ಸಿದ್ಧಾಪುರ ಪ.ಪಂ. ಗೆ ಮೂವರು ನಾಮನಿರ್ಧೇಶಿತ ಸದಸ್ಯರು ಸೇರಿ ಕಾಗೇರಿ ಬಣದ ಸಂಖ್ಯೆ ೬! & ಕರ್ಫ್ಯೂ ರಿಯಾಯತಿಯ ಪ್ರಶ್ನೆಯೇ ಇಲ್ಲ, ಸರ್ಕಾರದ ಆದೇಶ, ನಿಯಮ ಪಾಲಿಸಿ

ಒಮಿಕ್ರಾನ್‌ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಇಂದಿನಿಂದಲೇ ರಾಜ್ಯದಾದ್ಯಂತ ರಾತ್ರಿ ಕರ್ಫ್ಯೂ ಪ್ರಾರಂಭವಾಗಿದೆ. ರಾತ್ರಿ ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಸಾರ್ವಜನಿಕರ ಓಡಾಟ,ಮನೋರಂಜನಾ ಚಟುವಟಿಕೆಗಳಿಗೆ ಬ್ರೇಕ್‌ ಬಿದ್ದಿದೆ. ಮಲೆನಾಡು ಕರಾವಳಿ ಗಳಲ್ಲಿ ಈ ಅವಧಿಯಲ್ಲಿ ನಡೆಯುತಿದ್ದ ಮನೋರಂಜನಾ ಚಟುವಟಿಕೆಗಳಿಗೆ ರಾತ್ರಿ ನಿಷೇಧಾಜ್ಞೆ ತಡೆ ಒಡ್ಡಿದೆ. ಯಕ್ಷಗಾನ ಪ್ರದರ್ಶನಗಳು ನಿಗದಿತ ರಾತ್ರಿ ಸಮಯಕ್ಕೆ ಬದಲು ಹಗಲು ಪ್ರಾರಂಭವಾಗಿವೆ. ಈ ಸರ್ಕಾರದ ನಿಷೇಧಾಜ್ಞೆ ಪಾಲನೆಗೆ ಮನವಿ ಮಾಡಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮುಂಜಾಗೃತೆ ಮತ್ತು ಪೂರ್ವತಯಾರಿಯಿಂದ ಕರೋನಾ ಸಾಂಕ್ರಾಮಿಕ ತಡೆಯುವ ಜವಾಬ್ಧಾರಿ ಜನರ ಮೇಲಿದ್ದು ಸರ್ಕಾರದ ನೀತಿ-ನಿಯಮ ಪಾಲನೆಗೆ ಸಹಕರಿಸಲು ಮನವಿ ಮಾಡಿದ್ದಾರೆ.


ಹಿಂದಿನ ಮೊದಲ ಮತ್ತು ಎರಡನೇ ಕೋವಿಡ್‌ ಅಲೆ ಗೆಲ್ಲುವಲ್ಲಿ ಸಾರ್ವಜನಿಕರ ಸಹಕಾರ ಸಿಕ್ಕಿದ್ದು ಮೂರನೇ ಅಲೆ ಸಾಧ್ಯತೆ ಹಿನ್ನೆಲೆಯಲ್ಲಿ ಜಾಗೃತಿಯಿಂದ ಇರಬೇಕೆಂದು ಸಾರ್ವಜನಿಕರಿಗೆ ಕರೆ ನೀಡಿರುವ ಸ್ಫೀಕರ್‌ ಸರ್ಕಾರ ಸಾರ್ವಜನಿಕರ ಹಿತದೃಷ್ಟಿಯಿಂದಲೇ ನಿಯಮ,ಕಟ್ಟುಪಾಡುಗಳನ್ನು ಮಾಡುತ್ತದೆ ಅದಕ್ಕೆ ಸ್ಫಂದಿಸದೆ ಬೇರೆ ದಾರಿ ಇಲ್ಲ ಎಂದರು.

ಅಭಿವೃದ್ಧಿ ಕೆಲಸಗಳ ಜೊತೆ, ತುರ್ತು ಅನಿವಾರ್ಯತೆಗಳಿಗೆ ಸರ್ಕಾರ ಸ್ಫಂದಿಸುತ್ತಿದೆ. ಒಮಿಕ್ರಾನ್‌,ಕೋವಿಡ್‌ ಎದುರಿಸಲು ಆರೋಗ್ಯ ಕಾರ್ಯಕರ್ತರ ಪ್ರಯತ್ನ ಮುಖ್ಯ. ಆರೋಗ್ಯ ಇಲಾಖೆ, ಇಂಧನ ಇಲಾಖೆ ಸೇರಿದಂತೆ ಸರ್ಕಾರದ ನಾನಾ ಇಲಾಖೆಗಳು ಉತ್ತಮವಾಗಿ ಕೆಲಸಮಾಡುತ್ತಿವೆ ಎಂದು ಶ್ಲಾಘಿಸಿದರು.
ಮನೋರಂಜನಾ ಚಟುವಟಿಕೆ, ಖಾಸಗಿ, ಸಾರ್ವಜನಿಕ ಕಾರ್ಯಕ್ರಮಗಳ ವಿಚಾರದಲ್ಲಿ ಕೂಡಾ ಸಾರ್ವಜನಿಕರು ಸರ್ಕಾರದ ಆದೇಶಗಳನ್ನು ಪಾಲಿಸುವುದು ಬಿಟ್ಟು ಬೇರೆ ದಾರಿ ಇಲ್ಲ ಎಂದು ಸ್ಪಷ್ಟಪಡಿಸಿದರು.ಹೊಸವರ್ಷ, ಉತ್ಸವ, ಕಾರ್ಯಕ್ರಮಗಳು ಕೋವಿಡ್‌ ಪ್ರಸಾರಕ್ಕೆ ವೇದಿಕೆಗಳಾಗಬಾರದೆಂದು ಸರ್ಕಾರ ನಿಬಂಧನೆ ಹೇರಿದೆ. ಅದರಿಂದ ಜನರಿಗೆ ತೊಂದರೆಯಾದರೂ ಅದರಿಂದಾಗುವ ಅನುಕೂಲ ಹೆಚ್ಚು ಎಂದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *