

ಕೇಂದ್ರ ಸರ್ಕಾರ ಜ.3ರಿಂದ ಮಕ್ಕಳಿಗೆ ಕೋವಿಡ್ ಲಸಿಕೆ ಹಾಗೂ ಆದ್ಯತಾ ವಲಯದವರಿಗೆ ಬೂಸ್ಟರ್ ಡೋಸ್ ನೀಡಲು ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಲಸಿಕೆ ವಿತರಣೆಗಾಗಿ ಉತ್ತರ ಕನ್ನಡ ಆರೋಗ್ಯ ಇಲಾಖೆ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದಾರೆ.
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಏಕಾಏಕಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಅದರಲ್ಲಿಯೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರಾಗುತ್ತಿದ್ದಾರೆ. ವಸತಿ ಶಾಲೆಗಳು ಕೊರೊನಾ ಕ್ಲಸ್ಟರ್‌ಗಳಾಗುವ ಆತಂಕ ಎದುರಾಗಿದೆ. ಹೀಗಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ.
ಜಿಲ್ಲೆಯಲ್ಲಿ ಶೇ.0.28ಕ್ಕೆ ತಲುಪಿದ್ದ ಕೋವಿಡ್ ಪಾಸಿಟಿವಿಟಿ ದರ ಕಳೆದ ಒಂದು ವಾರದಲ್ಲೇ ಏರಿಕೆಯಾಗಿ 0.75ಕ್ಕೆ ತಲುಪಿದೆ. ಸದ್ಯ 121 ಸಕ್ರಿಯ ಪ್ರಕರಣಗಳಿದ್ದು, ನಿತ್ಯ 20ಕ್ಕೂ ಅಧಿಕ ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿವೆ.
ಜಿಲ್ಲೆಯ ಸಿದ್ದಾಪುರದ ಕಾಲೇಜು ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾದ ಬಳಿಕ, ಜೊಯಿಡಾ ತಾಲೂಕಿನ ರಾಮನಗರದ ರಾಣಿ ಚೆನ್ನಮ್ಮ ವಸತಿ ಶಾಲೆಯ 60 ವಿದ್ಯಾರ್ಥಿನಿಯರ ಪೈಕಿ 19 ವಿದ್ಯಾರ್ಥಿನಿಯರಲ್ಲಿ ಸೋಂಕು ಪತ್ತೆಯಾಗಿತ್ತು. ಈಗ 30 ವಿದ್ಯಾರ್ಥಿಗಳಿಗೆ ವ್ಯಾಪಿಸಿದೆ. ಈ ನಿಟ್ಟಿನಲ್ಲಿ ವಸತಿ ಶಾಲೆಯನ್ನ ಕೊರೊನಾ ಕ್ಲಸ್ಟರ್ ಎಂದು ಘೋಷಣೆ ಮಾಡಿದ್ದು, ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ.

ಇನ್ನುಳಿದಂತೆ ಶಾಲೆ, ಕಾಲೇಜು ಹಾಗೂ ವಸತಿನಿಲಯಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಅಗತ್ಯ ಮುಂಜಾಗ್ರತೆ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದೆ. ಈಗಾಗಲೇ ಶಿಕ್ಷಣ ಇಲಾಖೆಯೊಂದಿಗೆ ಸಭೆ ನಡೆಸಿ, ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಕೊರೊನಾ ಮುಂಜಾಗ್ರತಾ ಕ್ರಮ ಪಾಲಿಸುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ.
ಕೇಂದ್ರ ಸರ್ಕಾರ ಜ.3ರಿಂದ ಮಕ್ಕಳಿಗೆ ಕೋವಿಡ್ ಲಸಿಕೆ ಹಾಗೂ ಆದ್ಯತಾ ವಲಯದವರಿಗೆ ಬೂಸ್ಟರ್ ಡೋಸ್ ನೀಡಲು ಘೋಷಿಸಿದೆ. ಈ ಹಿನ್ನೆಲೆ ಲಸಿಕೆ ವಿತರಣೆಗಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಜಿಲ್ಲೆಯಲ್ಲಿ 15 ರಿಂದ 18 ವರ್ಷದ 70 ಸಾವಿರದಿಂದ 75 ಸಾವಿರ ಮಕ್ಕಳಿದ್ದಾರೆ ಎಂದು ಅಂದಾಜಿಸಲಾಗಿದೆ.

ಸಿದ್ದಾಪುರ: ಕ್ರೀಡೆಯಿಂದ ಮಾನಸಿಕ ನೆಮ್ಮದಿಯ ಜೊತೆಗೆ ಆರೋಗ್ಯಕರ ಜೀವನಕ್ಕೆ ಸಹಕಾರಿಯಾಗಲಿದೆ. ಯುವಕರು ಮೊಬೈಲ್ ನಿಂದ ದೂರ ಬರಬೇಕಾದರೆ ಕ್ರೀಡೆ, ಸಾಂಸ್ಕೃತಿಕ ಮುಂತಾದ ಚಟುವಟಿಕೆ ಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಬೇಡ್ಕಣಿ ಗ್ರಾಮ ಪಂಚಾಯತಿ ಸದಸ್ಯ ಕೃಷ್ಣ ಮೂರ್ತಿ ಮಡಿವಾಳ ಕಡಕೇರಿ ಹೇಳಿದರು. ಅವರು ಕಡಕೇರಿ ಗಾಂಧಿ ಮೈದಾನ ಹಾಗೂ ಸುಭಾಷ್ ಚಂದ್ರ ಬೋಸ್ ಮೈದಾನ ದಲ್ಲಿ ಪ್ರೇಂಡ್ಸ ಕ್ರಿಕೆಟರ್ಸ್ ಕಡಕೆರಿ ಹಾಗೂ ನಾಗರಿಕರ ಸಂಯೋಜನೆಯಲ್ಲಿ ಆಯೋಜನೆಗೊಂಡಿದ್ದ ಟೆನಿಸ್ ಹಾರ್ಡ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಉದ್ಘಾಟಿಸಿ ಮಾತನಾಡಿದರು.
ಸಂಘಟನೆ ಸುಲಭವಾಗಿರುವುದಿಲ್ಲ ಎಲ್ಲರೂ ಒಗ್ಗಟ್ಟಾಗಿ ಕೆಲಸಗಳನ್ನು ಮಾಡಿದಾಗ ಮಾತ್ರ ಕಾರ್ಯಗಳು ಯಶಸ್ವಿಯಾಗಿ ಕೈಗೂಡುತ್ತದೆ. ಹಾಗೆ ಕಡಕೇರಿ ಹಿರಿಯರು ಕ್ರೀಡಾ ಚಟುವಟಿಕೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಊರಿನ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ . ಇಂದಿನ ಯುವಕರು ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯುತ್ತಿರುವುದು ಉತ್ತಮವಾದ ಬೆಳವಣಿಗೆ. ಸಂಘಟನೆ ಕೇವಲ ಕ್ರೀಡೆಗೆ ಮಾತ್ರ ಸೀಮಿತವಾಗಿರಬಾರದು ಊರಿನ ಅಭಿವೃದ್ಧಿ ಕಾರ್ಯಗಳಿಗೆ ಯುವಕರು ತಮ್ಮನ್ನು ತೊಡಗಿಸಿಕೊಳ್ಳಬೇಕು. ಕ್ರೀಡೆಯಿಂದ ಬಂದ ಹಣದಲ್ಲಿ ಉಳಿಕೆಯ ಹಣವನ್ನು ಪ್ರಗತಿಪರ ಚಟುವಟಿಕೆಗಳಿಗೆ ಉಪಯೋಗ ಮಾಡಬೇಕು ಎಂದು ಹೇಳಿದರು.
ಆನಂದ ನಾಯ್ಕ, ಮಾರುತಿ ಮಡಿವಾಳ ದಯಾನಂದ ಜಿ ನಾಯ್ಕ, ಗಣಪತಿ ನಾಯ್ಕ, ಶಿವಕುಮಾರ ನಾಯ್ಕ ವೇದಿಕೆ ಯಲ್ಲಿದ್ದರು.
ಸುರೇಶ ಮಡಿವಾಳ ಸ್ವಾಗತಿಸಿ, ವಂದಿಸಿದರು.
ಕ್ರಿಕೆಟ್ ಪಂದ್ಯಾವಳಿಯಲ್ಲಿ 26 ತಂಡಗಳು ಭಾಗವಹಿಸಿ ಭಾಗವಹಿಸಿದ್ದವು. ಹರಕನಹಳ್ಳಿ ತಂಡವು ಪ್ರಥಮ ಬಹುಮಾನವನ್ನು ಹಾಗೂ ಹಾಳದಕಟ್ಟಾ ತಂಡವು ದ್ವಿತೀಯ ಬಹುಮಾನವನ್ನು ಪಡೆದುಕೊಂಡವು.


ಆದ್ಯತಾ ವಲಯದಲ್ಲಿರುವ 77,302 ಮಂದಿಗೆ ಲಸಿಕೆ ನೀಡಲಾಗುತ್ತದೆ. ಇವರಲ್ಲಿ 15,284 ಆರೋಗ್ಯ ಕಾರ್ಯಕರ್ತರು, 10,997 ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲಿನ, ವಿವಿಧ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ 51,021 ಮಂದಿ ಸೇರಿದ್ದಾರೆ.
ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ, 60 ವರ್ಷಕ್ಕಿಂತ ಮೇಲಿನವರಿಗೆ ಜ.10 ರಿಂದ ಬೂಸ್ಟರ್ ಡೋಸ್ ಕೊಡಲಾಗುವುದು. ಅದೇ ರೀತಿ, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಮುಂಚೂಣಿ ಕಾರ್ಯಕರ್ತರಿಗೂ ಲಸಿಕೆ ನೀಡಲಾಗುತ್ತದೆ ಎಂದು ಆರ್ಸಿಹೆಚ್ಒ ಡಾ.ರಮೇಶ ರಾವ್ ತಿಳಿಸಿದ್ದಾರೆ. (etbk)
