ಉ.ಕ.ಸಾವಿರಕ್ಕೇರಿದ ಕರೋನಾ ಸೋಂಕಿತರ ಸಂಖ್ಯೆ,೬೦೦ ಕ್ಕೂ ಹೆಚ್ಚು ಜನರು ಗುಣಮುಖ

Thumbnail image

ಉತ್ತರ ಕನ್ನಡದಲ್ಲಿ 900ರ ಗಡಿ ತಲುಪಿದ ಕೊರೊನಾ..

ಉತ್ತರಕನ್ನಡ ಜಿಲ್ಲೆಯಲ್ಲಿ ಇದುವರೆಗೆ 25 ಶಿಕ್ಷಣ ಸಂಸ್ಥೆಗಳನ್ನ ಕ್ಲಸ್ಟರ್ ಆಗಿ ಘೋಷಿಸಿ ಬಂದ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಮಾಹಿತಿ ನೀಡಿದ್ದಾರೆ.

ಕಾರವಾರ(ಉತ್ತರಕನ್ನಡ): ಉತ್ತರಕನ್ನಡದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಇಂದು 900ಕ್ಕೂ ಅಧಿಕ ಪಾಸಿಟಿವ್ ಪ್ರಕರಣಗಳು ವರದಿಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಮಾಹಿತಿ ನೀಡಿದ್ದಾರೆ

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಸುದ್ದಿಗೋಷ್ಠಿ

ನಿನ್ನೆ ಒಂದೇ ದಿನ ಜಿಲ್ಲೆಯಲ್ಲಿ 600 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದವು. ಇಂದು ಅದಕ್ಕಿಂತಲೂ ಹೆಚ್ಚಿನ ಪ್ರಕರಣಗಳು ದೃಢವಾಗುವ ಸಾಧ್ಯತೆಗಳಿದ್ದು, ಅದರಲ್ಲಿ ನೌಕಾನೆಲೆ ಹಾಗು ಮೆಡಿಕಲ್ ಕಾಲೇಜು ಸೇರಿ ಕಾರವಾರದಲ್ಲೇ ಹೆಚ್ಚಿನ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇದುವರೆಗೆ 25 ಶಿಕ್ಷಣ ಸಂಸ್ಥೆಗಳನ್ನ ಕ್ಲಸ್ಟರ್ ಆಗಿ ಘೋಷಿಸಿ ಬಂದ್ ಮಾಡಲಾಗಿದೆ ಎಂದರು.

5 ಪಾಸಿಟಿವ್ ಪ್ರಕರಣ ಪತ್ತೆಯಾದ ಶಾಲೆಗಳನ್ನೇ ಕ್ಲಸ್ಟರ್ ಎಂದು ಪರಿಗಣಿಸಲಾಗುತ್ತಿದೆ. ಅದರಂತೆ ಇಂದು ದಾಂಡೇಲಿ 4, ಹೊನ್ನಾವರ 3 ಹಾಗು ಯಲ್ಲಾಪುರ, ಶಿರಸಿ, ಕುಮಟಾದಲ್ಲಿ ತಲಾ ಒಂದು ಸೇರಿ ಮತ್ತೆ 10 ಶಾಲೆಗಳನ್ನ ಬಂದ್ ಮಾಡಲು ಆದೇಶಿಸಲಾಗಿದೆ ಎಂದು ಹೇಳಿದರು.

ಇನ್ನು ದಾಂಡೇಲಿ ನಗರದ 8 ಶಾಲೆಗಳಲ್ಲಿ ಕ್ಲಸ್ಟರ್ ನಿರ್ಮಾಣ ಹಿನ್ನಲೆ ಜನವರಿ 21 ರಿಂದ 26ರ ವರೆಗೆ ನಗರದ 1 ರಿಂದ 8ನೇ ತರಗತಿಗಳಿಗೆ ರಜೆ ಘೋಷಿಸಲಾಗಿದೆ. ನಗರದ 9, 10ನೇ ತರಗತಿಗಳು, ಪಿಯುಸಿ ಹಾಗೂ ಪದವಿ ತರಗತಿಗಳನ್ನ 50 ಶೇಕಡಾ ಭರ್ತಿಯೊಂದಿಗೆ ನಡೆಸಲು ಸೂಚನೆ ನೀಡಲಾಗಿದೆ.

ಈಗಾಗಲೇ ಕಾರವಾರದಲ್ಲಿ 20 ಸೇರಿ ಜಿಲ್ಲೆಯಾದ್ಯಂತ 39 ಮೈಕ್ರೋ ಕಂಟೈನ್‌ಮೆಂಟ್ ಝೋನ್‌ಗಳನ್ನ ಗುರುತಿಸಲಾಗಿದೆ. ಅಲ್ಲದೇ, ಜಿಲ್ಲೆಯಲ್ಲಿ ಸದ್ಯ ಪತ್ತೆಯಾಗಿರುವ ಪಾಸಿಟಿವ್ ಪ್ರಕರಣಗಳ ಪೈಕಿ ಸದ್ಯ 18 ವರ್ಷದೊಳಗಿನ 554 ಹಾಗೂ 18 ವರ್ಷ ಮೇಲ್ಪಟ್ಟ 508 ಮಂದಿ ವಿದ್ಯಾರ್ಥಿಗಳು ಸೋಂಕಿತರಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

Thumbnail image

ಉತ್ತರ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ಕೋವಿಡ್‌ ಸೋಂಕು ಹೆಚ್ಚಳ ; ಕ್ರೀಡಾಕೂಟಕ್ಕೆ ಭಾರಿ ವಿರೋಧ

ಕೊರೊನಾ ಮಾರ್ಗಸೂಚಿ ಹಿನ್ನೆಲೆ ಜಿಲ್ಲೆಯಲ್ಲಿ ಜಾತ್ರೆಗಳಿಗೆ ಸಾಕಷ್ಟು ನಿರ್ಬಂಧ ವಿಧಿಸಲಾಗಿದೆ. ಆದ್ರೆ, ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಜಿಲ್ಲಾಡಳಿತ ಅನುಮತಿ ನೀಡಿರೋದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅದರಲ್ಲೂ ಕೊರೊನಾ ಪ್ರಕರಣಗಳು ಹೆಚ್ಚಿರುವ ಕಾರವಾರದಲ್ಲೇ ಕ್ರೀಡಾಕೂಟ ನಡೆಯುತ್ತಿದೆ..

ಕಾರವಾರ : ಕೊರೊನಾ ಮೊದಲನೇಯ ಅಲೆಯಲ್ಲಿ ರಾಜ್ಯದಲ್ಲೇ ಕೊರೊನಾ ಹಾಟ್‌ಸ್ಪಾಟ್ ಆಗಿ ಗುರುತಿಸಿಕೊಂಡಿದ್ದ ಜಿಲ್ಲೆ ಉತ್ತರಕನ್ನಡ. ಆದರೆ, ಎರಡನೇ ಅಲೆಯಲ್ಲಿ ಜಿಲ್ಲಾಡಳಿತದ ಸೂಕ್ತ ನಿರ್ವಹಣೆಯಿಂದಾಗಿ ಕೊರೊನಾ ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿತ್ತು. ಆದರೆ, ಈ ಬಾರಿ ಹೆಚ್ಚಿನ ವಿದ್ಯಾರ್ಥಿಗಳಲ್ಲಿ ಹೆಚ್ಚಾಗಿ ಸೋಂಕು ಪತ್ತೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ

ಉತ್ತರ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ಕೋವಿಡ್‌ ಸೋಂಕು ಹೆಚ್ಚಳ ; ಕ್ರೀಡಾಕೂಟಕ್ಕೆ ಭಾರಿ ವಿರೋಧ

ನಿತ್ಯ ಇನ್ನೂರಕ್ಕೂ ಅಧಿಕ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗುತ್ತಿವೆ. ಸದ್ಯ ಜಿಲ್ಲೆಯ ಸಕ್ರಿಯ ಸೋಂಕಿತರ ಸಂಖ್ಯೆ 1,719ಕ್ಕೆ ಏರಿಕೆಯಾಗಿದೆ. ಜಿಲ್ಲೆಯಾದ್ಯಂತ 14 ಕಡೆಗಳಲ್ಲಿ ಕೋವಿಡ್ ಕ್ಲಸ್ಟರ್ ನಿರ್ಮಾಣವಾಗಿದೆ. ಕಾರವಾರದಲ್ಲಿ 2 ಹಾಗೂ ಹೊನ್ನಾವರದಲ್ಲಿ 3 ಕಡೆಗಳಲ್ಲಿ ಪತ್ತೆಯಾಗಿದೆ.

ಜಿಲ್ಲೆಯಲ್ಲಿ 18 ವರ್ಷದೊಳಗಿನ 349 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಪೈಕಿ 13 ರಿಂದ 18 ವರ್ಷದೊಳಗಿನವರೇ 244 ವಿದ್ಯಾರ್ಥಿಗಳಿದ್ದಾರೆ. ಅದರಲ್ಲೂ ಕಾರವಾರ ಹಾಗೂ ಹೊನ್ನಾವರ ತಾಲೂಕುಗಳ ವಿದ್ಯಾರ್ಥಿಗಳಲ್ಲಿ ಹೆಚ್ಚಾಗಿ ಸೋಂಕು ಪತ್ತೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಒಂದು ವಾರ ನಗರ ಪ್ರದೇಶದ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳನ್ನ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

‘ಆಸ್ಪತ್ರೆಗೆ ದಾಖಲಾಗುವ ಸೋಂಕಿತರ ಸಂಖ್ಯೆ ಕಡಿಮೆ’

ಜಿಲ್ಲೆಯ ಕೊರೊನಾ ಪಾಸಿಟಿವಿಟಿ ದರ ಶೇ.8.89 ಇದೆ. ಕಾರವಾರ ತಾಲೂಕಿನಲ್ಲೇ ಅತಿ ಹೆಚ್ಚು ಅಂದ್ರೆ ಶೇ.14ರಷ್ಟಿದೆ. ಉಳಿದಂತೆ ಹೊನ್ನಾವರದಲ್ಲಿ ಶೇ.5.5 ಇದ್ರೆ, ಕುಮಟಾ ತಾಲೂಕಿನಲ್ಲಿ ಶೇ.5.3 ಪಾಸಿಟಿವಿಟಿ ದರ ಇದೆ. ಉಳಿದ ತಾಲೂಕುಗಳಲ್ಲಿ ಶೇ.5ಕ್ಕಿಂತ ಕಡಿಮೆಯಿದೆ. ವಿದ್ಯಾರ್ಥಿಗಳಿಗೆ ಕೊರೊನಾ ವ್ಯಾಕ್ಸಿನ್ ನೀಡುವ ಪ್ರಕ್ರಿಯೆ ವೇಗವಾಗಿ ನಡೆಯುತ್ತಿದೆ. ಈಗಾಗಲೇ ಶೇ.80ರಷ್ಟು ಲಸಿಕೆ ನೀಡಿಕೆ ಪೂರ್ಣವಾಗಿದೆ. ಹೀಗಾಗಿ, ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗುತ್ತಿದ್ದರೂ ಸಹ ಆಸ್ಪತ್ರೆಗೆ ದಾಖಲಾಗುವ ಸ್ಥಿತಿ ಇಲ್ಲ ಅಂತಾ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಕೊರೊನಾ ಮಾರ್ಗಸೂಚಿ ಹಿನ್ನೆಲೆ ಜಿಲ್ಲೆಯಲ್ಲಿ ಜಾತ್ರೆಗಳಿಗೆ ಸಾಕಷ್ಟು ನಿರ್ಬಂಧ ವಿಧಿಸಲಾಗಿದೆ. ಆದ್ರೆ, ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಜಿಲ್ಲಾಡಳಿತ ಅನುಮತಿ ನೀಡಿರೋದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅದರಲ್ಲೂ ಕೊರೊನಾ ಪ್ರಕರಣಗಳು ಹೆಚ್ಚಿರುವ ಕಾರವಾರದಲ್ಲೇ ಕ್ರೀಡಾಕೂಟ ನಡೆಯುತ್ತಿದೆ. ಸಾಕಷ್ಟು ವಿದ್ಯಾರ್ಥಿಗಳು ಸಮರ್ಪಕವಾಗಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರವಿಲ್ಲದೆ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ. ಆದರೂ ಸಹ ಅವರಿಗೆ ಯಾಕೆ ನಿರ್ಬಂಧವಿಲ್ಲ ಅಂತಾ ಸಾರ್ವಜನಿಕರು ಪ್ರಶ್ನಿಸಿದ್ದಾರೆ.

(etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *