
ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಿಂಗಳಿಂದ ನಡೆಯುತ್ತಿರುವ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಇದೀಗ ಮತ್ತಷ್ಟು ತಾರಕಕ್ಕೇರಿದೆ. ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿ ಪ್ರಾಂಶುಪಾಲರು…

ಉಡುಪಿ: ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಿಂಗಳಿಂದ ನಡೆಯುತ್ತಿರುವ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಇದೀಗ ಮತ್ತಷ್ಟು ತಾರಕಕ್ಕೇರಿದೆ. ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿ ಪ್ರಾಂಶುಪಾಲರು ಕಾಲೇಜಿನ ಗೇಟನ್ನು ಬಂದ್ ಮಾಡಿದ ಹಿನ್ನೆಲೆಯಲ್ಲಿ ಘಟನೆ ಸಂಬಂಧ ಕಾಂಗ್ರೆಸ್ ನಾಯಕ ಶಶಿ ತರೂರ್ ಹಾಗೂ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬಾ ಮುಫ್ತಿ ಕಿಡಿಕಾರಿದ್ದಾರೆ.
ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಮೆಹಬೂಬಾ ಮುಫ್ತಿಯವರು, ಸರ್ಕಾರ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ನೀಡಿದ ಬೇಟಿ ಬಚಾವೋ ಬೇಟಿ ಪಢಾವೋ ಘೋಷವಾಕ್ಯಗಳೆಲ್ಲಾ ಬರೀ ಟೊಳ್ಳು. ಮುಸ್ಲಿಂ ಹೆಣ್ಣುಮಕ್ಕಳು ತಮ್ಮ ಸಾಂಪ್ರದಾಯಿಕ ಉಡುಗೆ ಧರಿಸಿದ್ದಕ್ಕೆ ಅವರನ್ನು ಶಿಕ್ಷಣದಿಂದ ವಂಚಿತರನ್ನಾಗಿಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

https://imasdk.googleapis.com/js/core/bridge3.496.0_en.html#goog_1646016992
ತರೂರ್ ಟ್ವೀಟ್ ಮಾಡಿ, ಪ್ರತಿಯೊಬ್ಬರೂ ತಮಗೆ ಬೇಕಾದುದನ್ನು ಧರಿಸಲು ಸ್ವತಂತ್ರರು ಎಂಬುದು ಭಾರತದ ಶಕ್ತಿಯಾಗಿದೆ. ಹಿಜಾಬ್ ಅನ್ನು ಅನುಮತಿಸದಿದ್ದರೆ, ಸಿಖ್ ಪೇಟದ ಬಗ್ಗೆ ಏನು? ಹಿಂದೂಗಳ ಹಣೆಯ ಗುರುತು? ಕ್ರಿಶ್ಚಿಯನ್ನರ ಶಿಲುಬೆಗೆ ಯಾಕೆ ಅನುಮತಿ ನೀಡಲಾಗಿದೆ ವಿದ್ಯಾರ್ಥಿನಿಯರನ್ನು ಒಳಗೆ ಬಿಡಿ,ಓದಲು ಬಿಡಿ, ವಸ್ತ್ರಧಾರಣೆಯ ನಿರ್ಧಾರ ಸಂತ್ರಸ್ಥರು ನಿರ್ಧರಿಸಲಿ ಎಂದು ತಿಳಿಸಿದ್ದಾರೆ.
ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದಕ್ಕೆ ಪ್ರತಿಯಾಗಿ ಹಿಂದು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಾಗ ಗೊಂದಲದ ವಾತಾವರಣ ಉಂಟಾಗಿತ್ತು. ತಕ್ಷಣವೇ ಕಾಲೇಜಿಗೆ ದೌಡಾಯಿಸಿದ್ದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಅವರು ಶಿಕ್ಷಣ ಸಚಿವರಿಗೆ ಕರೆ ಮಾಡಿ, ಅವರ ಸೂಚನೆಯಂತೆ ಹಿಜಾಬ್ ಧರಿಸದೆ ಕೇವಲ ಸಮವಸ್ತ್ರ ಧರಿಸಿದವರಿಗೆ ಮಾತ್ರ ಕಾಲೇಜು ಪ್ರವೇಶ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದರು. ಆದರೂ ಗುರುವಾರ 22 ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಕಾಲೇಜು ಪ್ರವೇಶಿಸಲು ಯತ್ನಿಸಿದರು. ಈ ವೇಳೆ ಅವರನ್ನು ಗೇಟಿನ ಬಳಿಯೇ ಕಾಲೇಜು ಪ್ರಾಂಶುಪಾಲರು, ಸಿಬ್ಬಂದಿ ತಡೆದರು. ಈ ವಿದ್ಯಾರ್ಥಿನಿಯರು ಮಧ್ಯಾಹ್ನವರೆಗೂ ಕಾಲೇಜಿನ ಗೇಟಿನ ಹೊರಗೆ ನಿಂತು ತಮ್ಮ ಪ್ರತಿಭಟನೆ ವ್ಯಕ್ತಪಡಿಸಿ, ಮನೆಗೆ ತೆರಳಿದ್ದಾರೆ.
ನಾವು ಅನೇಕ ತಿಂಗಳಿಂದ ಹಿಜಾಬ್ ಧರಿಸಿಕೊಂಡೇ ಕಾಲೇಜಿಗೆ ಬರುತ್ತಿದ್ದೇವೆ. ಈಗ ಏಕಾಏಕಿ ನಿರ್ಬಂಧ ಹೇರಿರುವುದು, ಶೈಕ್ಷಣಿಕ ವರ್ಷ ಮುಗಿಯಲು ತಿಂಗಳಿರುವಾಗ ತರಗತಿಗೆ ಪ್ರವೇಶ ನೀಡದಿರುವುದು ಸರಿಯಲ್ಲ, ನಮ್ಮ ಭವಿಷ್ಯದ ಬಗ್ಗೆ ಗಮನ ಹರಿಸಿ, ನಮ್ಮ ಧಾರ್ಮಿಕ ಹಕ್ಕಿನಂತೆ ಹಿಜಾಬ್ ಧರಿಸಿ ತರಗತಿಗೆ ಪ್ರವೇಶ ನೀಡಿ ಎಂದು ಆಗ್ರಹಿಸಿ, ಕಾಲೇಜಿನ ಗೇಟಿನ ಹೊರಗೆ ನಿಂತುಕೊಂಡಿದ್ದರು. (kpc)



