ಟೈಲರ್‌ ಗಳಿಗೂ ಕಾರ್ಮಿಕ ಕಿಟ್‌ ವಿತರಣೆ, & ಸಚಿವರು,ಸಂಸದರ ನಡುವೆ ಜಟಾಪಟಿ!

ಸಿದ್ದಾಪುರ: ತಾಲೂಕು ಟೇಲರ್ ಅಸೋಸಿಯೇಷನ್ ವತಿಯಿಂದ ಕಾರ್ಮಿಕ ಇಲಾಖೆಯಿಂದ ಕೊಡಮಾಡಲ್ಪಟ್ಟ ಕೊರೋನಾ ಮುಂಜಾಗ್ರತಾ ಕಿಟ್ ಗಳನ್ನು ಸಂಘದ ಸದಸ್ಯರಿಗೆ ವಿತರಿಸಲಾಯಿತು.
ಕಾರ್ಯಕ್ರಮ ದಲ್ಲಿ ಕಿಟ್ ವಿತರಿಸಿ ಮಾತನಾಡಿದ ಪತ್ರಕರ್ತ ಸುರೇಶ ಮಡಿವಾಳ ಜೀವನಕ್ಕಿಂತ ಜೀವ ಮುಖ್ಯ. ನಿಮ್ಮಲ್ಲಿಗೆ ದಿನ ನಿತ್ಯ ನೂರಾರು ಜನರು ಭೇಟಿಯಾಗುತ್ತಾರೆ. ನೀವು ಎಚ್ಚರಿಕೆಯಿಂದ ಇರಬೇಕು. ಕಾಲಕಾಲಕ್ಕೆ ಸರ್ಕಾರವು ನೀಡುವ ಮಾರ್ಗಸೂಚಿ ಗಳನ್ನು ಪಾಲಿಸಬೇಕು. ನಿಮ್ಮಿಂದ ಹೆಚ್ಚು ಹೆಚ್ಚು ಕೊರೋನಾ ಜಾಗೃತಿ ಯಾಗಲಿ. ಮುನ್ನೆಚ್ಚರಿಕೆ ಕ್ರಮಕ್ಕಾಗಿ ಕೊರೋನಾ ಕಿಟ್ ನೀಡುತ್ತಿದ್ದಾರೆ. ಎಲ್ಲರೂ ಎರಡು ಡೋಸ್ ವ್ಯಾಕ್ಸಿನೇಷನ್‌ ಮಾಡಿಸಿಕೊಳ್ಳಿ. ಜೊತೆಗೆ ನಿಮ್ಮ ಅಕ್ಕಪಕ್ಕದ ವರಿಗೂ ವ್ಯಾಕ್ಸಿನೇಷನ್‌ ಮಾಡಿಸಿಕೊಳ್ಳುವಂತೆ ಜಾಗೃತಿ ಮಾಡಿ ಎಂದರು.

https://samajamukhi.net/2021/12/18/madhu-rahul-against-hindutva/

ಇನ್ನೊರ್ವ ಪತ್ರಕರ್ತ ಕನ್ನೇಶ ನಾಯ್ಕ ಮಾತನಾಡಿ ಶರಣರು ಕಾಯಕದ ಮಹತ್ವ ವನ್ನು ತಿಳಿಸಿದ್ದಾರೆ. ಅವರವರ ಕಾಯಕಕ್ಕೆ ಅದರದ್ದೇ ಆದ ಮಹತ್ವ ಇದೆ. ಅಂತೆಯೇ ಟೈಲರ್ ಗಳಿಂದ ಕೊರೋನಾ ಜಾಗೃತಿ ಆಗಲಿ ಎಂದರು.
ಪತ್ರಕರ್ತ ದಿವಾಕರ ನಾಯ್ಕ, ಟೈಲರ್ ಅಸೋಸಿಯೇಷನ್ ತಾಲ್ಲೂಕು ಅಧ್ಯಕ್ಷ ಅಣ್ಣಪ್ಪ ನಾಯ್ಕ, ಮಾಜಿ ಅಧ್ಯಕ್ಷ ರಮೇಶ ಜಿ ಕಲ್ಮೆಟ್ಲ, ಉಪಾಧ್ಯಕ್ಷ ವಿಜಯಕುಮಾರ ಕೆ ಧಾವಸ್ಕರ್ ವೇದಿಕೆ ಯಲ್ಲಿದ್ದರು.
ಕಾರ್ಯದರ್ಶಿ ಎಚ್ ಟಿ ವಾಸು ನಿರೂಪಿಸಿ ವಂದಿಸಿದರು.

ರಾಮನಗರ: ಮುಖ್ಯಮಂತ್ರಿ ಬೊಮ್ಮಾಯಿ ಸಮ್ಮುಖ ವೇದಿಕೆಯಲ್ಲೇ ಸಂಸದ ಡಿಕೆ ಸುರೇಶ್, ಸಚಿವ ಅಶ್ವತ್ಥ ನಾರಾಯಣ ಕಿತ್ತಾಟ!

ರಾಮನಗರದಲ್ಲಿಂದು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಬೇಕಿದ್ದ ವೇದಿಕೆಯಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿಯೇ ಸಂಸದ ಡಿ. ಕೆ. ಸುರೇಶ್ ಹಾಗೂ ಸಚಿವ ಅಶ್ವತ್ಥ ನಾರಾಯಣ ಪರಸ್ಪರ ವಾಗ್ವಾದಕ್ಕಿಳಿದ ಪ್ರಸಂಗ ನಡೆದಿದೆ.

DK_Suresh_Ashwathnarayan1

ರಾಮನಗರ: ರಾಮನಗರದಲ್ಲಿಂದು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಬೇಕಿದ್ದ ವೇದಿಕೆಯಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿಯೇ ಸಂಸದ ಡಿ.ಕೆ. ಸುರೇಶ್ ಹಾಗೂ ಸಚಿವ ಅಶ್ವತ್ಥ ನಾರಾಯಣ ಪರಸ್ಪರ ವಾಗ್ವಾದಕ್ಕಿಳಿದ ಪ್ರಸಂಗ ನಡೆದಿದೆ.

ರಾಮನಗರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಂದು ನಾಡಪ್ರಭು ಕೆಂಪೇಗೌಡ, ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗಳ ಅನಾವರಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ಆಯೋಜಿತವಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ನೀರಾವರಿ ಯೋಜನೆಗಳ ಅನುಷ್ಠಾನ ಬಿಜೆಪಿ ಸರ್ಕಾರದಿಂದಲೇ ಸಾಧ್ಯ. ತಮ್ಮ ಸರ್ಕಾರ ಅನೇಕ ಯೋಜನೆಗಳನ್ನು ಜಿಲ್ಲೆಯಲ್ಲಿ ನೆರವೇರಿಸಿದೆ. ಇಲ್ಲಿ ಬಿಜೆಪಿ ಪ್ರತಿನಿಧಿ ಇಲ್ಲದಿದ್ದರೂ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸಿಲ್ಲ. ತಮ್ಮ ಸರ್ಕಾರದಲ್ಲೇ ಯೋಜನೆಗಳನ್ನು ರೂಪಿಸಿ ತಮ್ಮ ಅವಧಿಯಲ್ಲಿಯೇ ಸಂಪೂರ್ಣಗೊಳಿಸುತ್ತೇವೆ ಎಂದಿದ್ದಾರೆ.

ಈ ಹಂತದಲ್ಲಿ ಸಿಟ್ಟಾದ ಡಿ.ಕೆ. ಸುರೇಶ್, ಸಚಿವ ಅಶ್ವತ್ಥ ನಾರಾಯಣ ಅವರ ಮಾತಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜೊತೆಗೆ ವೇದಿಕೆಯಲ್ಲಿಯೇ ಧರಣಿ ಕುಳಿತಿದ್ದಾರೆ. ಇದರಿಂದ ಆಕ್ರೋಶಗೊಂಡ ಅಶ್ವತ್ಥ ನಾರಾಯಣ, ಸಿಎಂ ಕಾರ್ಯಕ್ರಮಕ್ಕೆ ಅಗೌರವ ತೋರುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಇದರಿಂದ ಮಾತಿಗೆ ಮಾತು ಬೆಳೆದಿದ್ದು, ವಿಧಾನಪರಿಷತ್ ಸದಸ್ಯ ಸಿ. ರವಿ, ಅಶ್ವತ್ಥ ನಾರಾಯಣ ಅವರು ಮಾತನಾಡುತ್ತಿದ್ದ ಮೈಕ್ ಕಿತ್ತುಕೊಂಡ ಘಟನೆಯೂ ನಡೆದಿದೆ. ಸಂಸದ ಹಾಗೂ ಸಚಿವರ ವಾಗ್ವಾದದಿಂದಾಗಿ ತುಸುಹೊತ್ತು ಕಾರ್ಯಕ್ರಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *