಒಂದು ಹೆಜ್ಜೆ ಮುಂದಕ್ಕೆ ಹೋಗಬೇಕಾಗುತ್ತದೆ. ಅನ್ನದಾನಿ ಅವರೇ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ್ದೀರಿ. ಸದನಕ್ಕೆ ಘನತೆ, ಗೌರವ ಇದೆ ಅನ್ನೋದು ಗೊತ್ತಿಲ್ವೇ ಎಂದು ಸಭಾಧ್ಯಕ್ಷರು ಪ್ರಶ್ನೆ ಮಾಡಿದರು.

ನಿಮ್ಮ ಮುಂದೆ ಚಿಕ್ಕವರಾಗಿ ಕೈ ಮುಗಿದು ಹೇಳುತ್ತೇನೆ. ಯಾವುದೇ ವಿಷಯ ಪ್ರಸ್ತಾಪಿಸಬೇಕಾದರೆ ನೀವು ನಮ್ಮೊಂದಿಗೆ ಚರ್ಚಿಸಿ ಪ್ರಸ್ತಾಪಿಸಬೇಕಾಗುತ್ತದೆ. ನೀವು ಯಾವ ವಿಷಯವನ್ನು ಪ್ರಸ್ತಾಪಿಬೇಕೆಂದಿದ್ದರೊ ಆ ವಿಚಾರದ ಬಗ್ಗೆ ನಾವು ಅಷ್ಟೇ ಗಂಭೀರವಾಗಿದ್ದೇವೆ. ನಿಮ್ಮ ವಿಚಾರಕ್ಕೆ ಸದನ ಬದ್ಧವಾಗಿದೆ ಎಂದು ಸಭಾಧ್ಯಕ್ಷರು ಹೇಳಿದರು. ಅಂಬೇಡ್ಕರ್ ಫೋಟೋ ಹಾಕಲು ಯಾವುದೇ ವಿವಾದ ಇಲ್ಲ. ಉಳಿದ ಯಾವ ಫೋಟೋಗಳನ್ನು ಹಾಕಬೇಕೆಂಬುದರ ಮಾಹಿತಿ ಕಲೆ ಹಾಕಲಾಗುತ್ತದೆ. ಹಾಗೂ ಅಂಬೇಡ್ಕರ್ ಅವರ ಭಾವಚಿತ್ರವನ್ನು ಬೆಂಗಳೂರಿನಂತೆ ಹಾಕಲಾಗುವುದು ಎಂದು ಸಭಾಧ್ಯಕ್ಷ ಕಾಗೇರಿ ಹೇಳಿದಾಗ ಶಾಸಕ ಅನ್ನದಾನಿ ಸುಮ್ಮನಾದರು. (kpc)

ಶಿರಸಿ ಕಾನಗೋಡು ಗ್ರಾಮ ಪಂಚಾಯತ್‌ ಸದಸ್ಯ ದಿವಾಕರ ನಾಯ್ಕ ಮಂಗಳವಾರ ಸಂಜೆವೇಳೆ ಕುಮಟಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಇವರ ಸಾವಿಗೆ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ನಾಯ್ಕ ಸಂತಾಪ ವ್ಯಕ್ತಪಡಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *