ಚುನಾವಣೆ ೨೦೨೩- ಜೆ.ಡಿ.ಎಸ್.‌ ಅಭ್ಯರ್ಥಿಗಳ ಪಟ್ಟಿ ಪ್ರಕಟ?

ಮುಂದಿನ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಾ ಜೆಡಿಎಸ್?:​ ಯಾರಿಗಿಲ್ಲ ಟಿಕೆಟ್​?

ಮುಂದಿನ ಚುನಾವಣೆಗೆ ಜೆಡಿಎಸ್​ ಎಲ್ಲಾ ರೀತಿಯಲ್ಲೂ ಸಿದ್ಧವಾಗಿದೆ. ಮೊದಲ ಪಟ್ಟಿ ಬಿಡುಗಡೆ ಮಾಡಿದ ನಂತರ ಸಂಭಾವ್ಯ ಅಭ್ಯರ್ಥಿಗಳಿಗೆ ತರಬೇತಿ ನಡೆಸುವ ಆಲೋಚನೆ ವರಿಷ್ಠರಲ್ಲಿ ಇದೆ. ಆದರೆ, ಕೋವಿಡ್ ಹೆಚ್ಚಳದಿಂದ ಸಭೆ ಸಮಾರಂಭ ನಡೆಸುವುದಕ್ಕೆ ನಿರ್ಬಂಧ ಇರುವ ಕಾರಣ ಮತ್ತು ಅಭ್ಯರ್ಥಿಗಳ ಆಯ್ಕೆ ಮಾಡುವ ಕಸರತ್ತು ಅಂತಿಮ ಹಂತದಲ್ಲಿರುವುದರಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯನ್ನು ಸ್ವಲ್ಪ ದಿನಗಳ ಕಾಲ ಮುಂದಕ್ಕೆ ಹಾಕಲು ವರಿಷ್ಠರು ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ..

ಬೆಂಗಳೂರು : 2023ಕ್ಕೆ 123 ಕ್ಷೇತ್ರಗಳಲ್ಲಿ ಜಾತ್ಯಾತೀತ ಜನತಾದಳ ಬಾವುಟ ಹಾರಬೇಕು. ಯಾರ ಹಂಗೂ ಇಲ್ಲದ ಪೂರ್ಣ ಜಾತ್ಯಾತೀತ ಜನತಾ ದಳ ಪಟ್ಟಕ್ಕೇರಬೇಕು. ಇದು ಜೆಡಿಎಸ್‍ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಕನಸು. ಇದು ಕೇವಲ ಕನಸಷ್ಟೇ ಅಲ್ಲ, ಕರ್ನಾಟಕವನ್ನು ಸಮಗ್ರವಾಗಿ ಸಮೃದ್ಧಗೊಳಿಸುವ ಮಹಾ ಸಂಕಲ್ಪ ಕೂಡ ಹೌದು.

2023ರ ಸಾರ್ವತ್ರಿಕ ಚುನಾವಣೆಗೆ ಒಂದೂವರೆ ವರ್ಷ ಬಾಕಿ ಇರುವಾಗಲೇ ಜೆಡಿಎಸ್ ಪಕ್ಷ ಚುನಾವಣಾ ತಯಾರಿ ಮಾಡಿಕೊಳ್ಳುತ್ತಿದೆ. ಮುಂದಿನ ಚುನಾವಣೆಯಲ್ಲಿ 123 ಕ್ಷೇತ್ರಗಳನ್ನು ಗೆದ್ದು ರಾಜ್ಯದಲ್ಲಿ ಅಧಿಕಾರ ಹಿಡಿಯಲು ಈಗಾಗಲೇ ರೂಪುರೇಷೆ ಸಿದ್ಧಪಡಿಸಿರುವ ಜೆಡಿಎಸ್‍ ವರಿಷ್ಠರು, ಸಂಕ್ರಾಂತಿ ಹಬ್ಬಕ್ಕೆ 110 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಕುಮಾರಸ್ವಾಮಿ ಅವರು ಈ ಹಿಂದೆ ಹೇಳಿದ್ದರು. ಆದರೆ, ಮೊದಲ ಪಟ್ಟಿ ಬಿಡುಗಡೆ ಮಾಡುವುದು ವಿಳಂಬವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಮೊದಲ ಪಟ್ಟಿ ಬಿಡುಗಡೆ ಮಾಡಿದ ನಂತರ ಸಂಭಾವ್ಯ ಅಭ್ಯರ್ಥಿಗಳಿಗೆ ತರಬೇತಿ ನಡೆಸುವ ಆಲೋಚನೆ ವರಿಷ್ಠರಲ್ಲಿದೆ. ಆದರೆ, ಕೋವಿಡ್ ಹೆಚ್ಚಳದಿಂದ ಸಭೆ, ಸಮಾರಂಭ ನಡೆಸುವುದಕ್ಕೆ ನಿರ್ಬಂಧವಿರುವ ಕಾರಣ ಮತ್ತು ಅಭ್ಯರ್ಥಿಗಳ ಆಯ್ಕೆ ಮಾಡುವ ಕಸರತ್ತು ಅಂತಿಮ ಹಂತದಲ್ಲಿರುವುದರಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸ್ವಲ್ಪ ದಿನಗಳ ಕಾಲ ಮುಂದಕ್ಕೆ ಹಾಕಲು ವರಿಷ್ಠರು ಚಿಂತಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಮಿಷನ್ 123 ಹೆಸರಿನಲ್ಲಿ ಚುನಾವಣಾ ತಂತ್ರಗಾರಿಕೆ ಯೋಜನೆಯ ನೀಲಿ ನಕ್ಷೆಯನ್ನು ಸಿದ್ಧಪಡಿಸಲಾಗಿದೆ. ರಾಜ್ಯದ ಜನರ ಸಮಸ್ಯೆಗಳು, ಅದಕ್ಕೆ ಇರುವ ಪರಿಹಾರ, ದೇವೇಗೌಡರು ಸಿಎಂ ಹಾಗೂ ಪ್ರಧಾನಿಯಾಗಿದ್ದ ವೇಳೆ ಜಾರಿಗೆ ತಂದಿದ್ದ ಯೋಜನೆಗಳು.

ಜೆಡಿಎಸ್ ಮೈತ್ರಿ ಸರ್ಕಾರಗಳ ವೇಳೆ ಜಾರಿಗೆ ತಂದ ಯೋಜನೆಗಳು, ಅದರ ಜೊತೆಗೆ ಕೇಂದ್ರ ಸರ್ಕಾರಗಳಿಂದ ರಾಜ್ಯಕ್ಕಾಗುತ್ತಿರುವ ಅನ್ಯಾಯಗಳು, ಎರಡೂ ರಾಷ್ಟ್ರೀಯ ಪಕ್ಷಗಳಿಂದ ಪ್ರಾದೇಶಿಕ ಪಕ್ಷದ ಅಸ್ಮಿತೆ, ಅಗತ್ಯತೆ ಮತ್ತು ಅನಿವಾರ್ಯತೆಗಳ ಕುರಿತು ಸಂಭಾವ್ಯ ಅಭ್ಯರ್ಥಿಗಳಿಗೆ ಮನವರಿಕೆ ಮಾಡಿಕೊಡುವುದರ ಜೊತೆಗೆ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಪ್ರಚಾರ ಮಾಡುವುದು ಮತ್ತು ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನತೆಯ ಮುಂದಿಟ್ಟು ಮತದಾರರನ್ನು ಸೆಳೆಯುವ ಕುರಿತು ಜೆಡಿಎಸ್ ಪೂರ್ವ ತಯಾರಿ ಮಾಡಿಕೊಂಡಿದೆ.

ಬಿಡದಿಯ ತೋಟದ ಮನೆಯಲ್ಲಿ ಕೆಲ ತಿಂಗಳ ಹಿಂದೆ ನಡೆದ ‘ಜನತಾ ಪರ್ವ 1.0’, ‘ಮಿಷನ್ -123’ ಕಾರ್ಯಾಗಾರದಲ್ಲಿ ಪ್ರಚಲಿತ ರಾಜಕೀಯ ಸನ್ನಿವೇಶದ ಕುರಿತು ಮಾತನಾಡುತ್ತಲೇ ಮುಂದಿನ ಚುನಾವಣೆಯಲ್ಲಿ ಕಣಕ್ಕಿಳಿಯಲಿರುವ ಪಕ್ಷದ ಅಭ್ಯರ್ಥಿಗಳಿಗೆ ಗುರಿ ನಿಗದಿಪಡಿಸಿ, ಗೆಲುವಿನ ದಾರಿಯನ್ನೂ ತೋರಿಸಿರುವ ಹೆಚ್.ಡಿ. ಕುಮಾರಸ್ವಾಮಿ ಅವರು, ಗೆಲುವು ಸುಲಭವಲ್ಲ. ಹಾಗಂತಾ, ಸುಮ್ಮನಿರುವುದು ಕೂಡ ಸಾಧ್ಯವಿಲ್ಲ ಎನ್ನುತ್ತಲೇ ನಾಯಕರಿಗೆ ದಿಕ್ಸೂಚಿ ನಿಗದಿ ಮಾಡಿ, ಕೆಲ ಎಚ್ಚರಿಕೆಯ ಮಾತುಗಳು ಹಾಗೂ ವಾಸ್ತವ ಸಂಗತಿಗಳನ್ನು ಮನದಟ್ಟು ಮಾಡಿಕೊಟ್ಟಿದ್ದಾರೆ.

ಮೂಲಗಳ ಪ್ರಕಾರ, ಜೆಡಿಎಸ್​​ನ ಹಾಲಿ ಮತ್ತು ಮಾಜಿ ಶಾಸಕರ ಪೈಕಿ 10 ರಿಂದ 15 ಮಂದಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹಾಲಿ ಶಾಸಕರ ಕ್ಷೇತ್ರಗಳಿಗೂ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದೆಯೇ? ಅಥವಾ ಇಲ್ಲವೇ ಯಾರಿಗೆಲ್ಲಾ ಟಿಕೆಟ್ ಕೈ ತಪ್ಪಲಿದೆ ಎಂಬುದು ಮೊದಲ ಪಟ್ಟಿ ಬಿಡುಗಡೆಗೊಂಡ ನಂತರವಷ್ಟೇ ಸ್ಪಷ್ಟವಾಗಲಿದೆ.

ಮೈಸೂರು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ, ತುಮಕೂರು ಗುಬ್ಬಿ ಶಾಸಕ ಶ್ರೀನಿವಾಸ್ ( ವಾಸು), ಕೋಲಾರ ಕ್ಷೇತ್ರದ ಶಾಸಕ ಶ್ರೀನಿವಾಸ್ ಗೌಡ ಸೇರಿದಂತೆ ಹಲವರು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಕಡೆ ಒಲವು ತೋರಿದ್ದಾರೆ. ಈಗಾಗಲೇ ಮಾಜಿ ಶಾಸಕರಾದ ಕೋನರೆಡ್ಡಿ, ಸಿ.ಆರ್. ಮನೋಹರ್ ಕಾಂಗ್ರೆಸ್‌ಗೆ ಸೇರಿದ್ದಾರೆ.

ಪರಿಷತ್‌ನ ಮಾಜಿ ಸದಸ್ಯರಾದ ಸಂದೇಶ್ ನಾಗರಾಜ್, ಕಾಂತರಾಜ್ ಕಾಂಗ್ರೆಸ್ ಸೇರುವ ಸಿದ್ದತೆಯಲ್ಲಿದ್ದಾರೆ. ಇನ್ನೂ ಕೆಲವು ಜೆಡಿಎಸ್‍ ಮಾಜಿ ಶಾಸಕರು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿರುವ ಜೆಡಿಎಸ್‍ ವರಿಷ್ಠರು ತಮ್ಮದೇ ಆದ ಕಾರ್ಯತಂತ್ರ ಹೆಣೆಯುತ್ತಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *