

ಹಿಜಾಬ್ Vs ಕೇಸರಿ: ರಾಜ್ಯಾದ್ಯಂತ ನಾಳೆಯಿಂದ ಮೂರು ದಿನ ಹೈಸ್ಕೂಲ್, ಕಾಲೇಜ್ ಗಳಿಗೆ ರಜೆ ಘೋಷಿಸಿದ ಸರ್ಕಾರ
ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ಇದೀಗ ರಾಜ್ಯಾದ್ಯಂತ ವ್ಯಾಪಿಸಿದ್ದು, ಹಲವು ಕಡೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರ್ಕಾರ ನಾಳೆಯಿಂದ…


ಬೆಂಗಳೂರು: ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ಇದೀಗ ರಾಜ್ಯಾದ್ಯಂತ ವ್ಯಾಪಿಸಿದ್ದು, ಹಲವು ಕಡೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರ್ಕಾರ ನಾಳೆಯಿಂದ ಮೂರು ದಿನ ಹೈಸ್ಕೂಲ್ ಹಾಗೂ ಕಾಲೇಜ್ ಗಳಿಗೆ ರಜೆ ಘೋಷಿಸಿದೆ.
ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ನಾನು ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಾಲಾ-ಕಾಲೇಜುಗಳ ಆಡಳಿತ ಮಂಡಳಿ ಹಾಗೂ ಕರ್ನಾಟಕದ ಜನತೆಗೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಕಾಲ ಎಲ್ಲಾ ಪ್ರೌಢಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ನೀಡಲು ನಾನು ಆದೇಶಿಸಿದ್ದೇನೆ. ಸಂಬಂಧಪಟ್ಟವರೆಲ್ಲರೂ ಸಹಕರಿಸಬೇಕಾಗಿ ವಿನಂತಿ ಎಂದು ಮುಖ್ಯಮಂತ್ರಿ ಬವಸರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದಾರೆ.

ರಾಜ್ಯದ ಹಲವು ಕಾಲೇಜುಗಳಲ್ಲಿ ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದ ಹೆಚ್ಚಾದ ಕಾರಣ ಮತ್ತು ಹೈಕೋರ್ಟ್ ನಲ್ಲಿ ವಿವಾದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ರಾಜ್ಯಾದ್ಯಂತ ಸರ್ಕಾರ ಹಾಗೂ ಖಾಸಗಿ ಪದವಿಪೂರ್ವ ಕಾಲೇಜ್ ಗಳಿಗೆ ಮೂರು ದಿನ ರಜೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರು ಹೇಳಿದ್ದಾರೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
