ಎರಡು ಭಾರತ ಸೃಷ್ಟಿ, ಒಂದು ಶ್ರೀಮಂತರಿಗೆ ಮತ್ತೊಂದು ಬಡವರಿಗೆ; ದೇಶ ಇಬ್ಭಾಗವಾಗಿದೆ: ರಾಹುಲ್ ಗಾಂಧಿ

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎರಡು ಭಾರತ ಸೃಷ್ಟಿಸಲಾಗಿದೆ. ಒಂದು ಶ್ರೀಮಂತರಿಗಾಗಿ, ಮತ್ತೊಂದು ಬಡವರಿಗಾಗಿ. ದೇಶ…

rahul-1

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎರಡು ಭಾರತ ಸೃಷ್ಟಿಸಲಾಗಿದೆ. ಒಂದು ಶ್ರೀಮಂತರಿಗಾಗಿ, ಮತ್ತೊಂದು ಬಡವರಿಗಾಗಿ. ದೇಶ ಎರಡು ಭಾಗಗಳಾಗಿ ವಿಂಗಡನೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು. 

ಇಂದು ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ರಾಹುಲ್ ಗಾಂಧಿ ಚುನಾವಣಾ ಆಯೋಗ, ಪೆಗಾಸಸ್, ಇವೆಲ್ಲವೂ ರಾಜ್ಯಗಳ ಒಕ್ಕೂಟದ ಧ್ವನಿಯನ್ನು ನಾಶಪಡಿಸುವ ಸಾಧನಗಳಾಗಿವೆ ಎಂದು ಆರೋಪಿಸಿದರು.

https://imasdk.googleapis.com/js/core/bridge3.496.0_en.html#goog_2001309611

https://imasdk.googleapis.com/js/core/bridge3.496.0_en.html#goog_2001309613

ಲೋಕಸಭೆಯಲ್ಲಿ ಬಿಜೆಪಿಯ ಕಾರ್ಯತಂತ್ರದ ಬಗ್ಗೆ ಪ್ರಶ್ನಿಸಿದ ರಾಹುಲ್ ಗಾಂಧಿ, ಅಧ್ಯಕ್ಷೀಯ ಭಾಷಣವು ಕಾರ್ಯತಂತ್ರದ ದೃಷ್ಟಿಗೆ ಬದಲಾಗಿ ಅಧಿಕಾರಶಾಹಿ ವಿಚಾರಗಳ ಪಟ್ಟಿ ಎಂದು ನನಗೆ ತೋರಿತು. ದುರದೃಷ್ಟವಶಾತ್, ಅಧ್ಯಕ್ಷೀಯ ಭಾಷಣವು ನಮ್ಮ ದೇಶ ಎದುರಿಸುತ್ತಿರುವ ಕೇಂದ್ರೀಯ ಸವಾಲುಗಳ ಕುರಿತು ಉಲ್ಲೇಖಿಸಿಲ್ಲ ಎಂದರು.

ಅಧ್ಯಕ್ಷೀಯ ಭಾಷಣವು ಮೂರು ವಿಚಾರಗಳನ್ನು ಮರೆತಿದೆ. ಒಂದು ಮುಖ್ಯವಾಗಿ ನಮ್ಮ ದೇಶ ಒಂದೇ ಭಾರತವಾಗಿ ಉಳಿದಿಲ್ಲ. ಬಡವರಿಗಾಗಿ, ಶ್ರೀಮಂತರಿಗಾಗಿ ಎಂದು ಇಬ್ಭಾಗವಾಗಿದೆ. ಇನ್ನು ನಿರುದ್ಯೋಗದ ಬಗ್ಗೆಯೂ ಮಾತನಾಡಲಿಲ್ಲ. ದೇಶಾದ್ಯಂತ ಯುವಕರು ಉದ್ಯೋಗದ ಹುಡುಕಾಟದಲ್ಲಿ ತೊಡಗಿದ್ದಾರೆ. ನಿಮ್ಮ ಸರ್ಕಾರ ಇದುವರೆಗೂ ಉದ್ಯೋಗ ನೀಡುವಲ್ಲಿ ಅಶಕ್ತವಾಗಿದೆ ಎಂದರು. ನೀವು ಉದ್ಯೋಗ ಒದಗಿಸುವ ಬಗ್ಗೆ ಮಾತನಾಡುತ್ತಿದ್ದೀರಿ, 2021ರಲ್ಲಿ 3 ಕೋಟಿ ಯುವಕರು ತಮ್ಮ ಉದ್ಯೋಗವನ್ನು ಕಳೆದುಕೊಂಡರು. ಇಂದು ಭಾರತವು 50 ವರ್ಷಗಳಲ್ಲಿ ಅತಿ ಹೆಚ್ಚು ನಿರುದ್ಯೋಗವನ್ನು ಎದುರಿಸುತ್ತಿದೆ. ನೀವು ಮೇಡ್ ಇನ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ ಎಂದು ಮಾತನಾಡುತ್ತೀರಿ, ಆದರೆ ಯುವಕರಿಗೆ ಸಿಗಬೇಕಾದ ಉದ್ಯೋಗ ಸಿಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದರು.

ಯುಪಿಎ ಸರ್ಕಾರ 10 ವರ್ಷಗಳಲ್ಲಿ 27 ಕೋಟಿ ಜನರನ್ನು ಬಡತನದಿಂದ ಮುಕ್ತಗೊಳಿಸಿದೆ. ಇದು ನಮ್ಮ ದತ್ತಾಂಶ ಅಲ್ಲ, ಇದು ವಾಸ್ತವಿಕ ದತ್ತಾಂಶ. ಆದರೆ ಬಿಜೆಪಿ 23 ಕೋಟಿ ಜನರನ್ನು ಮತ್ತೆ ಬಡತನಕ್ಕೆ ತಳ್ಳಿದೆ. ನೀವು ಮೇಡ್ ಇನ್ ಇಂಡಿಯಾ ಬಗ್ಗೆ ಮಾತನಾಡುತ್ತೀರಿ. ಆದರೆ ಇಂದು ಮೇಡ್ ಇನ್ ಇಂಡಿಯಾ ಸಾಧ್ಯವಿಲ್ಲ. ಏಕೆಂದರೆ ಮೇಡ್ ಇನ್ ಇಂಡಿಯಾದಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದು ಮುಖ್ಯವಾಗುತ್ತದೆ ಎಂದರು.

ಚೀನಿಯರು ಬಹಳ ಸ್ಪಷ್ಟವಾದ ದೃಷ್ಟಿಕೋನವನ್ನು ಹೊಂದಿದ್ದಾರೆ. ಭಾರತದ ವಿದೇಶಾಂಗ ನೀತಿಯ ಏಕೈಕ ದೊಡ್ಡ ಕಾರ್ಯತಂತ್ರದ ಗುರಿ ಎಂದರೆ ಪಾಕಿಸ್ತಾನ ಮತ್ತು ಚೀನಾವನ್ನು ಪ್ರತ್ಯೇಕವಾಗಿ ಇಡುವುದು. ಆದರೆ ಬಿಜೆಪಿ ಇವರಿಬ್ಬರನ್ನು ಒಟ್ಟಿಗೆ ಸೇರಿಸಿದೆ. ಇದು ಭಾರತದ ವಿರುದ್ಧ ಬಿಜೆಪಿ ಕೈಗೊಂಡ ಮಹಾನ್ ಅಪರಾಧ ಎಂದು ದೂರಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *