ಇಂದಿನಿಂದ ಕೋವಿಡ್​ ಹೊಸ ಮಾರ್ಗಸೂಚಿ ಜಾರಿ: ಯಾವುದಕ್ಕೆಲ್ಲಾ ನಿರ್ಬಂಧ?

Thumbnail image

ರಾಜ್ಯದಲ್ಲಿ ಇಂದಿನಿಂದ ಕೋವಿಡ್​ ಹೊಸ ಮಾರ್ಗಸೂಚಿ ಜಾರಿ: ಯಾವುದಕ್ಕೆಲ್ಲಾ ನಿರ್ಬಂಧ?

COVID guidelines in Karnataka: ಇಂದಿನಿಂದ ಜ.19ರವರೆಗೆ ರಾಜ್ಯದಲ್ಲಿ ಹೊಸ ಕೋವಿಡ್​ ಮಾರ್ಗಸೂಚಿ ಜಾರಿಗೆ ಬರಲಿದೆ. ಇಂದು ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 5 ಗಂಟೆವರೆಗೆ ನೈಟ್ ಕರ್ಫ್ಯೂ ಇರಲಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗಿನ ಜಾವ 5 ಗಂಟೆವರೆಗೆ ರಾಜ್ಯಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿಯಾಗಲಿದೆ. ಮದುವೆ ಸಮಾರಂಭಕ್ಕೂ ಇಂದಿನಿಂದ ಕೋವಿಟ್ ನಿರ್ಬಂಧ ಅನ್ವಯವಾಗಲಿದೆ.

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಜನವರಿ 19 ರವರೆಗೆ ಹೊಸ ಮಾರ್ಗಸೂಚಿ ಜಾರಿಗೆ ಬರಲಿದೆ. ಶೇ.50ರ ನಿಯಮ, ವೀಕೆಂಡ್ ಕರ್ಫ್ಯೂ, ಬೆಂಗಳೂರಿಗೆ ಸೀಮಿತವಾಗಿ ಶಾಲಾ-ಕಾಲೇಜುಗಳು ಬಂದ್ ಆಗಲಿವೆ. ಎಲ್ಲಾ ರೀತಿಯ ಪ್ರತಿಭಟನೆ, ಧರಣಿ, ರ್ಯಾ ಲಿಗಳಿಗೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ.

ರಾಜ್ಯದಲ್ಲಿ ಕೊರೊನಾ ಸ್ಫೋಟಗೊಂಡಿದ್ದು, ಮೂರನೇ ಅಲೆ ಶುರುವಾಗಿದೆ. ಪರಿಸ್ಥಿತಿ ಕೈ ಜಾರುವ ಮುನ್ನವೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಇಂದಿನಿಂದ ರಾಜ್ಯಾದ್ಯಂತ ಕಠಿಣ ನಿರ್ಬಂಧಗಳನ್ನು ವಿಧಿಸಿ ನೂತನ ಕೋವಿಡ್ ಮಾರ್ಗಸೂಚಿ ಜಾರಿಗೊಳಿಸಿದೆ. ಹೊಸ ಗೈಡ್ ಲೈನ್ಸ್​ನಲ್ಲಿ ಏನಿದೆ, ಯಾವುದಕ್ಕೆಲ್ಲಾ ಅನುಮತಿ, ಯಾವುದಕ್ಕೆ ನಿರ್ಬಂಧ ಎನ್ನುವ ಫುಲ್ ಡೀಟೇಲ್ಸ್ ಇಲ್ಲಿದೆ.

ನಿಯಮಗಳು:

ಇಂದು ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 5 ಗಂಟೆವರೆಗೆ ನೈಟ್ ಕರ್ಫ್ಯೂ ಇರಲಿದ್ದು, ಇದು ಜನವರಿ 19 ರವರೆಗೆ ವಿಸ್ತರಣೆಯಾಗಲಿದೆ. ಎಲ್ಲಾ ಸರ್ಕಾರಿ ಕಚೇರಿಗಳು ವಾರದಲ್ಲಿ ಐದು ದಿನ ಮಾತ್ರ ತೆರೆಯಲಿವೆ. ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಕಚೇರಿಗಳನ್ನು ತೆರೆಯಬೇಕು, ಬೆಂಗಳೂರು ಹೊರತುಪಡಿಸಿ ಇತರೆಡೆಯ ಶಾಲಾ-ಕಾಲೇಜುಗಳಿಗೂ ಇದೇ ನಿಯಮ ಅನ್ವಯವಾಗಲಿದೆ.

ವಿಧಾನಸೌಧ ಸಚಿವಾಲಯದಲ್ಲಿ ಅಧೀನ ಕಾರ್ಯದರ್ಶಿ ದರ್ಜೆಯ ಕೆಳಗಿನ ಎಲ್ಲಾ ಸಿಬ್ಬಂದಿ ಶೇ.50ರ ನಿಯಮದಂತೆ ಕರ್ತವ್ಯ ನಿರ್ವಹಿಸುವುದು ಕಡ್ಡಾಯ. ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡದ ಕಚೇರಿಗಳಿಗೂ ಶೇ. 50ರ ನಿಯಮ ಅನ್ವಯವಾಗಲಿದೆ.

ವಾರಾಂತ್ಯದ ಕರ್ಫ್ಯೂ: ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗಿನ ಜಾವ 5 ಗಂಟೆವರೆಗೆ ರಾಜ್ಯಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರಲಿದೆ.

*ಸಾರಿಗೆ ಸೇವೆ ವಿಚಾರದಲ್ಲಿ ಬಿಎಂಆರ್ಸಿಎಲ್, ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿ ಸಾರಿಗೆ ನಿಗಮಗಳ ವ್ಯವಸ್ಥಾಪಕರು ಬೇಡಿಕೆಗೆ ಅನುಗುಣವಾಗಿ ಸೇವೆ ಒದಗಿಸಲು ಕ್ರಮ ಕೈಗೊಳ್ಳಬೇಕು. ಆನ್​ಲೈನ್ ಟಿಕೆಟ್ ಕಾಯ್ದಿರಿಸುವಿಕೆ ಆಧಾರದಲ್ಲಿ ಬಸ್​ಗಳ ಸೇವೆ ನೀಡಲು ಕ್ರಮ.

*ಬೆಂಗಳೂರಿನಲ್ಲಿ ಎಸ್ಎಸ್ಎಲ್​​ಸಿಯಿಂದ ದ್ವಿತೀಯ ಪಿಯುಸಿ ಮತ್ತು ಎಲ್ಲಾ ವೈದ್ಯಕೀಯ, ನರ್ಸಿಂಗ್ ಕೋರ್ಸ್ ಹೊರತುಪಡಿಸಿ ಇತರ ಎಲ್ಲಾ ಶಾಲಾ-ಕಾಲೇಜುಗಳ ಭೌತಿಕ ತರಗತಿ ಇಂದಿನಿಂದ ಎರಡು ವಾರಗಳ ಕಾಲ ರದ್ದು.

*ಪಬ್, ಕ್ಲಬ್, ರೆಸ್ಟೊರೆಂಟ್, ಬಾರ್, ಹೋಟೆಲ್ ಇತರೆ ಫುಡ್ ಕೋರ್ಟ್​ಗಳಲ್ಲಿ ಇಂದಿನಿಂದ ಆಸನ ಸಾಮರ್ಥ್ಯದ ಶೇ. 50ರಷ್ಟು ಮಾತ್ರ ಭರ್ತಿಗೆ ಅವಕಾಶ ಮತ್ತು ಎರಡೂ ಡೋಸ್ ವ್ಯಾಕ್ಸಿನ್ ಆಗದ ವ್ಯಕ್ತಿಗಳಿಗೆ ಈ ಜಾಗಗಳ ಪ್ರವೇಶಕ್ಕೆ ನಿರ್ಬಂಧವಿರಲಿದೆ.

*ಸಿನಿಮಾ ಮಂದಿರಗಳು, ಮಲ್ಟಿಫ್ಲೆಕ್ಸ್ ಥಿಯೇಟರ್​ಗಳು, ರಂಗ ಮಂದಿರಗಳು, ಆಡಿಟೋರಿಯಂಗಳು ಮತ್ತು ಇದೇ ಮಾದರಿಯ ಸ್ಥಳಗಳಗಳಲ್ಲಿಯೂ ಆಸನ ಸಾಮರ್ಥ್ಯದ ಶೇ.50 ರಷ್ಟು ಭರ್ತಿಗೆ ಅವಕಾಶ ನೀಡಿದ್ದು, ವ್ಯಾಕ್ಸಿನ್ ಆಗಿರುವ ವ್ಯಕ್ತಿಗಳ ಪ್ರವೇಶಕ್ಕೆ ಮಾತ್ರ ಅನುಮತಿ ನೀಡಲಾಗುತ್ತದೆ.

*ಮದುವೆ ಸಮಾರಂಭಕ್ಕೂ ಇಂದಿನಿಂದ ಕೋವಿಟ್ ನಿರ್ಬಂಧ ಅನ್ವಯವಾಗಲಿದ್ದು, ಹೊರ ಆವರಣದಲ್ಲಿ ನಡೆಯುವ ಮದುವೆಗೆ 200 ಜನರಿಗೆ ಅವಕಾಶ ಹಾಗು ಒಳಾಂಗಣ ಅಥವಾ ಕಲ್ಯಾಣ ಮಂಟಪದ ಒಳಗಡೆ ನಡೆಯುವ ಮದುವೆಗೆ 100 ಜನರು ಭಾಗಿಯಾಗುವಂತೆ ಗರಿಷ್ಠ ಮಿತಿ ವಿಧಿಸಲಾಗಿದೆ. ಕೋವಿಡ್ ನಿಯಮ ಪಾಲನೆ ಕಡ್ಡಾಯವಾಗಿದೆ.

*ಧಾರ್ಮಿಕ ಸ್ಥಳಗಳಲ್ಲಿ ಕೇವಲ ದರ್ಶನಕ್ಕೆ ಮಾತ್ರ ಅವಕಾಶವಿರಲಿದ್ದು, ಯಾವುದೇ ರೀತಿಯ ಸೇವೆಗಳಿಗೆ ಅವಕಾಶವಿಲ್ಲ. ಒಂದು ಬಾರಿಗೆ 50 ಜನರು ಮಾತ್ರ ದರ್ಶನಕ್ಕೆ ತೆರಳಬಹುದಾಗಿದೆ. ಇಲ್ಲಿಯೂ ಕೋವಿಡ್ ಎರಡೂ ಡೋಸ್ ವ್ಯಾಕ್ಸಿನೇಷನ್​ ಆಗಿರುವುದು ಕಡ್ಡಾಯವಾಗಿದೆ.

*ಮಾಲ್​ಗಳು, ಶಾಪಿಂಗ್ ತಾಣಗಳು ಇತರೆ ಎಲ್ಲಾ ವಾಣಿಜ್ಯ ಅಂಗಡಿ, ಮುಂಗಟ್ಟುಗಳು ವಾರಾಂತ್ಯ ಕರ್ಫ್ಯೂ ಹೊರತುಪಡಿಸಿ ವಾರದ ಇತರ ಐದು ದಿನಗಳಲ್ಲಿ ತೆರೆಯಬಹುದಾಗಿದೆ.

*ಈಜುಕೊಳ, ಜಿಮ್​ಗಳಿಗೆ ಶೇ.50 ರ ನಿಯಮ ಅನ್ವಯವಾಗಲಿದ್ದು, ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಜಿಮ್, ಈಜುಕೊಳ ಪ್ರವೇಶಕ್ಕೆ ಅವಕಾಶವಿರಲಿದೆ. ವ್ಯಾಕ್ಸಿನೇಷನ್​ ಆಗದ ಅಥವಾ ಒಂದು ಡೋಸ್ ಪಡೆದಿದ್ದವರಿಗೆ ಇಲ್ಲಿ ನಿರ್ಬಂಧವಿರಲಿದೆ.

*ರಾಜ್ಯದ ಎಲ್ಲಾ ಕ್ರೀಡಾ ಸಮುಚ್ಚಯಗಳು, ಕ್ರೀಡಾಂಗಣಗಳಲ್ಲಿಯೂ ಶೇ. 50 ರ ನಿಯಮ ಪಾಲಿಸಿ ಚಟುವಟಿಕೆ ನಡೆಸಬಹುದಾಗಿದೆ. ಇಂದಿನಿಂದ ರಾಜ್ಯಾದ್ಯಂತ ಅನ್ವಯವಾಗುವಂತೆ ಎಲ್ಲಾ ರೀತಿಯ ಮೆರವಣಿಗೆಗಳು, ಧರಣಿಗಳು, ಪ್ರತಿಭಟನೆಗಳನ್ನು ನಡೆಸಲು ನಿರ್ಬಂಧ ವಿಧಿಸಲಾಗಿದೆ. ಮಹಾರಾಷ್ಟ್ರ, ಕೇರಳದಿಂದ ರಾಜ್ಯಕ್ಕೆ ಬರುವವರಿಗೆ ವಿಧಿಸಿರುವ ಕಠಿಣ ನಿರ್ಬಂಧಗಳನ್ನು ಗೋವಾ ರಾಜ್ಯಕ್ಕೂ ಅನ್ವಯಿಸಲಾಗಿದೆ.

ಕಾಂಗ್ರೆಸ್ ಪಾದಯಾತ್ರೆಗೂ ಇಲ್ಲ ಅನುಮತಿ:

*ಕೋವಿಡ್ ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ಯಾವುದೇ ರೀತಿಯ ಮೆರವಣಿಗೆ, ರ್ಲಿಯಾ, ಪ್ರತಿಭಟನೆ, ಧರಣಿ, ಸತ್ಯಾಗ್ರಹಗಳನ್ನು ನಡೆಸುವಂತಿಲ್ಲ. ಈ ಎಲ್ಲಾ ಚಟುವಟಿಕೆಗಳಿಗೂ ನಿರ್ಬಂಧ ವಿಧಿಸಲಾಗಿದೆ. ಹಾಗಾಗಿ ಕಾಂಗ್ರೆಸ್ ನಡೆಸಲುದ್ದೇಶಿಸಿರುವ ಮೇಕೆದಾಟು ಪಾದಯಾತ್ರೆಗೆ ಅನುಮತಿ ಇಲ್ಲದಂತಾಗಿದೆ. ಅಲ್ಲದೆ ಮದುವೆ ಕಾರ್ಯ ಹೊರತುಪಡಿಸಿ ಇತರ ಸಭೆಗಳಿಗೆ 50 ಜನರ ಮಿತಿ ವಿಧಿಸಿರುವುದರಿಂದ ಪಾದಯಾತ್ರೆಗೆ ಅವಕಾಶ ಇಲ್ಲದಂತಾಗಿದೆ. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

ಕದಂಬಜಿಲ್ಲೆಗಾಗಿ ಸಹಿಸಂಗ್ರಹಣೆ, ಕಾನಳ್ಳಿಯಲ್ಲಿ ಹಸ್ಲರ್‌ ಸಂಘಕ್ಕೆ ಚಾಲನೆ,ಸೋಮುವಾರ ಮಹಿಳಾ ಸಂವೇದನೆ ಕವಿಗೋಷ್ಠಿ‌

ನಿರಂತರ ಹೋರಾಟದಲ್ಲಿರುವ ಶಿರಸಿ ಕೇಂದ್ರಿತ ಪ್ರತ್ಯೇಕ ಕದಂಬ ಜಿಲ್ಲೆ ಹೋರಾಟ ಸಮೀತಿ ಈ ತಿಂಗಳಿಂದ ಸಿದ್ಧಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ಸಹಿ ಸಂಗ್ರಹಣೆ...

ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಕೆಲಸಗಳಿಂದ ಸುಸ್ಥಿರ ಅಭಿವೃದ್ಧಿ… ಅರಶಿನಗೋಡು ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಸಂಪನ್ನ

ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿಕ್ಷಣ ಮತ್ತು ಉದ್ಯೋಗ ಗಳಿಗೆ ಹೆಚ್ಚಿನ ಮಹತ್ವ ನೀಡಿದರೆ ಹೊಸ ಪೀಳಿಗೆ ಮಹತ್ವದ್ದನ್ನು ಸಾಧಿಸಲು ಸಾಧ್ಯ ಎಂದಿರುವ ಶಾಸಕ ಭೀಮಣ್ಣ ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *