ಡಿ.ಕೆ.ಶಿ.ಗೆ ಚಕ್ಕಂದ,ಯತ್ನಾಳ್‌ ಗೆ ಪ್ರಾಣಸಂಕಟ….

Thumbnail image

ಜಾರಕಿಹೊಳಿ‌-ಯತ್ನಾಳ್ ಲಂಚ್​ ಮೀಟ್.. ಈಗ್ಲೇ ಸಂಪುಟ ಪುನಾರಚನೆ ಮಾಡದಿದ್ರೆ ಎಲ್ಲ ಬಿಜೆಪಿ ಬಿಟ್ಟು ಹೋಗ್ತಾರೆ.. ಯತ್ನಾಳ್ ಎಚ್ಚರಿಕೆ

ಡಿಕೆ ಶಿವಕುಮಾರ್ ಜೊತೆಗೆ ಸೀಟ್ ಬಗ್ಗೆ ಮಾತಾಡ್ಕೊಂಡಿದ್ದಾರೆ. ಅದರ ಬಗ್ಗೆ ನಮಗೆ ಮಾಹಿತಿ ಇದೆ. ಚುನಾವಣೆ ಘೋಷಣೆ ಆದ ಬಳಿಕ ಸಚಿವ ಸ್ಥಾನ ಮತ್ತು ಬಿಜೆಪಿಗೆ ರಾಜೀನಾಮೆ ಕೊಟ್ಟು ಹೋಗುತ್ತಾರೆ. ನಂತರ ಯತ್ನಾಳ್​ ಬೇಕು, ಜಾರಕಿಹೊಳಿ‌ ಬೇಕು ಅಂತಾ ಹುಡುಕಿದರೆ ಆಗಲ್ಲ. ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ ಆಗಲಿದೆ. ಈಗಲೇ ಎಚ್ಚೆತ್ತುಕೊಳ್ಳಬೇಕು. ಸಂಪುಟ ಪುನಾರಚನೆ ಬೇಗ ಆಗಬೇಕು..

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ವಿಷಯ ಕುರಿತು ಚರ್ಚೆ ಮುನ್ನೆಲೆಗೆ ಬರುತ್ತಿದ್ದಂತೆ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾದ ರಮೇಶ್ ಜಾರಕಿಹೊಳಿ‌ ಮತ್ತು ಬಸನಗೌಡ ಯತ್ನಾಳ್ ಭೋಜನ ಕೂಟದ ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಸದಾಶಿವನಗರದಲ್ಲಿರುವ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ನಿವಾಸಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ ನೀಡಿದರು. ಉಭಯ ನಾಯಕರು ಲಂಚ್ ಮೀಟ್ ಮಾಡಿದ್ದು, ಸಚಿವ‌ ಸಂಪುಟ ವಿಸ್ತರಣೆ ಸಾಧ್ಯತೆ ಕುರಿತ ವಿದ್ಯಮಾನಗಳು ಬಗ್ಗೆ ಮಾತುಕತೆ ನಡೆಸಿದರು.

ಇತ್ತೀಚೆಗೆ ರೇಣುಕಾಚಾರ್ಯ ಜೊತೆ ಸಭೆ ನಡೆಸಿದ್ದ ಯತ್ನಾಳ್ ಇಂದು ಜಾರಕಿಹೊಳಿ‌ ಜೊತೆ ಡಿನ್ನರ್ ಮೀಟ್ ನಡೆಸಿರುವುದು ಬಿಜೆಪಿ ಪಾಳಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.https://b556bd695f5ed5708ded43f99c7e0cf4.safeframe.googlesyndication.com/safeframe/1-0-38/html/container.html

ನಿನ್ನೆ ಬೆಳಗಾವಿಯಲ್ಲಿ ಸಚಿವ ಉಮೇಶ್ ಕತ್ತಿ ನಿವಾಸದಲ್ಲಿ ಪ್ರತ್ಯೇಕ ಸಭೆ ನಡೆದಿದೆ ಎನ್ನುವ ಮಾತುಗಳು ಕೇಳಿ ಬಂದ ಬೆನ್ನಲ್ಲೇ ರಮೇಶ್ ಜಾರಕಿಹೊಳಿ‌ ನಿವಾಸದಲ್ಲಿ ನಡೆದ ಸಭೆ, ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದೆ.

ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಮಾಧ್ಯಮದವರೊಂದಿಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಮಾತಮಾಡಿರುವುದು..

ಸಂಪುಟ ಪುನಾರಚನೆ ಬಗ್ಗೆ ಸಿಎಂ ನಿರ್ಧಾರ ಒಪ್ಪುತ್ತೇವೆ : ಸಭೆ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ರಮೇಶ್ ಜಾರಕಿಹೊಳಿ‌, ಬೆಳಗಾವಿಯಲ್ಲಿ ನಡೆದ ಪ್ರತ್ಯೇಕ ಸಭೆಗೆ ಹೋಗಿಲ್ಲ, ನಾನು ಅಂತಹ ಸಭೆಗೆ ಹೋಗಲ್ಲ. ಪ್ರೀತಿ ಇರುವ ಸಭೆಗೆ ಹೋಗುತ್ತೇನೆ.

ನಮ್ಮ ಹೈಕಮಾಂಡ್‌ನಲ್ಲಿ ಬಹಳ ಬುದ್ದಿವಂತರಿದ್ದಾರೆ. ಯಾರು ಏನು ಮಾಡುತ್ತಾರೆ, ಅವರಿಗೆ ಎಲ್ಲ ಗೊತ್ತಿದೆ. ಅವತ್ತಿನ ಸಭೆಗೆ ಕುಮಟಳ್ಳಿಗೆ ಆಹ್ವಾನ‌ ಇತ್ತು. ಅವರು ಬೆಂಗಳೂರಿನಲ್ಲಿ ಇದ್ದರು. ಹಾಗಾಗಿ, ಹೋಗಿರಲಿಲ್ಲ. ಸಂಪುಟ ಪುನಾರಚನೆ ಬಗ್ಗೆ ಸಿಎಂ ನಿರ್ಧಾರವನ್ನು ಒಪ್ಪುತ್ತೇವೆ ಎಂದರು.

ಇವತ್ತು ನಾನು ಮತ್ತು ಯತ್ನಾಳ್ ನೀರಾವರಿ ಯೋಜನೆಗಳ ವಿಷಯದ ಬಗ್ಗೆ ಚರ್ಚೆಗೆ ಸೇರಿದ್ದೆವು. ಸಂಪುಟ ಪುನಾರಚನೆ ಬಗ್ಗೆ ವೈಯಕ್ತಿಕ ಅಭಿಪ್ರಾಯ ಇಲ್ಲ. ಸಿಎಂ ಭೇಟಿ ಮಾಡಿ ಅಭಿವೃದ್ಧಿ ಕುರಿತು ಮಾತಾಡಿದ್ದೇವೆ. ಕ್ಷೇತ್ರದ ಶಾಸಕನಾಗಿ ಭೇಟಿ ಮಾಡೋದು ನನ್ನ ಕರ್ತವ್ಯ ಎಂದರು. ಕಾಂಗ್ರೆಸ್ ಮಹಾದಾಯಿ ಹೋರಾಟ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ರಮೇಶ್ ಜಾರಕಿಹೊಳಿ, ಮೊದಲು ಕೃಷ್ಣ ನಡಿಗೆ ಏನಾಯ್ತು ಅದರ ಬಗ್ಗೆ ಕಾಂಗ್ರೆಸ್ ಉತ್ತರ ನೀಡಲಿ ಎಂದರು.

ನಂತರ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾನು ರಮೇಶ ಜಾರಕಿಹೊಳಿ ಊಟಕ್ಕೆ ಸೇರಿದ್ದೆವು. ಸಂಪುಟ ಪುನಾರಚನೆ ಶೀಘ್ರವಾಗಿ ಆಗಬೇಕು. ವಾರದೊಳಗೆ ಮಾಡಿದರೆ ಒಳ್ಳೆಯದು. ನಂತರ ಪುನಾರಚನೆಯಾದರೆ ಉಪಯೋಗ ಇಲ್ಲ. ಯಾಕೆಂದರೆ, ಉತ್ತರಪ್ರದೇಶದಲ್ಲಿ ಆದಂತೆ ಅಧಿಕಾರ ಅನುಭವಿಸಿದ ನಂತರ ಹೋಗುತ್ತಾರೆ. ಮೌರ್ಯ ರೀತಿ ಪಕ್ಷ ಬಿಟ್ಟು ಹೋಗುತ್ತಾರೆ. ಜಾತ್ರೆ ಮಾಡ್ಕೊಂಡು ಹೋಗುತ್ತಾರೆ ಎಂದು ವ್ಯಂಗ್ಯವಾಡಿದರು.

ಡಿಕೆಶಿ ಜೊತೆಗೆ ಸೀಟ್ ಬಗ್ಗೆ ಮಾತಾಡ್ಕೊಂಡಿದ್ದಾರೆ : ಡಿಕೆ ಶಿವಕುಮಾರ್ ಜೊತೆಗೆ ಸೀಟ್ ಬಗ್ಗೆ ಮಾತಾಡ್ಕೊಂಡಿದ್ದಾರೆ. ಅದರ ಬಗ್ಗೆ ನಮಗೆ ಮಾಹಿತಿ ಇದೆ. ಚುನಾವಣೆ ಘೋಷಣೆ ಆದ ಬಳಿಕ ಸಚಿವ ಸ್ಥಾನ ಮತ್ತು ಬಿಜೆಪಿಗೆ ರಾಜೀನಾಮೆ ಕೊಟ್ಟು ಹೋಗುತ್ತಾರೆ. ನಂತರ ಯತ್ನಾಳ್​ ಬೇಕು, ಜಾರಕಿಹೊಳಿ‌ ಬೇಕು ಅಂತಾ ಹುಡುಕಿದರೆ ಆಗಲ್ಲ. ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ ಆಗಲಿದೆ. ಈಗಲೇ ಎಚ್ಚೆತ್ತುಕೊಳ್ಳಬೇಕು. ಸಂಪುಟ ಪುನಾರಚನೆ ಬೇಗ ಆಗಬೇಕು ಎಂದರು.

ಕೆಲವರಿಗೆ 10 ವೋಟ್​ ತರೋ ಯೋಗ್ಯತೆ ಇಲ್ಲ. ಅಧಿಕಾರಕ್ಕೆ ಮಠ ಕಟ್ತಾ ಇದ್ದಾರೆ. ಅಂತಹವರನ್ನು ಮಂತ್ರಿ ಮಾಡಿದ್ದಾರೆ. ಇವರಿಂದ ಉಪಯೋಗ ಇಲ್ಲ. 3ನೇ ಮಠ ಮಾಡೋಕೆ ಹೊರಟಿದ್ದಾರೆ ಎಂದು ಪರೋಕ್ಷವಾಗಿ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್‌ ವಾಗ್ದಾಳಿ ನಡೆಸಿದರು.

ಮೊನ್ನೆ ರೇಣುಕಾಚಾರ್ಯ ಭೇಟಿ ಮಾಡಿದ್ದರಲ್ಲಿ ತಪ್ಪೇನಿದೆ? ನಾನೇನು ಡಿಕೆಶಿ, ಸಿದ್ದರಾಮಯ್ಯರನ್ನು ಭೇಟಿ ಮಾಡಿಲ್ಲ. ನಾನು ಜಮೀರ್ ಅಹಮದ್ ಭೇಟಿ ಮಾಡಿದ್ದೇನಾ..? ನಮ್ಮ ಪಕ್ಷದ ಶಾಸಕ ರೇಣುಕಾಚಾರ್ಯ ಅವರನ್ನು ಭೇಟಿ ಮಾಡಿದ್ದೇನೆ. ಅದರಲ್ಲಿ ತಪ್ಪೇನಿದೆ..? ನಾವು ಭೇಟಿ ಮಾಡಿದರೆ ಪಕ್ಷಕ್ಕೆ ಏನು ತೊಂದರೆ ಆಗಲ್ಲ. ಅದು ಸಭೆಯಲ್ಲ. ಚಹಾ ಕುಡಿಯಲು ಕರೆದಿದ್ದರು. ಗೃಹ ಸಚಿವರ ಭೇಟಿಗೆ ಹೋದವನು, ಅಲ್ಲಿಂದ ರೇಣುಕಾಚಾರ್ಯ ಅವರ ಕಚೇರಿಗೆ ಹೋಗಿದ್ದೆ ಎಂದು ಸ್ಪಷ್ಟನೆ ನೀಡಿದರು.

ನಾನು ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ವಿರೋಧಿ. ರೇಣುಕಾಚಾರ್ಯ ನನ್ನ ಮೇಲೆ ಮಾತಾಡಿದರೂ, ನಾನು ಯಾವತ್ತೂ ರೇಣುಕಾಚಾರ್ಯ ಮೇಲೆ ಮಾತಾಡಿಲ್ಲ. ನಾನು ರೇಣುಕಾಚಾರ್ಯ ಮೇಲೆ ಮಾತಾಡಿದರೆ ನಮ್ಮ ಟಾರ್ಗೆಟ್ ಆಗಿರುವ ಯಡಿಯೂರಪ್ಪ ಮತ್ತು ವಿಜಯೇಂದ್ರ ಮೇಲಿನ ಫೋಕಸ್ ಬದಲಾಗುತ್ತಿತ್ತು ಎಂದು ರೇಣುಕಾಚಾರ್ಯ ಜೊತಗಿನ ದೋಸ್ತಿಯನ್ನು ಯತ್ನಾಳ್ ಸಮರ್ಥಿಸಿಕೊಂಡರು. (etbk)

ಕಾಂಗ್ರೆಸ್ ಸಂಪರ್ಕದಲ್ಲಿರುವ ಬಿಜೆಪಿ ನಾಯಕರ ಮಾಹಿತಿ ಬಿಟ್ಟು ಕೊಡಲ್ಲ: ಡಿಕೆಶಿ

ಮೇಕೆದಾಟು ಯೋಜನೆಗೆ ಒಂದೇ ದಿನದಲ್ಲಿ ಅನುಮತಿ ಪಡೆಯಲು ಸಾಮರ್ಥ್ಯವಿರುವ ಬಲಿಷ್ಠ ಸರ್ಕಾರವಿದೆ. ಅವರು ಈ ಕೆಲಸ ಮಾಡಲಿ. ನಾವು ಹೃತ್ಪೂರ್ವಕವಾಗಿ ಅವರನ್ನು ಅಭಿನಂದಿಸುತ್ತೇವೆ..

ಬೆಂಗಳೂರು : ಕಾಂಗ್ರೆಸ್ ಸಂಪರ್ಕದಲ್ಲಿರುವ ಬಿಜೆಪಿ ನಾಯಕರ ಮಾಹಿತಿಯನ್ನು ಬಿಟ್ಟು ಕೊಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಕೆಲ ಸಚಿವರು ಸೇರಿದಂತೆ ಬಿಜೆಪಿ ಮುಖಂಡರು ಡಿ. ಕೆ ಶಿವಕುಮಾರ್ ಅವರ ಸಂಪರ್ಕದಲ್ಲಿದ್ದಾರೆ ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ಬಗೆಗಿನ ಪ್ರಶ್ನೆಗೆ ಬೆಂಗಳೂರಿನಲ್ಲಿ ಉತ್ತರಿಸಿದ ಅವರು, ಬಿಜೆಪಿ ಹಾಗೂ ಇತರೆ ಪಕ್ಷಗಳ ನಾಯಕರು ನಮ್ಮ ಜತೆ ಸಂಪರ್ಕದಲ್ಲಿರುವ ವಿಚಾರವನ್ನು ನಾವು ಬಹಿರಂಗವಾಗಿ ಮಾತನಾಡಲು ಸಾಧ್ಯವಿಲ್ಲ ಎಂದರು.

ವಿಧಾನ ಪರಿಷತ್ ಹಾಗೂ ಶಾಸಕರ ವಿಚಾರ ಚರ್ಚೆ ಮಾಡಲು ಆಗುವುದಿಲ್ಲ. ಅವರ ಪಕ್ಷದಲ್ಲಿ ಏನಾಗುತ್ತಿದೆ ಎಂಬುದು ಅವರಿಗೆ ಚೆನ್ನಾಗಿ ಗೊತ್ತಿದೆ. ನಮ್ಮ ಜತೆ ಮಾತನಾಡಿರುವವರ ಬಗ್ಗೆ ಮಾಹಿತಿ ಬಹಿರಂಗಪಡಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರ ಜತೆ ಯಾರೆಲ್ಲಾ ಮಾತನಾಡುತ್ತಿದ್ದಾರೆ ಎಂದು ಸಚಿವರುಗಳನ್ನೇ ಕೇಳಿ ಎಂದು ತಿಳಿಸಿದರು.

ಈ ಪ್ರಶ್ನೆಯನ್ನು ನನ್ನ ಬಳಿ ಕೇಳುವ ಬದಲು ಅವರನ್ನೇ ಕೇಳಿ. ನನ್ನ ಬಳಿ ಯಾರು ಮಾತನಾಡುತ್ತಾರೆ ಎಂಬ ಮಾಹಿತಿಯನ್ನು ನಾನ್ಯಾಕೆ ಬಿಟ್ಟು ಕೊಡಲಿ?. ಇದರಲ್ಲಿ ಗೌಪ್ಯತೆ ಕಾಪಾಡಿಕೊಳ್ಳುವುದು ಮುಖ್ಯ. ಇದು ರಾಜಕಾರಣದ ಒಂದು ಭಾಗ.

ಪ್ರತಿಯೊಬ್ಬ ನಾಯಕರು ತಮ್ಮ ರಾಜಕೀಯ ಭವಿಷ್ಯ ರೂಪಿಸಿಕೊಳ್ಳುವ ಬಗ್ಗೆ ಚಿಂತನೆ ನಡೆಸುತ್ತಾರೆ. ಜನ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಯಾವ ರೀತಿ ಸಂದೇಶ ನೀಡುತ್ತಾರೆ ಎಂಬುದರ ಮೇಲೆ ಅವರು ತೀರ್ಮಾನ ಮಾಡುತ್ತಾರೆ ಎಂದರು.

ಮೇಕೆದಾಟು ಯೋಜನೆ ಜಾರಿ ಮಾಡಿದರೆ ಭವ್ಯ ಸ್ವಾಗತ : ನಾವೇ ಮೇಕೆದಾಟು ಯೋಜನೆ ಮಾಡುತ್ತೇವೆ. ಕಾಂಗ್ರೆಸ್ ಪಕ್ಷದವರಿಗೆ ಅವಕಾಶ ನೀಡುವುದಿಲ್ಲ ಎಂಬ ಸಚಿವ ಸೋಮಣ್ಣ ಅವರ ಹೇಳಿಕೆ ಬಗ್ಗೆ ಪ್ರಸ್ತಾಪ ಮಾಡಿದಾಗ, ಅವರನ್ನು ನಾನು ಅಭಿನಂದಿಸುತ್ತೇನೆ. ಈ ವಿಚಾರದಲ್ಲಿ ತಡ ಮಾಡುವುದು ಬೇಡ. ಹೇಗಿದ್ದರೂ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ ಇದೆ. ಜತೆಗೆ ಬಿಜೆಪಿಯ 25 ಸಂಸದರಿದ್ದಾರೆ‌.

ಒಂದೇ ದಿನದಲ್ಲಿ ಅನುಮತಿ ಪಡೆಯುವ ಸಾಮರ್ಥ್ಯವಿರುವ ಬಲಿಷ್ಠ ಸರ್ಕಾರವಿದೆ. ಅವರು ಈ ಕೆಲಸ ಮಾಡಲಿ. ನಾವು ಹೃತ್ಪೂರ್ವಕವಾಗಿ ಅವರನ್ನು ಅಭಿನಂದಿಸುತ್ತೇವೆ. ಯೋಜನೆಯ ಗುದ್ದಲಿ ಪೂಜೆಗೆ ನಾವು ಕೂಡ ಹೋಗುತ್ತೇವೆ. ಆ ಕಾರ್ಯಕ್ರಮಕ್ಕೆ ಸೋಮಣ್ಣ ಅವರನ್ನು ನಾನೇ ಭವ್ಯವಾಗಿ ಸ್ವಾಗತ ಮಾಡುತ್ತೇನೆ ಎಂದರು.

ಸಿಎಂ ಪೂರ್ಣವಧಿ ಬಗ್ಗೆ ನಮ್ಮದೇನೂ ತಕರಾರಿಲ್ಲ : ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಆರು ತಿಂಗಳಾಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಅವರು ಸಂಭ್ರಮಾಚರಣೆ ಮಾಡುವುದಾದರೆ ಮಾಡಿಕೊಳ್ಳಲಿ. ಮೊದಲು ಮೇಕೆದಾಟು ಯೋಜನೆ ಜಾರಿಗೊಳಿಸಲಿ. ಅವರು 2023ರ ಮೇ 15ರವರೆಗೂ ಅಧಿಕಾರದಲ್ಲಿರಲಿ. ಪೂರ್ಣವಧಿವರೆಗೂ ಸಿಎಂ ಆಗಿರಲಿ. ಅದಕ್ಕೆ ನಮ್ಮ ಯಾವುದೇ ತಕರಾರಿಲ್ಲ. ನಾವು ಬಿಜೆಪಿ ನಾಯಕರಂತೆ ಮಾತನಾಡುವುದಿಲ್ಲ. ನಾಯಕತ್ವ ಬದಲಾವಣೆಗೆ ಅವರ ಪಕ್ಷದವರು ಪ್ರಯತ್ನಿಸುತ್ತಿರಬಹುದು. ಆದರೆ, ಸರ್ಕಾರ ಅಲುಗಾಡಿಸಲು ನಾವು ಪ್ರಯತ್ನಿಸುತ್ತಿಲ್ಲ. ಅದರ ಅಗತ್ಯವೂ ನಮಗಿಲ್ಲ’ ಎಂದರು.

ಅವೈಜ್ಞಾನಿಕ ನಡೆ ಯಾರದ್ದು? : ಕಾಂಗ್ರೆಸ್​ನಿಂದ ಕೊರೊನಾ ನಿಯಮಗಳ ಉಲ್ಲಂಘನೆ ಆಗಿದೆ ಎಂಬ ಸಚಿವ ಸುಧಾಕರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಕೋವಿಡ್ ಸಮಯದಲ್ಲಿ ಸ್ವಿಮ್ಮಿಂಗ್ ಪೂಲ್ ಬಳಸದಂತೆ ನಿರ್ಬಂಧ ಹೇರಿದ್ದರೂ ಈಜಾಡಿದ್ದವರು ಯಾರು?. ಎಲ್ಲ ಅಪಾರ್ಟ್​ಮೆಂಟ್​ಗಳಿಗೆ ನಿರ್ಬಂಧ ಹಾಕಿ ನಮ್ಮ ಮನೆಯಲ್ಲಿ ನಾವು ಮಕ್ಕಳ ಜತೆ ಈಜಾಡಬಹುದಾ? ಎಂದು ಪ್ರಶ್ನಿಸಿದರು.

ಮನೆಯಲ್ಲಿ ಗಂಡ, ಹೆಂಡತಿ, ಮಕ್ಕಳು, ಅಕ್ಕಪಕ್ಕದಲ್ಲಿ ಕೂತು ಸಿನಿಮಾ ನೋಡಬಹುದು. ಆದರೆ, ಚಿತ್ರಮಂದಿರದಲ್ಲಿ ಒಂದು ಕುರ್ಚಿ ಬಿಟ್ಟು ಮತ್ತೊಂದು ಕುರ್ಚಿಯಲ್ಲಿ ಕೂರಬೇಕಂತೆ?. ವಿಮಾನ, ಮೆಟ್ರೋ, ಕೆಎಸ್ಆರ್​ಟಿಸಿ ಬಸ್​ಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕೂತು ಸಂಚಾರ ಮಾಡಬಹುದು.

ಆದರೆ, ಹೋಟೆಲ್​​ನಲ್ಲಿ ಮಾತ್ರ 50-50 ಅಂತರ ಕಾಯ್ದುಕೊಳ್ಳಬೇಕಂತೆ. ಇದು ಬ್ರಹ್ಮವಿದ್ಯೆನಾ?. ಇದು ವೈಜ್ಞಾನಿಕ ನಿರ್ಧಾರವೇ?. ಈ ದೇಶಕ್ಕೆ ವಿದ್ಯಾವಂತರು, ಬುದ್ಧಿವಂತರು ಇಲ್ಲದಿದ್ದರೂ ನಡೆಯುತ್ತದೆ. ಆದರೆ, ಪ್ರಜ್ಞಾವಂತರು ಇರಬೇಕು. ನೈಟ್ ಕರ್ಫ್ಯೂನಿಂದ ಆಗುವ ಅನುಕೂಲವೇನು?. ಹಗಲು ವೇಳೆ ಜತೆಯಲ್ಲಿ ಓಡಾಡಬಹುದಂತೆ. ರಾತ್ರಿ 9 ಗಂಟೆ ಮೇಲೆ ಜನ ಓಡಾಡುವಂತಿಲ್ಲ. ಕೆಲವರಿಗೆ ರಾತ್ರಿ 9 ಗಂಟೆ ಮೇಲೆ ವ್ಯಾಪಾರ ಆರಂಭವಾಗುತ್ತದೆ ಎಂದರು.

224 ಕ್ಷೇತ್ರ ನಮ್ಮ ಗುರಿ : ರಾಮನಗರ, ಚನ್ನಪಟ್ಟಣ ಕ್ಷೇತ್ರ ನಿಮಗೆ ಪ್ರತಿಷ್ಠೆಯೇ ಎಂಬ ಪ್ರಶ್ನೆಗೆ, ‘ನಮಗೆ ಕೇವಲ ರಾಮನಗರ ಹಾಗೂ ಚನ್ನಪಟ್ಟಣ ಮಾತ್ರವಲ್ಲ, ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಬೇಕು. ಎಲ್ಲ ಕ್ಷೇತ್ರಗಳು ನಮಗೆ ಪ್ರತಿಷ್ಠೆಯಾಗಿವೆ. ಸುರೇಶ್ ಅವರನ್ನು ಜನ ಲೋಕಸಭೆಗೆ ಆರಿಸಿ ಕಳುಹಿಸಿದ್ದಾರೆ. ಪಕ್ಷ ಈ ಬಗ್ಗೆ ತೀರ್ಮಾನ ಮಾಡಲಿದೆ. ತೀರ್ಮಾನ ಸುರೇಶ್ ಹಾಗೂ ಶಿವಕುಮಾರ್ ಅವರ ಕೈಯಲ್ಲಿಲ್ಲ, ಪಕ್ಷದ ಕೈಯಲ್ಲಿದೆ’ ಎಂದರು.

ಸದಸ್ಯತ್ವ ನೋಂದಣಿ : ಸದಸ್ಯತ್ವ ನೋಂದಣಿಯನ್ನು ಆನ್​ಲೈನ್​ ಮೂಲಕ ಮಾಡಲು ತೀರ್ಮಾನಿಸಲಾಗಿದೆ. 26ರೊಳಗಾಗಿ ಮುಖ್ಯ ನೋಂದಣಿದಾರರನ್ನು ನೇಮಕ ಮಾಡಬೇಕಾಗಿದೆ. ಪ್ರತಿ ಜಿಲ್ಲಾ ಪಂಚಾಯತ್‌ ಹಾಗೂ ಮುನ್ಸಿಪಾಲಿಟಿ ವ್ಯಾಪ್ತಿಗೆ ಇಬ್ಬರ ನೇಮಕಕ್ಕೆ ಚರ್ಚಿಸುತ್ತಿದ್ದೇವೆ. ಸದಸ್ಯತ್ವ ನೋಂದಣಿ ವಿಚಾರವಾಗಿ ಜನರ ಬಳಿ ಫೋಟೋ ಕೇಳುವಾಗ ಗಂಡಸರು ಹೆಣ್ಣು ಮಕ್ಕಳ ಫೋಟೋ, ಹೆಂಗಸರು ಗಂಡು ಮಕ್ಕಳ ಫೋಟೋ ಕೇಳಲು ಆಗುವುದಿಲ್ಲ.

ಹೀಗಾಗಿ, ಇಂತಹ ವಿಚಾರಗಳನ್ನೆಲ್ಲಾ ಚರ್ಚಿಸಿ ಆನ್​ಲೈನ್​ ಮೂಲಕ ಸದಸ್ಯತ್ವ ನೋಂದಣಿ ಮಾಡಲು ತೀರ್ಮಾನಿಸಲಾಗಿದೆ. ಯಾವುದೇ ಕಾರಣಕ್ಕೂ ಸದಸ್ಯತ್ವ ನೋಂದಣಿ ದಿನಾಂಕ ವಿಸ್ತರಣೆಯಾಗುವುದಿಲ್ಲ. ಪ್ರತಿಯೊಂದು ಚುನಾವಣೆ ಬ್ಲಾಕ್ ಅಧ್ಯಕ್ಷರಿಂದ ಹಿಡಿದು ಜಿಲ್ಲಾ ಕಾಂಗ್ರೆಸ್, ಪ್ರದೇಶ ಕಾಂಗ್ರೆಸ್, ಎಐಸಿಸಿ ಮಟ್ಟದ ಚುನಾವಣೆಗಳು ನಡೆಯಲಿದ್ದು, ಅಲ್ಲಿ ಸದಸ್ಯರಿಗೆ ಮತದಾನ ಮಾಡುವ ಹಕ್ಕಿದೆ. ಪಕ್ಷವನ್ನು ಕಾರ್ಯಕರ್ತರ ಪಕ್ಷವಾಗಿ (ಕೇಡರ್ ಬೇಸ್) ಮಾಡುವ ಬಗ್ಗೆ ನಾನು ಪ್ರತಿಜ್ಞಾ ಕಾರ್ಯಕ್ರಮದಲ್ಲೇ ಹೇಳಿದ್ದೇನೆ’ ಎಂದರು.

ಪ್ರದರ್ಶನ ಉದ್ಘಾಟನೆ : ಖ್ಯಾತ ಸಾಮಾಜಿಕ ಕಾರ್ಯಕರ್ತೆ ಅಕ್ಕಯ್ ಪದ್ಮಶಾಲಿ ಅವರ ಜೀವನಾಧರಿತ ನಾಟಕ “ಅಕ್ಕಯ್” ಮೊದಲ ಪ್ರದರ್ಶನದ ಉದ್ಘಾಟನೆಗೆ ಆಗಮಿಸುವಂತೆ ಕಾಜಾಣ ಹಾಗೂ ರಂಗಪಯಣ ತಂಡದ ಪ್ರತಿನಿಧಿಗಳು ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಸೋಮವಾರ ಭೇಟಿ ಮಾಡಿ, ಆಹ್ವಾನಿಸಿದರು. ರಂಗಭೂಮಿಯ ಪ್ರೊ. ಬೇಲೂರು ರಘುನಂದನ್, ನಯನಾ, ರಾಜಗುರು, ಜಿಪಿಒ ಚಂದ್ರು ಹಾಗೂ ಅಕ್ಕಯ್ ಪದ್ಮಶಾಲಿ ಮತ್ತಿತರರು ಇದ್ದರು. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *