ಹಿಜಾಬ್‌ ಪರ ನ್ಯಾಯಾಧೀಶರು ಸೇರಿದಂತೆ 700ಕ್ಕೂ ಹೆಚ್ಚು ಜನರಿಂದ ಬಹಿರಂಗ ಪತ್ರ

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ ಸಿ ಎಸ್ ದ್ವಾರಕನಾಥ್, ಹೈಕೋರ್ಟ್ ನ ಇಬ್ಬರು ಮಾಜಿ ನ್ಯಾಯಾಧೀಶರು ಸೇರಿದಂತೆ 500 ವಕೀಲರು ಸೇರಿ 700ಕ್ಕೂ ಅಧಿಕ ಮಂದಿ ಸಂಬಂಧಪಟ್ಟವರಿಗೆ ಪತ್ರ ಬರೆದಿದ್ದಾರೆ.

Representational image

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ ಸಿ ಎಸ್ ದ್ವಾರಕನಾಥ್, ಹೈಕೋರ್ಟ್ ನ ಇಬ್ಬರು ಮಾಜಿ ನ್ಯಾಯಾಧೀಶರು ಸೇರಿದಂತೆ 500 ವಕೀಲರು ಸೇರಿ 700ಕ್ಕೂ ಅಧಿಕ ಮಂದಿ ಸಂಬಂಧಪಟ್ಟವರಿಗೆ ಪತ್ರ ಬರೆದಿದ್ದಾರೆ.

ಇವರು ಬರೆದಿರುವ ಪತ್ರದಲ್ಲಿ ಕರ್ನಾಟಕ ಹೈಕೋರ್ಟ್ ನ ಮಧ್ಯಂತರ ಆದೇಶದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು ಮುಸ್ಲಿಂ ಮಹಿಳೆಯರು ಮತ್ತು ಹುಡುಗಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡದಿರುವುದು ಅವರನ್ನು ಸಾರ್ವಜನಿಕವಾಗಿ ಅವಮಾನ ಮಾಡಿದಂತೆ ಎಂದು ಆಕ್ಷೇಪಿಸಿ ಸಹಿ ಹಾಕಿದ್ದಾರೆ.

ಶಾಲೆ-ಕಾಲೇಜುಗಳು ಪುನಾರಂಭವಾಗಿದ್ದು, ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಶಿಕ್ಷಕರು ಮತ್ತು ಆಡಳಿತ ಮಂಡಳಿ ಮುಸ್ಲಿಂ ವಿದ್ಯಾರ್ಥಿನಿಯರನ್ನು ಬುರ್ಖಾ, ಹಿಜಾಬ್ ತೆಗೆಯುವಂತೆ ಒತ್ತಾಯಿಸುತ್ತಿರುವ ವಿಡಿಯೊ ಮಾಧ್ಯಮಗಳಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ಯಥೇಚ್ಛವಾಗಿ ಹರಿದಾಡುತ್ತಿದೆ.

ಹಿಜಾಬ್ ನಿಷೇಧಕ್ಕೆ ಅವಕಾಶವಿಲ್ಲ: ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ಜೆಎಂ ಖಾಜಿ ಅವರ ಪೂರ್ಣ ಪೀಠದ ಮುಂದೆ ವಾದ ಮಂಡಿಸಿದ ಕುಮಾರ್, ಹಿಜಾಬ್ ಅನ್ನು ನಿಷೇಧಿಸಲು ಕಾನೂನಿನಲ್ಲಿ ಯಾವುದೇ ಅವಕಾಶವಿಲ್ಲ. ಬಳೆ, ಬಿಂದಿ, ಶಿಲುಬೆ, ಪೇಟ ಕೂಡ ಧಾರ್ಮಿಕ ಸಂಕೇತಗಳಾಗಿವೆ ಎಂದು ವಾದಿಸಿದರು.

“ಇವುಗಳನ್ನು ಧರಿಸುವುದರಿಂದ ಏಕರೂಪತೆಯನ್ನು ಮುರಿಯುವುದಿಲ್ಲವೇ? ಹಿಜಾಬ್ ಧರಿಸಿದ್ದಕ್ಕಾಗಿ ಈ ಬಡ ಮುಸ್ಲಿಂ ಹುಡುಗಿಯರನ್ನು ಮಾತ್ರ ಏಕೆ ಗುರಿಯಾಗಿಸಬೇಕು ಎಂದು ನ್ಯಾಯಪೀಠ ಮುಂದೆ ವಾದಿಸಿದರು. 

ಕರ್ನಾಟಕಕ್ಕೆ ಪ್ರತ್ಯೇಕ ಪೀಠ ಬೇಕಾಗಬಹುದು: ಸಿಜೆಐ
ಕರ್ನಾಟಕದಿಂದ ಸುಪ್ರೀಂ ಕೋರ್ಟ್‌ಗೆ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ಬರುತ್ತಿದ್ದು, ರಾಜ್ಯದ ವಿಷಯಗಳಿಗೆ ವಿಶೇಷ ಪೀಠವನ್ನು ರಚಿಸುವ ಅಗತ್ಯವಿದೆ ಎಂದು ಸಿಜೆಐ ಎನ್‌ವಿ ರಮಣ ಬುಧವಾರ ವ್ಯಂಗ್ಯದಿಂದ ಹೇಳಿದ್ದಾರೆ. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ರಾಜ್ಯದಲ್ಲಿ ಗಣಿಗಾರಿಕೆಯಿಂದ ಹಾನಿಗೊಳಗಾದವರಿಗೆ ಪರಿಹಾರಕ್ಕೆ ಸಂಬಂಧಿಸಿದ ಪ್ರಕರಣವನ್ನು ತುರ್ತು ಪಟ್ಟಿಗೆ ಕೋರಿದ ನಂತರ ಮುಖ್ಯ ನ್ಯಾಯಮೂರ್ತಿಗಳು ಹೀಗೆ ಹೇಳಿದ್ದಾರೆ. 

ಗಣಿಗಾರಿಕೆ ಸಂಬಂಧಪಟ್ಟಂತೆ ವಿಚಾರಣೆಗೆ ಪಟ್ಟಿ ಮಾಡಲಾಗುತ್ತಿದ್ದು, ಬಹುಶಃ ನಾವು ಕರ್ನಾಟಕದ ವಿಷಯಗಳಿಗೆ ಮಾತ್ರ ಪೀಠವನ್ನು ರಚಿಸಬೇಕಾಗಬಹುದು ಎಂದು ಸಿಜೆಐ ಪ್ರತಿಕ್ರಿಯಿಸಿದ್ದಾರೆ.‌ (ಕ.ಪ್ರ.ಡಾ.)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಜಾಗೃತೆ ವಾಹನ ಓಡಾಟ ಹೆಚ್ಚಿದೆ, ಮಂಗಗಳು ಸಾಯುತ್ತಿವೆ! ಸಾ. ಸಮ್ಮೇಳನ ಮುಗಿದು ಹೋದ ಮೇಲೆ……

ಉತ್ತರ ಕನ್ನಡ ಜಿಲ್ಲೆಯ ಸಾಹಿತ್ಯ- ಸಂಸ್ಕೃತಿ ಅಭಿವೃದ್ಧಿ ಬಗ್ಗೆ ಕ್ಷಕಿರಣ ಬೀರುವ ಉತ್ತರ ಕನ್ನಡ ಜಿಲ್ಲೆಯ ೨೪ ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿದೆ....

ಮನುಷ್ಯನ ಒಳಿತನ್ನೇ ಧ್ಯಾನಿಸುತ್ತಾ……‌

ಒಂದು ಅಪರೂಪದ ಡೊಳ್ಳಿನ ಸ್ಫರ್ಧೆ ನೋಡಿದೆ. ನಮ್ಮದೇ ತಾಲೂಕಿನ ಅರೆಹಳ್ಳದ ತಂಡ ಎಷ್ಟು ಸೊಗಸಾಗಿ ಡೊಳ್ಳು ನೃತ್ಯ ಕುಣಿಯಿತು! ಕೊಡಗಿಬೈಲ್‌ ಎಂಬ ಹಳ್ಳಿಯ ಒಕ್ಕಲಿಗ...

ಶಿಕಾರಿಪುರ ಪ್ರಥಮ, ಸಿದ್ಧಾಪುರ ದ್ವಿತೀಯ, ಸಾಗರ ತೃತೀಯ

ಸಿದ್ದಾಪುರದಲ್ಲಿ ನಡೆದ ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ರಾಜ್ಯ ಮಟ್ಟದ ಡೊಳ್ಳು ಕುಣಿತ ಸ್ಪರ್ಧೆಯಲ್ಲಿ ಬೀರಲಿಂಗೇಶ್ವರ ಡೊಳ್ಳಿನ ಸಂಘ ಅಂಬಾರಗೊಪ್ಪ ಶಿಕಾರಿಪುರ ಪ್ರಥಮ,ಸಿದ್ದಿವಿನಾಯಕ...

ಮಕ್ಕಳಿಗೆ ಆಸ್ತಿಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿಸಿ

ಮಕ್ಕಳಿಗೆ ಆಸ್ತಿ,ಆಭರಣ ಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾ ಗಿಸಿ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದ್ದಾರೆ. ಸಿದ್ಧಾಪುರ ಹಾಳದಕಟ್ಟಾ ಮತ್ತು ಕೊಳಗಿ ಪ್ರಾಥಮಿಕ ಶಾಲೆಗಳಲ್ಲಿ...

ಮಾಧ್ಯಮ ಪ್ರತಿನಿಧಿಗಳ ಸಂಘದ ಪದಾಧಿಕಾರಿಗಳ ಅಯ್ಕೆ

ಸಿದ್ದಾಪುರ: ತಾಲೂಕಿನಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದ ಮಾಧ್ಯಮ ಪ್ರತಿನಿಧಿಗಳ ಸಂಘ (ರಿ) ಸಿದ್ದಾಪುರ ದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಸಂಘದ ಅಧ್ಯಕ್ಷರಾಗಿ ಸಮಾಜಮುಖಿ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *