

ಉತ್ತರಕನ್ನಡಕ್ಕೆ ಬರುವ ಪ್ರವಾಸಿಗರಿಗೆ ಪ್ರವಾಸಿ ತಾಣಗಳ ಸಮಗ್ರ ಮಾಹಿತಿ ನೀಡಲಿದೆ ಈ ವೆಬ್‌ಸೈಟ್..
ಇಲ್ಲಿಗೆ ಬರುವ ಪ್ರವಾಸಿಗರಿಗೆ ಅವರ ಅಂಗೈನಲ್ಲೇ ಜಿಲ್ಲೆಯ ಸಂಸ್ಕೃತಿ, ಆಹಾರ ವೈವಿಧ್ಯತೆ, ಸಂಪ್ರದಾಯಗಳ ಕುರಿತು ಮಾಹಿತಿ ಸಿಗುವಂತಾಗಬೇಕೆಂಬ ನಿಟ್ಟಿನಲ್ಲಿ https://uttarakannada.org/ ವೆಬ್‌ಸೈಟ್ ಅನ್ನು ಜಿಲ್ಲಾಡಳಿತ ಪ್ರಾರಂಭಿಸಿದೆ. ಜಿಲ್ಲೆಯ ಪ್ರವಾಸಿ ತಾಣಗಳ ಮಾಹಿತಿ, ಅಲ್ಲಿಗೆ ತಲುಪುವುದು ಹೇಗೆ ಎಂಬ ವಿವರಗಳನ್ನು ಸಂಗ್ರಹಿಸಿ ಈ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಲಾಗಿದೆ..

ಕಾರವಾರ(ಉತ್ತರಕನ್ನಡ) : ಕರಾವಳಿ ಜಿಲ್ಲೆ ಉತ್ತರಕನ್ನಡ ಅಂದಾಕ್ಷಣ ಮೊದಲು ನೆನಪಾಗೋದೇ ಇಲ್ಲಿನ ಹತ್ತು ಹಲವು ಪ್ರವಾಸಿ ತಾಣಗಳು. ಆದರೆ, ಜಿಲ್ಲೆಗೆ ಬರುವ ಪ್ರವಾಸಿಗರಿಗೆ ಇಲ್ಲಿನ ಪ್ರವಾಸಿ ತಾಣಗಳ ಸಮಗ್ರ ಮಾಹಿತಿ ಒಂದೇ ಕಡೆ ಸಿಗುವಂತಿರಲಿಲ್ಲ. ಹೀಗಾಗಿ, ಈ ಸಮಸ್ಯೆಗೆ ಜಿಲ್ಲಾಡಳಿತ ಒಂದು ಪರಿಹಾರವನ್ನು ಕಂಡುಕೊಂಡಿದೆ.
ಉತ್ತರಕನ್ನಡ ಸಾಕಷ್ಟು ಪ್ರವಾಸಿ ತಾಣಗಳ ಆಗರವಾಗಿದೆ. ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತದೆ. ಕರಾವಳಿಯಲ್ಲಿ ಓಂ, ಕುಡ್ಲೆ, ಟ್ಯಾಗೋರ್, ತೀಳಮಾತಿಯಂಥಹ ಕಡಲತೀರಗಳು, ಗೋಕರ್ಣ, ಮುರ್ಡೇಶ್ವರ, ಶಿರಸಿಯ ಮಾರಿಕಾಂಬೆಯ ದೇಗುಲದಂಥಹ ಧಾರ್ಮಿಕ ತಾಣಗಳು, ಟಿಬೇಟಿಯನ್ ಕಾಲೋನಿಯೆಂಬ ಸಂಸ್ಕೃತಿಯ ತಾಣ ಸೇರಿ ವಿಭಿನ್ನ ಸಮುದಾಯಗಳನ್ನು ಹೊಂದಿರುವ ಜಿಲ್ಲೆ ವಿವಿಧತೆಯಲ್ಲಿ ಏಕತೆ ಸಾರುತ್ತಿದೆ. ಆದರೆ, ಇಲ್ಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಇಲ್ಲಿನ ತಾಣಗಳ ಕುರಿತು ಒಂದೆಡೆ ಸಂಪೂರ್ಣ ಮಾಹಿತಿ ಒದಗಿಸುವುದು ಇಷ್ಟು ವರ್ಷಗಳ ಕಾಲ ಸಾಧ್ಯವಾಗಿರಲಿಲ್ಲ.https://ac65fd70def5a68ee3ec7d2e60438ff6.safeframe.googlesyndication.com/safeframe/1-0-38/html/container.html
ನೂತನ ವೆಬ್‌ಸೈಟ್ : ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನೂತನ ಕ್ರಮಕ್ಕೆ ಮುಂದಾಗಿದ್ದಾರೆ. ದಾಂಡೇಲಿ, ಜೋಯಿಡಾದ ಅರಣ್ಯ ಪರಿಸರ ವೀಕ್ಷಿಸಿದವರು ಅನತಿ ದೂರದ ಕಾರವಾರ, ಹೊನ್ನಾವರ ಭಾಗದ ಪ್ರವಾಸಿ ತಾಣಗಳಿಗೂ ಭೇಟಿ ನೀಡುವಂತಾಗಬೇಕು. https://prod.suv.etvbharat.com/v2/smart_urls/61f3c2a971d60097bf96bf2a/embedplayer1?&
ಪ್ರವಾಸಿಗರ ಸಹಾಯಕ್ಕೆ ಮುಂದಾದ ಜಿಲ್ಲಾಡಳಿತ
ಇಲ್ಲಿಗೆ ಬರುವ ಪ್ರವಾಸಿಗರಿಗೆ ಅವರ ಅಂಗೈನಲ್ಲೇ ಜಿಲ್ಲೆಯ ಸಂಸ್ಕೃತಿ, ಆಹಾರ ವೈವಿಧ್ಯತೆ, ಸಂಪ್ರದಾಯಗಳ ಕುರಿತು ಮಾಹಿತಿ ಸಿಗುವಂತಾಗಬೇಕೆಂಬ ನಿಟ್ಟಿನಲ್ಲಿ https://uttarakannada.org/ ವೆಬ್‌ಸೈಟ್ ಅನ್ನು ಜಿಲ್ಲಾಡಳಿತ ಪ್ರಾರಂಭಿಸಿದೆ. ಜಿಲ್ಲೆಯ ಪ್ರವಾಸಿ ತಾಣಗಳ ಮಾಹಿತಿ, ಅಲ್ಲಿಗೆ ತಲುಪುವುದು ಹೇಗೆ ಎಂಬ ವಿವರಗಳನ್ನು ಸಂಗ್ರಹಿಸಿ ಈ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಲಾಗಿದೆ.
ವಾಸೋದ್ಯಮ ಇಲಾಖೆಯಡಿ ವೆಬ್‌ಸೈಟ್ : ಈ ವೆಬ್‌ಸೈಟ್ ಪ್ರವಾಸೋದ್ಯಮ ಇಲಾಖೆಯ ಅಡಿಯಲ್ಲಿದೆ. ಇದು ರೂಪುಗೊಳ್ಳುವಲ್ಲಿ ಮೂವರು ಯುವಕರ ತಂಡ ಶ್ರಮವಹಿಸಿದೆ. ಉರಗ ತಜ್ಞರಾದ ಓಂಕಾರ್ ಪೈ ವೆಬ್‌ಸೈಟ್‌ನಲ್ಲಿ ವೈಲ್ಡ್‌ಲೈಫ್‌ಗೆ ಸಂಬಂಧಿಸಿದ ಮಾಹಿತಿಗಳನ್ನು ನೀಡಿದರೆ, ಸಾತ್ವಿಕ್ ಭಟ್ ವೆಬ್‌ಸೈಟ್ ಡಿಸೈನ್ ಮಾಡಿದ್ದಾರೆ. ಗೋಪಿ ಜೋಲಿ ತಮ್ಮ ಕ್ಯಾಮೆರಾಗಳಲ್ಲಿ ಸೆರೆಹಿಡಿದ ಅತ್ಯುತ್ತಮ ಫೋಟೋಗಳನ್ನು ನೀಡಿ ವೆಬ್‌ಸೈಟ್‌ನ ಇನ್ನಷ್ಟು ಅಂದಗೊಳಿಸಿದ್ದಾರೆ.
ವೆಬ್ಸೈಟ್ನೊಂದಿಗೆ ಈಗಾಗಲೇ ಜಿಲ್ಲೆಯ ಎಲ್ಲ ರೆಸಾರ್ಟ್ ಮಾಲೀಕರುಗಳಿಗೂ ಕಾರ್ಯಾಗಾರವನ್ನು ನಡೆಸಲಾಗಿದೆ. ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುವ ಕುರಿತು ತಿಳಿಸಿಕೊಡಲಾಗಿದೆ. ಮುಂದಿನ ದಿನಗಳಲ್ಲಿ ಒಂದೇ ವೆಬ್‌ಸೈಟ್ ಮೂಲಕ ಜಿಲ್ಲೆಯ ಎಲ್ಲ ಪ್ರವಾಸಿ ತಾಣಗಳ ಭೇಟಿಗೆ ಅನುಕೂಲವಾಗುವಂತೆ ಮಾಡುವುದು ನಮ್ಮ ಗುರಿ ಅಂತಾ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಜಿಲ್ಲೆಯ ಕಡಲತೀರಗಳಿಗೆ ಪ್ರತಿ ವರ್ಷ ಲಕ್ಷಾಂತರ ಪ್ರವಾಸಿಗರು ಭೇಟಿ ನೀಡುತ್ತಾರೆ. ಆದ್ರೆ, ಪ್ರವಾಸಿಗರಿಗೆ ಅಕ್ಕಪಕ್ಕದ ಇತರೆ ಪ್ರವಾಸಿ ತಾಣಗಳ ಬಗ್ಗೆ ಮಾಹಿತಿ ಸಿಗದ ಹಿನ್ನೆಲೆ ಸಮೀಪದ ಕೆಲವೇ ತಾಣಗಳಿಗೆ ಭೇಟಿ ನೀಡಿ ವಾಪಸ್ಸಾಗುತ್ತಿದ್ದರು. ಈ ನಿಟ್ಟಿನಲ್ಲಿ ಪ್ರವಾಸಿಗರಿಗೆ ಸೂಕ್ತ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಈ ಕ್ರಮಕ್ಕೆ ಮುಂದಾಗಿರೋದು ಉತ್ತಮ ಬೆಳವಣಿಗೆ ಅಂತಾರೆ ಸ್ಥಳೀಯರು.
ಕೊರೊನಾ ಹೊಡೆತದಿಂದ ನಲುಗಿ ಹೋಗಿರುವ ಜಿಲ್ಲೆಯ ಪ್ರವಾಸೋದ್ಯಮವನ್ನು ತಾಂತ್ರಿಕತೆಯೊಂದಿಗೆ ಅಭಿವೃದ್ಧಿಪಡಿಸಲು ಜಿಲ್ಲಾಡಳಿತ ಮುಂದಾಗಿರೋದು ನಿಜಕ್ಕೂ ಉತ್ತಮ ಬೆಳವಣಿಗೆಯಾಗಿದೆ. (etbk)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
