ಗೆಳೆಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಶುಭಾ ಪೂಂಜ!

ತಮ್ಮ ಬಹುಕಾಲದ ಗೆಳೆಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಶುಭಾ ಪೂಂಜ

ಸ್ಯಾಂಡಲ್ ವುಡ್ ನಟಿ ಶುಭಾ ಪೂಂಜ ತಮ್ಮ ಬಹುಕಾಲದ ಗೆಳೆಯ ಸುಮಂತ್ ಮಹಾಬಲ ಅವರೊಂದಿಗೆ ಬುಧವಾರ ಉಡುಪಿ ಹತ್ತಿರದ ಮಜಲಬೆಟ್ಟು ಬೀಡುವಿನಲ್ಲಿ ಸರಳವಾಗಿ ವಿವಾಹವಾಗಿದ್ದಾರೆ.

shuba1

ಉಡುಪಿ: ಸ್ಯಾಂಡಲ್ ವುಡ್ ನಟಿ ಶುಭಾ ಪೂಂಜ ತಮ್ಮ ಬಹುಕಾಲದ ಗೆಳೆಯ ಸುಮಂತ್ ಮಹಾಬಲ ಅವರೊಂದಿಗೆ ಬುಧವಾರ ಉಡುಪಿ ಹತ್ತಿರದ ಮಜಲಬೆಟ್ಟು ಬೀಡುವಿನಲ್ಲಿ ಸರಳವಾಗಿ ವಿವಾಹವಾಗಿದ್ದಾರೆ.

ಈ ವಿಚಾರವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡ ಶುಭಾ ಪೂಂಜ, ಪ್ರೀತಿಯ ಎಲ್ಲರಿಗೂ ನಮಸ್ಕಾರಗಳು, ಇಂದು ನಾನು ಮತ್ತು ಸುಮಂತ್ ಮಹಾಬಲ ಗುರು-ಹಿರಿಯರು ಕುಟುಂಬ ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಊರು ಮಜಲಬೆಟ್ಟುಬೀಡುವಿನಲ್ಲಿ ಸರಳ ವಿವಾಹವಾದೆವು ಎಂದು ತಿಳಿಸಿದ್ದಾರೆ.

ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆಗಳು ನಮ್ಮ ಮೇಲಿರಲಿ ಎಂದು ಹೇಳುವ ಮೂಲಕ ಶುಭಾ ಪುಂಜ ತಮ್ಮ ವಿವಾಹ ವಿಷಯವನ್ನು ಬಹಿರಂಗಪಡಿಸಿದ್ದಾರೆ.

ಇವರ ವಿವಾಹಕ್ಕೆ ಬಿಗ್‍ಬಾಸ್ ಎಂಟರ ವಿಜೇತ ಮಂಜು ಪಾವಗಡ ಸಾಕ್ಷಿಯಾಗಿದ್ದು, ನಿಮ್ಮಿಬ್ಬರ ದಾಂಪತ್ಯ ಜೀವನಕ್ಕೆ ಶುಭ ಹಾರೈಸುತ್ತೇನೆ ಎಂದಿದ್ದಾರೆ. ಶುಭಾಪೂಂಜ ಬಿಗ್‍ಬಾಸ್ ನಂತರ ಸಿನಿಮಾಗಳಲ್ಲಿ ಸಕ್ರಿಯರಾಗಿದ್ದು, ಸಿನಿಮಾ ನಿರ್ಮಾಣದತ್ತ ಒಲವು ತೋರಿದ್ದಾರೆ. (kpc)

ಸಿದ್ದಾಪುರ: ತಾಲೂಕಿನ ಜಿಡ್ಡಿಯ ಶ್ರೀ ಮಾಡಿವಾಳ ಮಾಚೇಶ್ವರ ದೇವಸ್ಥಾನ ನಿರ್ಮಾಣ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನ ಜೀರ್ಣೋಸ್ತಾನ ಟ್ರಸ್ಟ್ ವತಿಯಿಂದ ಪೂಜ್ಯ ಡಾ: ವೀರೇಂದ್ರ ಹೆಗ್ಗಡೆ ಯವರು 2 ಲಕ್ಷ ರೂಪಾಯಿ ಗಳನ್ನು ನೀಡಿದ್ದಾರೆ.

ತಾಲ್ಲೂಕು ಯೋಜನಾಧಿಕಾರಿ ಪ್ರಭಾಕರ್ ನಾಯ್ಕ ದೇವಾಲಯ ಕಮೀಟಿ ಗೆ ಚೆಕ್‌ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ದೇವಾಲಯ ಕಮಿಟಿಯ ಅಧ್ಯಕ್ಷರಾದ ತಿಮ್ಮಪ್ಪ ಜಿಡ್ಡಿ, ಉಪಾಧ್ಯಕ್ಷ ಈಶ್ವರ್, ಕಾರ್ಯದರ್ಶಿ ಸದಾಶಿವ, ಖಜಾಂಜಿ ಗಣಪತಿ, ಸದಸ್ಯರಾದ ನಾಗರಾಜ್, ಬಸವರಾಜ್, ಮಹಾಬಲೇಶ್ವರ, ಗ್ರಾಮಸ್ಥರಾದ ಕನ್ನಪ್ಪ, ಸಂಸ್ಥೆಯ ಮೇಲ್ವಿಚಾರಕರಾದ ಕೃಷ್ಣ, ಸೇವಾ ಪ್ರತಿನಿಧಿ ಅಣ್ಣಪ್ಪಗೌಡ ಮೊದಲಾದವರು ಉಪಸ್ಥಿತರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *